ಬೆಂಗಳೂರು
ಸುಧಾಮ ನಗರದಲ್ಲಿ ಸ್ವಾತಂತ್ರ್ಯೋತ್ಸವ ಸಂಭ್ರಮ

75 ನೆಯ ಸ್ವಾತಂತ್ರ್ಯದ ಅಮೃತ ಮಹೋತ್ಸವದ ಅಂಗವಾಗಿ ಸಮಾಜ ಸೇವಕರಾದ ಗಜೇಂದ್ರ ಪ್ರಸಾದ್ ಅವರ ನೇತೃತ್ವದಲ್ಲಿ ಸ್ವಾತಂತ್ರ್ಯ ದಿನಾಚರಣೆಯನ್ನು ವಾರ್ಡ್ ನಂಬರ್ 145 ಸುಧಾಮ ನಗರದಲ್ಲಿ ಅದ್ದೂರಿಯಾಗಿ ಆಚರಿಸಲಾಯಿತು.
ಕಾರ್ಯಕ್ರಮದಲ್ಲಿ ಮಾಜಿ ಬಿಬಿಎಂಪಿ ಸದಸ್ಯರಾದ ಟಿವಿ ಪ್ರಭು ಹಾಗೂ ರಾಜಶೇಖರ್ ಸಮಾಜ ಸೇವಕರು ಸುಧಾಮನಗರ ನಾಗರಿಕರು ಉಪಸ್ಥಿತರಿದ್ದರು.
ಕಾರ್ಯಕ್ರಮದ ಅಂಗವಾಗಿ ಶಾಲಾ ಮಕ್ಕಳಿಗೆ ನೋಟ್ ಪುಸ್ತಕ ಪೆನ್ನು ಪೆನ್ಸಿಲ್ ಮತ್ತು ಸಿಹಿಯನ್ನು ಹಂಚಲಾಯಿತು.
ಸ್ವಾತಂತ್ರ್ಯ ದಿನಾಚರಣೆಯನ್ನು ಮಕ್ಕಳು ಯುವಕರು ಎಲ್ಲರೂ ಸಂಭ್ರಮದಿಂದ ಆಚರಿಸಿದರು.
ವರದಿ ಪಿ ಲೋಕೇಶ್