ಅಪರಾಧ

ಸಿಗರೇಟು ಸೇದುತ್ತಿರುವ ಮಹಾಕಾಳಿ..! ವಿವಾದ ಎಬ್ಬಿಸಿದೆ ಚಿತ್ರದ ಪೋಸ್ಟರ್

Crime

ಇತ್ತೀಚೆಗೆ ಸಾಕ್ಷ್ಯಚಿತ್ರವೊಂದರ ಪೋಸ್ಟರ್ ಬಿಡುಗಡೆ ಮಾಡಲಾಗಿದ್ದು, ಅದರಲ್ಲಿ ಮಹಾ ಕಾಳಿಯ ಫೋಟೋವನ್ನು ತೋರಿಸಲಾಗಿದೆ. ಈ ಪೋಸ್ಟರ್ ನಲ್ಲಿ ದೇವಿಯ ಚಿತ್ರೀಕರಿಸಿರುವ ರೀತಿ ಇದೀಗ ವಿವಾದಕ್ಕೆ ಕಾರಣವಾಗಿದೆ. ಈ ಪೋಸ್ಟರ್ ಬಿಡುಗಡೆಯಾಗುತ್ತಿದ್ದಂತೆಯೇ ಈ ಸಾಕ್ಷ್ಯಚಿತ್ರದ ನಿರ್ದೇಶಕರನ್ನು ಬಹಿಷ್ಕರಿಸುವಂತೆ ಜನ ಆಗ್ರಹಿಸುತ್ತಿದ್ದಾರೆ.

ಕೇಳಿ ಬಂದಿದೆ ಲೀನಾ ಬಂಧನದ ಆಗ್ರಹ : ಇತ್ತೀಚಿನ ದಿನಗಳಲ್ಲಿ ಭಾರತೀಯ ಚಲನಚಿತ್ರ ನಿರ್ಮಾಪಕಿ ಲೀನಾ ಮಣಿಮೇಕಲೈ ಅವರನ್ನು ಸಾಮಾಜಿಕ ಮಾಧ್ಯಮದಲ್ಲಿ ಸಾಕಷ್ಟು ಟ್ರೋಲ್ ಮಾಡಲಾಗುತ್ತಿದೆ. ಇತ್ತೀಚೆಗಷ್ಟೇ ಲೀನಾ ಮಣಿಮೇಕಲೈ ಅವರ ಸಾಕ್ಷ್ಯಚಿತ್ರದ ಪೋಸ್ಟರ್ ಹೊರಬಂದಿದ್ದು, ಇದರಿಂದ ಜನರ ಭಾವನೆಗಳಿಗೆ ಧಕ್ಕೆಯಾಗಿದೆ. ಈ ಹಿನ್ನೆಲೆಯಲ್ಲಿ ಲೀನಾ ಬಂಧಿಸುವಂತೆ ಒತ್ತಾಯ ಕೇಳಿ ಬಂದಿದೆ. #arrestleenamanimekalai ಟ್ವಿಟ್ಟರ್‌ನಲ್ಲಿ ಟ್ರೆಂಡಿಂಗ್ ಆಗುತ್ತಿದೆ.

ಮಹಾ ಕಾಳಿ ಕೈಯಲ್ಲಿ ಸಿಗರೇಟು :ಜುಲೈ 02 ರಂದು ಚಲನಚಿತ್ರ ನಿರ್ಮಾಪಕಿ ಲೀನಾ ಮಣಿಮೇಕಲೈ ಅವರು ತಮ್ಮ ಸಾಕ್ಷ್ಯಚಿತ್ರ ‘ಕಾಳಿ’ ಯ ಪೋಸ್ಟರ್ ಅನ್ನು ಶೇರ್ ಮಾಡಿದ್ದಾರೆ. ಈ ಪೋಸ್ಟರ್ ಅನ್ನು ಹಂಚಿಕೊಳ್ಳುವಾಗ, ಈ ಸಾಕ್ಷ್ಯಚಿತ್ರವನ್ನು ಕೆನಡಾ ಫಿಲ್ಮ್ಸ್ ಫೆಸ್ಟಿವಲ್ ಬಿಡುಗಡೆ ಮಾಡಲಾಗಿರುವುದಾಗಿಯೂ ತಿಳಿಸಿದ್ದಾರೆ. ಲೀನಾ ತಮ್ಮ ಸಾಕ್ಷ್ಯಚಿತ್ರಕ್ಕೆ ‘ಕಾಳಿ ‘ ಎಂದು ಹೆಸರಿಟ್ಟಿದ್ದಾರೆ. ಸೋಷಿಯಲ್ ಮೀಡಿಯಾದಲ್ಲಿ ಹಂಚಿಕೊಂಡಿರುವ ಪೋಸ್ಟರ್‌ನಲ್ಲಿ ಮಹಾ ಕಾಳಿ ಕೈಯಲ್ಲಿ ಸಿಗರೇಟ್ ಇರುವುದನ್ನು ಕಾಣಾಬಹುದು. ಅಷ್ಟೇ ಅಲ್ಲ, ಈ ಪೋಸ್ಟರ್‌ನಲ್ಲಿ ಕಾಳಿಯ ಒಂದು ಕೈಯಲ್ಲಿ ತ್ರಿಶೂಲ ಮತ್ತು ಇನ್ನೊಂದು ಕೈಯಲ್ಲಿ LGBTQ ಸಮುದಾಯದ ಧ್ವಜ ಕೂಡ ಕಾಣಿಸುತ್ತದೆ.

ಈ ಪೋಸ್ಟರ್‌ನಲ್ಲಿ ಮಹಾ ಕಾಳಿ ಸಿಗರೇಟ್ ಸೇದುತ್ತಿರುವುದನ್ನು ನೋಡಿ, ಜನ ಆಕ್ರೋಶಗೊಂಡಿದ್ದಾರೆ. ಸಾಮಾಜಿಕ ಜಾಲತಾಣದಲ್ಲಿ ಲೀನಾ ವಿರುದ್ಧ ಹರಿಹಾಯ್ದಿದ್ದಾರೆ. ಧಾರ್ಮಿಕ ಭಾವನೆಗಳಿಗೆ ಧಕ್ಕೆ ತಂದಿರುವ ಆರೋಪವೂ ಲೀನಾ ಮೇಲಿದೆ. ಈ ಕಾರಣಕ್ಕಾಗಿ ಟ್ವಿಟ್ಟರ್ ನಲ್ಲಿ #arrestleenamanimekalai ಟ್ರೆಂಡ್ ಆರಂಭವಾಗಿದೆ.

Antony Raju A

Ncibtimesmedia Web Portal Director & national executive officer Contact:9482289151 Gmail: antonyraju166@gmail.com

Related Articles

Leave a Reply

Your email address will not be published. Required fields are marked *

Back to top button