ಸೆ.26ರಿಂದ ಮೈಸೂರು ದಸರಾ ವಸ್ತುಪ್ರದರ್ಶನ, ಪುನೀತ್ ನೆನಪಿಗೆ ಸ್ಯಾಂಡ್ ಮ್ಯೂಸಿಯಂ

ವಿಶ್ವ ವಿಖ್ಯಾತ ಮೈಸೂರು ದಸರಾ ಮಹೋತ್ಸವಕ್ಕೆ ಒಂದೂವರೆ ತಿಂಗಳ ಮುಂಚೆಯೇ ಸಕಲ ಸಿದ್ಧತೆ ಮಾಡಲಾಗುತ್ತಿದ್ದು, ಈ ನಡುವೆ ಸೆಪ್ಟಂಬರ್ 26 ರಿಂದ ಈ ಬಾರಿ ದಸರಾ ವಸ್ತುಪ್ರದರ್ಶನ ಪ್ರಾರಂಭವಾಗಲಿದೆ. ಈ ಬಾರಿಯ ವಸ್ತುಪ್ರದರ್ಶನ ಹಲವು ವೈಶಿಷ್ಟ್ಯತೆಗೆ ಸಾಕ್ಷಿಯಾಗಲಿದೆ.
ಈ ಕುರಿತು ಸುದ್ದಿಗೋಷ್ಟಿಯಲ್ಲಿ ಮಾತನಾಡಿ ಮಾಹಿತಿ ನೀಡಿದ ಕರ್ನಾಟಕ ವಸ್ತುಪ್ರದರ್ಶನ ಪ್ರಾಧಿಕಾರದ ಅಧ್ಯಕ್ಷ ಮಿರ್ಲೆ ಶ್ರೀನಿವಾಸಮೂರ್ತಿ, ವಿಶೇಷ ಕಾರ್ಯಕ್ರಮಗಳೊಂದಿಗೆ 90 ದಿನಗಳ ಕಾಲ ವಸ್ತುಪ್ರದರ್ಶನ ಆಯೋಜನೆ ಮಾಡಲಾಗಿದೆ.
ಈ ಬಾರಿಯ ವಸ್ತುಪ್ರದರ್ಶನದಲ್ಲಿ ಪುನೀತ್ ರಾಜ್ಕುಮಾರ್ ನೆನಪಿಗಾಗಿ 7 ಸ್ಯಾಂಡ್ ಮ್ಯೂಸಿಯಂ ಆಯೋಜನೆ ಮಾಡಲಾಗಿದೆ, ಯೋಗ 3ಡಿ ವಿಡಿಯೋ ಮ್ಯಾಪಿಂಗ್ ಇರಲಿದೆ ಎಂದರು.
ಹಾಗೆಯೇ ಆವರಣದಲ್ಲಿ ವೆಜ್ ಅಂಡ್ ನಾನ್ ವೆಜ್ ಪ್ರತ್ಯೇಕ ಸ್ಟಾಲ್ ಇರಲಿದೆ. 6 ಮಂದಿ ಸ್ವಾತಂತ್ರ್ಯ ಹೋರಾಟಗಾರರ ಮರಳಾಕೃತಿ ನಿರ್ಮಿಸಲಾಗುತ್ತದೆ, ಆ 6 ಮಂದಿ ಸ್ವಾತಂತ್ರ್ಯ ಹೋರಾಟಗಾರರನ್ನು ಇನ್ನು ಆಯ್ಕೆ ಮಾಡಿಲ್ಲ. ಕಾವೇರಿ ಬಹುಮಾಧ್ಯಮ ಕಲಾ ಗ್ಯಾಲರಿ ಉದ್ಘಾಟನೆಯಾಗಲಿದೆ.
ವಸ್ತುಪ್ರದರ್ಶನದ ಅವರಣವನ್ನು ಪ್ಲಾಸ್ಟಿಕ್ ಮುಕ್ತ ವಲಯ ಎಂದು ಘೋಷಣೆ ಹಿನ್ನೆಲೆ ಪ್ಲಾಸ್ಟಿಕ್ ಬಳಸುವಂತಿಲ್ಲ. ಪ್ಲಾಸ್ಟಿಕ್ ಬಳಕೆ ತಡೆಗಟ್ಟಲು ಪ್ರಾಧಿಕಾರದ ವತಿಯಿಂದಲೇ ಆರ್ ಓ ಪ್ಲಾಂಟ್ ಮೂಲಕ ಕುಡಿಯುವ ನೀರಿನ ವ್ಯವಸ್ಥೆ ಮಾಡಲಾಗುತ್ತದೆ.
ಎರಡು ವರ್ಷಗಳ ಕೋವಿಡ್ ಬಳಿಕ ಅದ್ದೂರಿ ವಸ್ತು ಪ್ರದರ್ಶನ ನಡೆಯುತ್ತಿದ್ದು, ಈ ಹಿನ್ನೆಲೆ ಹೆಚ್ಚಿನ ಸಂಖ್ಯೆಯಲ್ಲಿ ಪ್ರವಾಸಿಗರು, ನಗರದ ಜನತೆ ಆಗಮಿಸುವಂತೆ ಮಿರ್ಲೆ ಶ್ರೀನಿವಾಸ್ ಗೌಡ ಮನವಿ ಮಾಡಿದ್ದಾರೆ.
ಅಪ್ಪು ಜತೆಗಿನ ಮೂರ್ತಿಗೆ ಡಿಮ್ಯಾಂಡ್ಪುನೀತ್ ರಾಜ್ಕುಮಾರ್ ಅವರ ಅಕಾಲಿಕ ನಿಧನದ ಆಘಾತದಿಂದ ಅಭಿಮಾನಿಗಳು ಇಂದಿಗೂ ಹೊರಬಂದಿಲ್ಲ. ಅವರ ಅಭಿಮಾನಿಗಳು ಗಣಪತಿ ಮೂರ್ತಿ ತಯಾರು ಮಾಡುವವರಿಗೆ ಅಪ್ಪು ಜತೆಗೆ ಗಣಪ ಇರುವ ಮೂರ್ತಿಗಳನ್ನು ಮಾಡಿಕೊಂಡುವಂತೆ ಬೇಡಿಕೆ ಇಡುತ್ತಿದ್ದಾರೆ.