ಸೆಲ್ಫಿ ವಿಡಿಯೋ ಮಾಡಿಟ್ಟು ಯುವಕ ಆತ್ಮಹತ್ಯೆ

ಸೆಲ್ಫಿ ವಿಡಿಯೋ ಮಾಡಿಟ್ಟು ಯುವಕ ಆತ್ಮಹತ್ಯೆ ಮಾಡಿಕೊಂಡ ಘಟನೆ ಸಿಲಿಕಾನ್ ಸಿಟಿಯಲ್ಲಿ ಜರುಗಿದೆ. ಹಾಸನ ಜಿಲ್ಲೆಯ ಅರಸಿಕೆರೆಯ ನಿವಾಸಿ ಮೃತ ಯುವಕ ಎಂದು ತಿಳಿದುಬಂದಿದೆ.
ಪ್ರೀತಿಸಿ ಮೋಸ ಹೋಗಿದಕ್ಕೆ ವಿಷ ಕುಡಿದು ಯುವಕ ಆತ್ಮಹತ್ಯೆ ಮಾಡಿಕೊಂಡಿದ್ದಾನೆಂದು ಹೇಳಲಾಗುತ್ತಿದೆ. ಕೆಲ ವರ್ಷಗಳಿಂದ ಈ ಯುವಕ, ಕುಟುಂಬ ಸಮೇತ ಬೆಂಗಳೂರಿನಲ್ಲಿ ವಾಸವಿದ್ದ.
ಮೃತ ಯುವಕ ಮತ್ತು ಕುಟುಂಬಸ್ಥರು ಗಾರ್ಮೆಂಟ್ಸ್ ನಲ್ಲಿ ಕೆಲಸ ಮಾಡುತ್ತಿದ್ದರು.ಅದೇ ಗಾರ್ಮೆಂಟ್ಸ್ ನಲ್ಲಿ ಯುವತಿಯೊಬ್ಬಳ ಪರಿಚಯವಾಗಿತ್ತು. ಇಬ್ಬರು ಸಹ ಕೆಲ ವರ್ಷಗಳ ಕಾಲ ಪರಸ್ಪರ ಪ್ರೀತಿಸಿದ್ದಾರೆ.
ನಂತರ ಮನೆಯ ಕಾರಣ ನೀಡಿ ಯುವತಿ ಈತನಿಂದ ದೂರವಾಗಿದ್ದಾಳೆ. ಇದರಿಂದ ಮನನೊಂದು ಯುವಕ, ಆತ್ಮಹತ್ಯೆ ಮಾಡಿಕೊಂಡಿದ್ದಾನೆ ಎನ್ನಲಾಗಿದೆ.ಶಿವಮೊಗ್ಗ ಬಳಿಯ ಸೊರಬ ತಾಲ್ಲೂಕಿನ ಒಂದು ಗ್ರಾಮದಲ್ಲಿ ಯುವತಿಯ ಮನೆಯಿದ್ದು, ಅದೇ ಗ್ರಾಮದ ಕೆರೆ ಏರಿ ಮೇಲೆ ವಿಷ ಕುಡಿದು ಯುವಕ ಆತ್ಮಹತ್ಯೆ ಮಾಡಿಕೊಂಡಿದ್ದಾನೆ.
ಸೆಲ್ಫಿ ವಿಡಿಯೋ ಮಾಡಿಟ್ಟು ಯುವಕ ಆತ್ಮಹತ್ಯೆ ಮಾಡಿಕೊಂಡಿದ್ದು, ಈ ವಿಡಿಯೋ ಇದೀಗ ಎಲ್ಲೆಡೆ ವೈರಲ್ ಆಗುತ್ತಿದೆ. ಸೊರಬ ಪೊಲೀಸ್ ಠಾಣೆಯಲ್ಲಿ ಈ ಕುರಿತು ಪ್ರಕರಣ ದಾಖಲಾಗಿದೆ.