ಸಿಎಂ ಬಸವರಾಜ್ ಬೊಮ್ಮಾಯಿಗೆ ಕೋವಿಡ್ ದೃಢ, ದೆಹಲಿ ಪ್ರವಾಸ ಕ್ಯಾನ್ಸಲ್!

ಮುಖ್ಯಮಂತ್ರಿ ಬಸವರಾಜ್ ಬೊಮ್ಮಾಯಿಗೆ ಕೊರೊನಾ ಸೋಂಕು ದೃಢಪಟ್ಟಿದೆ. ಈ ಬಗ್ಗೆ ಸ್ವತಃ ಸಿಎಂ ಅವರೇ ಟ್ವೀಟ್ ಮೂಲಕ ಮಾಹಿತಿ ನೀಡಿದ್ದಾರೆ.ನನಗೆ ಇಂದು ಕೋವಿಡ್-19 ಸೋಂಕು ದೃಢಪಟ್ಟಿದ್ದು, ಆರೋಗ್ಯವಾಗಿ ಇದ್ದೇನೆ.
ನನ್ನ ಸಂಪರ್ಕಕ್ಕೆ ಬಂದವರು ದಯವಿಟ್ಟು ಕೋವಿಡ್ ಪರೀಕ್ಷೆ ಮಾಡಿಸಿಕೊಳ್ಳಿ. ನನ್ನ ದೆಹಲಿಯ ಪ್ರವಾಸ ರದ್ದಾಗಿರುತ್ತದೆ’ ಎಂದು ಬೊಮ್ಮಾಯಿ ಟ್ವೀಟ್ ಮಾಡಿದ್ದಾರೆ.ಇಂದು ದೆಹಲಿಗೆ ತೆರಳಬೇಕಿದ್ದ ಸಿಎಂಸಿಎಂ ಬಸವರಾಜ್ ಬೊಮ್ಮಾಯಿಯವರು ಶನಿವಾರದಿಂದ 2 ದಿನಗಳ ಕಾಲ ದೆಹಲಿ ಪ್ರವಾಸ ಕೈಗೊಳ್ಳಬೇಕಿತ್ತು.
ಸಂಪುಟ ವಿಸ್ತರಣೆ ಅಥವಾ ಪುನಾರಚನೆ ಬಗ್ಗೆ ಬಿಜೆಪಿ ವರಿಷ್ಠರ ಬಳಿ ಚರ್ಚಿಸುವ ಸಾಧ್ಯತೆ ಇತ್ತು. ಕೇಂದ್ರ ಗೃಹ ಸಚಿವ ಅಮಿತ್ ಶಾ ಬೆಂಗಳೂರು ಭೇಟಿ ವೇಳೆ ಸಿಎಂ ಬೊಮ್ಮಾಯಿ ಸಂಪುಟ ವಿಸ್ತರಣೆ ಬಗ್ಗೆ ಪ್ರಸ್ತಾಪಿಸಿದ್ದರಂತೆ. ಈ ಬಗ್ಗೆ ದೆಹಲಿಯಲ್ಲಿ ಚರ್ಚಿಸುವ ಬಗ್ಗೆ ಶಾ ತಿಳಿಸಿದ್ದರಂತೆ.ನನಗೆ ಇಂದು ಕೋವಿಡ್-19 ಸೋಂಕು ದೃಢಪಟ್ಟಿದ್ದು, ಆರೋಗ್ಯವಾಗಿ ಇದ್ದೇನೆ.
ನನ್ನ ಸಂಪರ್ಕಕ್ಕೆ ಬಂದವರು ದಯವಿಟ್ಟು ಕೋವಿಡ್ ಪರೀಕ್ಷೆ ಮಾಡಿಸಿಕೊಳ್ಳಿ. ನನ್ನ ದೆಹಲಿಯ ಪ್ರವಾಸ ರದ್ದಾಗಿರುತ್ತದೆ.ಸಿಎಂ ಬೊಮ್ಮಾಯಿ ದೆಹಲಿ ಪ್ರವಾಸ ಕೈಗೊಂಡಿದ್ದರೆ ಶನಿವಾರ ರಾಷ್ಟ್ರಪತಿ ಭವನದಲ್ಲಿ ಪ್ರಧಾನಿ ಮೋದಿ ಅಧ್ಯಕ್ಷತೆಯಲ್ಲಿ ನಡೆಯಲಿರುವ ‘ಅಜಾದಿ ಕಾ ಅಮೃತ್ ಮಹೋತ್ಸವ’ ಕಾರ್ಯಕ್ರಮದಲ್ಲಿ ಭಾಗವಹಿಸುತ್ತಿದ್ದರು.ಅಲ್ಲದೆ ಭಾನುವಾರ ನಡೆಯಲಿರುವ ನೀತಿ ಅಯೋಗದ ಸಭೆಯಲ್ಲಿಯೂ ಸಿಎಂ ಬೊಮ್ಮಾಯಿ ಭಾಗವಹಿಸಬೇಕಾಗಿತ್ತು.
ಆ.15ರ ಬಳಿಕ ರಾಜ್ಯ ಸಚಿವ ಸಂಪುಟ ವಿಸ್ತರಣೆ ಕುರಿತು ಪಕ್ಷದ ರಾಷ್ಟ್ರೀಯ ಅಧ್ಯಕ್ಷ ಜೆ.ಪಿ.ನಡ್ಡಾರವರ ಜೊತೆ ಚರ್ಚಿಸುವ ಸಾಧ್ಯತೆ ಇದೆ ಎಂಬ ಮಾತುಗಳು ಸಹ ಕೇಳಿಬಂದಿದ್ದವು.