ರಾಜ್ಯ

ಸ್ವಾತಂತ್ರ್ಯೋತ್ಸವಕ್ಕೂ ಮುನ್ನ ಸರ್ಕಾರದಿಂದ ಈ ʼಕೊಡುಗೆʼ ಕೇಳಿದ ಸುಪ್ರೀಂ ಕೋರ್ಟ್‌!

ನ್ಯಾಯಾಲಯಗಳಲ್ಲಿ ಕ್ರಿಮಿನಲ್ ಪ್ರಕರಣಗಳ ಹೊರೆ ತಗ್ಗಿಸಲು ಕೆಲವು ‘ಔಟ್ ಆಫ್ ದಿ ಬಾಕ್ಸ್’ ಯೋಚಿಸುವ ಅಗತ್ಯವಿದೆ ಎಂದು ಸುಪ್ರೀಂ ಕೋರ್ಟ್ ಹೇಳಿದೆ.

ದೇಶವು 75 ನೇ ಸ್ವಾತಂತ್ರ್ಯೋತ್ಸವವನ್ನು ಆಚರಿಸುತ್ತಿರುವ ಸಂದರ್ಭದಲ್ಲಿ ಸರ್ಕಾರವು ಕೆಲವು ಕ್ರಮಗಳನ್ನು ತೆಗೆದುಕೊಳ್ಳಬೇಕು ಎಂದು ಸುಪ್ರೀಂ ಕೋರ್ಟ್ ಶುಕ್ರವಾರ ಒತ್ತಿಹೇಳಿದೆ. ಸರ್ಕಾರವು ಈ ಅಂಶವನ್ನು ಪರಿಶೀಲಿಸುತ್ತಿದೆ ಎಂಬುದನ್ನು ಸೂಚಿಸಲು ಈ ವರ್ಷದ ಸ್ವಾತಂತ್ರ್ಯ ದಿನಾಚರಣೆಯ ಮೊದಲು ಏನಾದರೂ ಮಾಡಬೇಕು ಎಂದು ಸುಪ್ರೀಂ ಕೋರ್ಟ್ ಹೇಳಿದೆ.

ದೀರ್ಘಕಾಲದವರೆಗೆ ಕ್ರಿಮಿನಲ್ ಪ್ರಕರಣಗಳಲ್ಲಿ ಬಾಕಿ ಉಳಿದಿರುವ ಮೇಲ್ಮನವಿಗಳಿಗೆ ಸಂಬಂಧಿಸಿದ ಅರ್ಜಿಗಳ ವಿಚಾರಣೆ ನಡೆಸುತ್ತಿದ್ದ ನ್ಯಾಯಮೂರ್ತಿಗಳಾದ ಎಸ್‌ಕೆ ಕೌಲ್ ಮತ್ತು ಎಂಎಂ ಸುಂದರೇಶ್ ಅವರ ಪೀಠ, ಕ್ರಿಮಿನಲ್ ಪ್ರಕರಣಗಳಿಂದ ಕೆಳ ನ್ಯಾಯಾಲಯಗಳನ್ನು ಮುಕ್ತಗೊಳಿಸುವುದು ಅಗತ್ಯ ಎಂದು ಹೇಳಿದೆ.

ಔಟ್ ಆಫ್ ದಿ ಬಾಕ್ಸ್’ ಚಿಂತನೆ ಅಗತ್ಯ:ಸರ್ಕಾರವು ಈ ನಿಟ್ಟಿನಲ್ಲಿ ಏನಾದರೂ ಮಾಡಿದರೆ ಅದು “ಅತ್ಯಂತ ಧನಾತ್ಮಕ” ಪರಿಣಾಮವನ್ನು ಬೀರುತ್ತದೆ ಎಂದು ಪೀಠವು ಹೆಚ್ಚುವರಿ ಸಾಲಿಸಿಟರ್ ಜನರಲ್ (ಎಎಸ್‌ಜಿ) ಕೆ.ಎಂ.ನಟರಾಜ್‌ಗೆ ತಿಳಿಸಿದೆ.

ಸ್ವಾತಂತ್ರ್ಯ ದಿನಾಚರಣೆಯ ಮೊದಲು ಏನನ್ನಾದರೂ ಮಾಡಲು ಸರ್ಕಾರವನ್ನು ಮನವೊಲಿಸಿ ಎಂದು ಸೂಚಿಸಿದೆ. ಇವುಗಳ ಮೇಲೆ ಕ್ರಮಕೈಗೊಳ್ಳಲು ಹೈಕೋರ್ಟ್‌ಗೆ ಕಷ್ಟವಾದರೆ, ಹೆಚ್ಚುವರಿ ಹೊರೆ ಹೊರಲು ಮತ್ತು ಸುಪ್ರೀಂ ಕೋರ್ಟ್‌ನಲ್ಲಿ ಅರ್ಜಿಗಳನ್ನು ಆಲಿಸಲು ಸಿದ್ಧ ಎಂದು ಸುಪ್ರೀಂ ಕೋರ್ಟ್ ಹೇಳಿತ್ತು.

ಮಾಹಿತಿಯ ಪ್ರಕಾರ, ವಿಚಾರಣೆ ಪ್ರಕ್ರಿಯೆ ಮುಗಿಯುವವರೆಗೆ ಜೈಲಿನಲ್ಲಿ ಸುಮಾರು 853 ಮಂದಿ ಕಾಲ ಕಳೆದಿದ್ದಾರೆ ಎಂದು ತಿಳಿದುಬಂದಿದೆ.

ಇನ್ನು ಇದೇ ಸಂದರ್ಭದಲ್ಲಿ ಸುಪ್ರೀಂ ಕೋರ್ಟ್‌ ರಾಜ್ಯ ಮತ್ತು ಕೇಂದ್ರ ಸರ್ಕಾರಗಳಿಗೆ ಇದಕ್ಕೆ ಸಂಬಂಧಿಸಿದಂತೆ ಯಾವುದೇ ಕ್ರಮ ಕೈಗೊಳ್ಳಲು ಸಾಧ್ಯವಿಲ್ಲವೇ ಎಂದು ಪ್ರಶ್ನಿಸಿದೆ.

Basaveshwara M

Crime reporter, Bangalore

Related Articles

Leave a Reply

Your email address will not be published. Required fields are marked *

Back to top button