
ಕರ್ನಾಟಕ ದಕ್ಷಿಣ ಪದವೀಧರ ಕ್ಷೇತ್ರ ವಾಯುವ್ಯ ಪದವೀಧರ ಕ್ಷೇತ್ರ, ಪಶ್ಚಿಮ ಶಿಕ್ಷಕರ ಕ್ಷೇತ್ರ ಹಾಗೂ ವಾಯುವ್ಯ ಶಿಕ್ಷಕ ಕ್ಷೇತ್ರದಿಂದ ವಿಧಾನಪರಿಷತ್‍ಗೆ ನಡೆಯುವ ದ್ವೈವಾರ್ಷಿಕ ಚುನಾವಣೆಯ ಮತದಾನ ಸೋಮವಾರ ನಡೆಯಲಿದೆ. ವಿಧಾನಪರಿಷತ್‍ನ ಮಾಜಿ ಸಭಾಪತಿ ಬಸವರಾಜ ಹೊರಟ್ಟಿ ಸೇರಿದಂತೆ ಚುನಾವಣಾ ಕಣದಲ್ಲಿ 49 ಅಭ್ಯರ್ಥಿಗಳಿದ್ದಾರೆ. ಜೂ.13ರಂದು ಬೆಳಗ್ಗೆ 8 ಗಂಟೆಯಿಂದ ಸಂಜೆ 4 ಗಂಟೆವರೆಗೆ ಮತದಾನ ನಡೆಯಲಿದೆ.
ಆದರೆ ದಕ್ಷಿಣ ಪದವೀಧರ ಕ್ಷೇತ್ರಕ್ಕೆ ಮಾತ್ರ ಬೆಳಗ್ಗೆ 8ರಿಂದ ಸಂಜೆ 5 ಗಂಟೆವರೆಗೆ ಮತದಾನ ಮಾಡಲು ಚುನಾವಣಾ ಆಯೋಗ ಅವಕಾಶ ಮಾಡಿಕೊಟ್ಟಿದೆ. ಜುಲೈ 4ರಂದು ವಿಧಾನಪರಿಷತ್ ಸದಸ್ಯರಾದ ನಿರಾಣಿ ಹಣಮಂತ ರುದ್ರಪ್ಪ, ಕೆ.ಟಿ.ಶ್ರೀಕಂಠೇಗೌಡ, ಅರುಣ್ ಶಹಾಪುರ, ಬಸವರಾಜ ಹೊರಟ್ಟಿ ಅವರು ನಿವೃತ್ತಿಯಾಗಲಿದ್ದು, ನಿವೃತ್ತಿಯಿಂದ ತೆರವಾಗುವ ಈ ನಾಲ್ಕು ಸ್ಥಾನಗಳಿಗೆ ಚುನಾವಣೆ ನಡೆಯುತ್ತಿದೆ.ವಿಧಾನಸಭೆಯಿಂದ ವಿಧಾನಪರಿಷತ್ ಹಾಗೂ ರಾಜ್ಯಸಭೆಗೆ ಚುನಾವಣೆ ನಡೆದ ಬೆನ್ನಲ್ಲೇ ಮತ್ತೊಂದು ಮೇಲ್ಮನೆ ಚುನಾವಣೆ ಎದುರಾಗಿದೆ. ವಿಧಾನಪರಿಷತ್ ಹಾಗೂ ರಾಜ್ಯಸಭೆ ಚುನಾವಣೆಯಲ್ಲಿ ಬಿಜೆಪಿ ಸಿಂಹಪಾಲು ಪಡೆದಿದೆ.
ಪದವೀಧರ ಹಾಗೂ ಶಿಕ್ಷಕರ ಕ್ಷೇತ್ರದಿಂದ ನಡೆಯುವ ಈ ಚುನಾವಣೆಯಲ್ಲೂ ಮೂರು ರಾಜಕೀಯ ಪಕ್ಷಗಳ ನಡುವೆ ತೀವ್ರ ಪೈಪೆÇೀಟಿ ಏರ್ಪಟ್ಟಿದೆ.ವಾಯುವ್ಯ ಪದವೀಧರ ಕ್ಷೇತ್ರದಲ್ಲಿ ಜೆಡಿಎಸ್ ಸ್ಪರ್ಧೆ ಮಾಡಿಲ್ಲ. ಉಳಿದ ಮೂರು ಕ್ಷೇತ್ರಗಳಲ್ಲೂ ಸ್ರ್ಪಸಿದೆ. ರಾಷ್ಟ್ರೀಯ ಪಕ್ಷಗಳಾದ ಕಾಂಗ್ರೆಸ್ ಮತ್ತು ಬಿಜೆಪಿ ನಾಲ್ಕೂ ಕ್ಷೇತ್ರಗಳಲ್ಲಿ ತಮ್ಮ ಅಭ್ಯರ್ಥಿಗಳನ್ನು ಸ್ಪರ್ಧೆಗಿಳಿಸಿವೆ.ದಕ್ಷಿಣ ಪದವೀಧರ ಕ್ಷೇತ್ರದಲ್ಲಿ ಕಾಂಗ್ರೆಸ್‍ನಿಂದ ಮಧು.ಜಿ ಮಾದೇಗೌಡ, ಬಿಜೆಪಿಯಿಂದ ಮೈ.ವಿ.ರವಿಶಂಕರ್, ಜೆಡಿಎಸ್‍ನಿಂದ ಎಚ್.ಕೆ.ರಾಮು, ಕನ್ನಡ ಚಳುವಳಿ ವಾಟಾಳ್ ಪಕ್ಷದಿಂದ ವಾಟಾಳ್ ನಾಗರಾಜ್ ಅಭ್ಯರ್ಥಿಗಳಾಗಿ ಸ್ರ್ಪಸಿದ್ದಾರೆ. ಈ ಕ್ಷೇತ್ರದಲ್ಲಿ ಒಟ್ಟು 19 ಅಭ್ಯರ್ಥಿಗಳು ಚುನಾವಣಾ ಕಣದಲ್ಲಿದ್ದಾರೆ. ವಾಯುವ್ಯ ಪದವೀಧರ ಕ್ಷೇತ್ರದಲ್ಲಿ ಕಾಂಗ್ರೆಸ್‍ನಿಂದ ಸುನೀಲ ಅಣ್ಣಪ್ಪ ಸಂಕ, ಬಿಜೆಪಿಯಿಂದ ನಿರಾಣಿ ಹಣಮಂತ ರುದ್ರಪ್ಪ ಸೇರಿದಂತೆ 11 ಅಭ್ಯರ್ಥಿಗಳು ಚುನಾವಣಾ ಕಣದಲ್ಲಿದ್ದಾರೆ.
ವಾಯುವ್ಯ ಶಿಕ್ಷಕರ ಕ್ಷೇತ್ರದಲ್ಲಿ ಬಿಜೆಪಿಯಿಂದ ಅರುಣಾ ಶಹಾಪುರ, ಕಾಂಗ್ರೆಸ್‍ನಿಂದ ಪ್ರಕಾಶ ಬಾಬಣ್ಣ ಹುಕ್ಕೇರಿ, ಜೆಡಿಎಸ್‍ನಿಂದ ಚಂದ್ರಶೇಖರ ಏಸಪ್ಪ ಲೋಣಿ ಸೇರಿದಂತೆ 12 ಅಭ್ಯರ್ಥಿಗಳು ಸ್ಪರ್ಧೆಗಿಳಿದಿದ್ದಾರೆ. ಪಶ್ಚಿಮ ಶಿಕ್ಷಕರ ಕ್ಷೇತ್ರದಲ್ಲಿ ಬಿಜೆಪಿಯಿಂದ ವಿಧಾನಪರಿಷತ್ ಮಾಜಿ ಸಭಾಪತಿ ಬಸವರಾಜ ಹೊರಟ್ಟಿ, ಕಾಂಗ್ರೆಸ್‍ನಿಂದ ಬಸವರಾಜ ಗುರಿಕಾರ, ಜೆಡಿಎಸ್‍ನಿಂದ ಶ್ರೀಶೈಲ ಗಡದಿಮ್ಮಿ ಸೇರಿದಂತೆ 7 ಮಂದಿ ಅಭ್ಯರ್ಥಿಗಳು ಚುನಾವಣಾ ಕಣದಲ್ಲಿದ್ದಾರೆ.
ಹೀಗಾಗಿ ಕಾಂಗ್ರೆಸ್-ಬಿಜೆಪಿ, ಜೆಡಿಎಸ್ ಪಾಲಿಗೆ ಈ ಮೇಲ್ಮನೆ ಚುನಾವಣೆ ಪ್ರತಿಷ್ಠೆಯಾಗಿ ಪರಿಣಮಿಸಿದ್ದು, ಜಿದ್ದಾಜಿದ್ದಿನ ಹೋರಾಟ ನಡೆಯುತ್ತಿದೆ.ಮತದಾರರನ್ನು ಓಲೈಸಲು ಎಲ್ಲಾ ಪಕ್ಷಗಳು ವಿವಿಧ ರೀತಿಯ ತಂತ್ರಗಳನ್ನು ಅನುಸರಿಸುತ್ತಿದ್ದಾರೆ. ಗೆಲ್ಲಲು ಕೊನೆ ಕ್ಷಣದ ಕಸರತ್ತುಗಳನ್ನು ನಡೆಸುತ್ತಿದ್ದಾರೆ. ಮತದಾರರನ್ನು ಓಲೈಸಲು ನಾನಾ ರೀತಿಯ ಪ್ರಯತ್ನಗಳನ್ನು ಅಭ್ಯರ್ಥಿಗಳು ಮುಂದುವರೆಸಿದ್ದಾರೆ.ಈಗಾಗಲೇ ಸಭೆ-ಸಮಾರಂಭಗಳ ಮೂಲಕ ಆಯಾ ಪಕ್ಷಗಳ ನಾಯಕರು ಪಾಲ್ಗೊಂಡು ಮತದಾರರನ್ನು ಸೆಳೆಯುವ ಪ್ರಯತ್ನ ಮಾಡಿದ್ದಾರೆ.