ಸಿಎಂ, ಮಾಜಿ ಸಿಎಂಗಳಿಗೆ ಝಡ್ + ಭದ್ರತೆ

ವಿಧಾನಸಭೆಯ ಪ್ರತಿಪಕ್ಷ ನಾಯಕ ಸಿದ್ದರಾಮಯ್ಯ ಅವರಿಗೆ ಝಡ್ ಪ್ಲಸ್ ಶ್ರೇಣಿಯ ಭದ್ರತೆ ಕಲ್ಪಿಸಲಾಗಿದೆ. ಕೇವಲ ಸಿದ್ದರಾಮಯ್ಯನವರಿಗೆ ಮಾತ್ರವಲ್ಲ. ಮಾಜಿ ಮುಖ್ಯಮಂತ್ರಿಗಳಾದ ಬಿ.ಎಸ್. ಯಡಿಯೂರಪ್ಪ ಮತ್ತು ಎಚ್.ಡಿ. ಕುಮಾರಸ್ವಾಮಿ ಅವರಿಗೂ ಝಡ್ ಶ್ರೇಣಿಯ ಭದ್ರತೆ ಒದಗಿಸಲಾಗಿದೆ.
ಇದೇ ವೇಳೆ ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಅವರಿಗೂ ಝಡ್ ಪ್ಲಸ್ ಶ್ರೇಣಿಯ ಭದ್ರತೆ ಒದಗಿಸಿ, ಗೃಹ ಇಲಾಖೆ ಆದೇಶ ಹೊರಡಿಸಿದೆ.ಮೊನ್ನೆ ಮಳೆಯಿಂದ ಹಾನಿಗೀಡಾದ ಕೊಡಗು ಜಿಲ್ಲೆಯ ವಿವಿಧ ಪ್ರದೇಶಗಳಿಗೆ ತೆರಳಿದ ವೇಳೆ ಬಿಜೆಪಿ ಕಾರ್ಯಕರ್ತರಿಂದ ಮೊಟ್ಟೆ ಎಸೆದ ಪ್ರಕರಣದ ಬಗ್ಗೆ ತೀವ್ರ ಆಕ್ರೋಶ ವ್ಯಕ್ತವಾಗಿತ್ತು.
ಇದರ ಬೆನ್ನಲ್ಲೇ ಅವರಿಗೆ ವ್ಯಾಪಕ ಭದ್ರತೆ ಒದಗಿಸಲಾಗಿದೆ.ಸ್ವಾತಂತ್ರ್ಯ ದಿನಾಚರಣೆ ಸಂದರ್ಭದಲ್ಲಿ ಮುಸ್ಲಿಂರ ಪ್ರದೇಶದಲ್ಲಿ ಸ್ವಾತಂತ್ರ್ಯ ಹೋರಾಟಗಾರ ಸಾರ್ವಕರ್ ಅವರ ಭಾವಚಿತ್ರ ಏಕೆ ಹಾಕಲಾಯಿತು ಎಂದು ಸಿದ್ದರಾಮಯ್ಯ ಅವರು ವಿವಾದಾಸ್ಪದ ಹೇಳಿಕೆ ನೀಡಿದ್ದರು. ಈ ಹೇಳಿಕೆಗೆ ಬಿಜೆಪಿ ಕಾರ್ಯಕರ್ತರು ಆಕ್ರೋಶ ವ್ಯಕ್ತಪಡಿಸಿ ಕೊಡಗು ಜಿಲ್ಲಾ ಪ್ರವಾಸ ವೇಳೆ ಮೊಟ್ಟೆ ತೋರಿದ್ದರು.
ಈ ಪ್ರಕರಣ ಕಾಂಗ್ರೆಸ್ ಹಾಗೂ ಬಿಜೆಪಿ ನಡುವಣ ವ್ಯಾಪಕ ಜಟಾಪಟಿಗೆ ಕಾರಣವಾಗಿತ್ತು.ಕೊಡಗಿನಲ್ಲಿ ಮೊಟ್ಟೆ ಎಸೆದ ಪ್ರಕರಣದ ನಂತರ ಸಿದ್ದರಾಮಯ್ಯನವರಿಗೆ ಎಸ್ಕಾರ್ಟ್ ಹೆಚ್ಚಿಸಲಾಗಿದೆ. ಅಧಿಕಾರಿಗಳು, ಸಿಬ್ಬಂದಿ ಸೇರಿದಂತೆ ೨೧ ಮಂದಿಯನ್ನು ಭದ್ರತೆಗಾಗಿ ನಿಯೋಜಿಸಲಾಗಿದೆ.ಈ ಸಿಬ್ಬಂದಿಗಳು ಮೂರು ಪಾಳಿಯಲ್ಲಿ ನಿರಂತರವಾಗಿ ಕಾರ್ಯ ನಿರ್ವಹಿಸಬೇಕು.
ಅವರು ಎಲ್ಲಿ ಹೋದರು ಮುನ್ನೆಚ್ಚರಿಕೆ ವಹಿಸುವಂತೆ ಪ್ರತಿಯೊಬ್ಬ ಸಿಬ್ಬಂದಿಗೂ ಸೂಚನೆ ನೀಡಲಾಗಿದೆ.ಬೆಂಗಳೂರಿನಿಂದ ಹೊರ ಹೋಗುವ ವೇಳೆ ರಾಷ್ಟ್ರೀಯ ಹೆದ್ದಾರಿಯಲ್ಲಿ ಕಾವಲು, ಸ್ಥಳೀಯ ಪೊಲೀಸರು ಭದ್ರತೆಗಾಗಿ ಹೆಚ್ಚಿನ ಪೊಲೀಸರು ಜವಾಬ್ದಾರಿ ತೆಗೆದುಕೊಳ್ಳಬೇಕು ಗೃಹ ಇಲಾಖೆ ನೀಡಿದೆ.ಜಿಲ್ಲಾ ಪ್ರವಾಸದ ವೇಳೆ ಸಂದರ್ಭಾನುಸಾರ ಸಿಬ್ಬಂದಿ ಹೆಚ್ಚಳ ಮಾಡಲು ಹಿರಿಯ ಅಧಿಕಾರಿಗಳಿಗೆ ಸೂಚನೆ ನೀಡಲಾಗಿದೆ.
ಸಾರ್ವಕರ್ ಭಾವಚಿತ್ರ ಅಳವಡಿಕೆ ವಿಚಾರದಲ್ಲಿ ಕಾಂಗ್ರೆಸ್ ಮತ್ತು ಬಿಜೆಪಿ ನಡುವಣ ಪ್ರತಿಭಟನೆಗಳು ತೀವ್ರಗೊಂಡಿವೆ. ಮೊಟ್ಟೆ ತೋರಿದ ಪ್ರಕರಣಕ್ಕೆ ಸಂಬಂಧಿಸಿದಂತೆ ಈ ತಿಂಗಳ ೨೬ ರಂದು ಕೊಡಗು ಜಿಲ್ಲೆ ಎಸ್ಪಿ ಕಚೇರಿಗೆ ಮುತ್ತಿಗೆ ಹಾಕಲು ಕಾಂಗ್ರೆಸ್ ತೀರ್ಮಾನಿಸಿದೆ.
ಸಿದ್ದರಾiಯ್ಯನವರು ಎಸ್ಪಿ ಕಚೇರಿಗೆ ಮುತ್ತಿಗೆ ಕಾರ್ಯಕ್ರಮದಲ್ಲಿ ಭಾಗವಹಿಸಿದ್ದು ಅವರಿಗೆ ಹೆಚ್ಚಿನ ಭದ್ರತೆ ಕಲ್ಪಿಸಲು ಸರ್ಕಾರ ನಿರ್ಧಾರ ಕೈಗೊಂಡಿದೆ.ಕೈ ಕಚೇರಿಯಲ್ಲಿ ಸಾರ್ವಕರ್ ಫೋಟೋಸಾರ್ವಕರ್ ವಿವಾದ ಭಾರಿ ಸಂಚಲನ ಸೃಷ್ಠಿಸಿರುವ ಬೆನ್ನಲ್ಲೇ ಕಾಂಗ್ರೆಸ್ ಕಚೇರಿಗೆ ಅಪರಿಚಿತ ವ್ಯಕ್ತಿಯೊಬ್ಬ ಸಾರ್ವಕರ್ ಫೋಟೋ ಅಂಟಿಸಿರುವುದು ವಿವಾದಕ್ಕೆ ಕಾರಣವಾಗಿದೆ.
ಅಪರಿಚಿತ ವ್ಯಕ್ತಿಗಳು ತಡರಾತ್ರಿ ಕಾಂಗ್ರೆಸ್ ಕಚೇರಿಯ ಪ್ರವೇಶ ದ್ವಾರ, ಕಿಟಕಿ ಹಾಗೂ ಗೋಡೆ ಸೇರಿದಂತೆ ವಿವಿಧ ಕಡೆಗಳಲ್ಲಿ ಸಾರ್ವಕರ್ ಫೋಟೋ ಅಂಟಿಸಿದ್ದಾರೆ.ವಿಷಯ ತಿಳಿಯುತ್ತಿದ್ದಂತೆ ಕಾಂಗ್ರೆಸ್ ಕಚೇರಿ ಆಗಮಿಸುತ್ತಿದ್ದ ಪೊಲೀಸರು ಸಾರ್ವಕರ್ ಫೋಟೋ ತೆರವುಗೊಳಿಸಿದ್ದಾರೆ.