ರಾಜಕೀಯರಾಜ್ಯ

ಹಿಂದಿನ ಕಾಂಗ್ರೆಸ್ ಸರ್ಕಾರದ ಅವಧಿಯಲ್ಲಿ ತುಮಕೂರು ಮಹಾನಗರ ಪಾಲಿಕೆಯು ನಗರದಲ್ಲಿ ಸಾವರ್ಕರ್ ಪಾರ್ಕ್ ನಿರ್ಮಾಣ; ಪೇಚಿಗೆ ಸಿಲುಕಿದ ಕಾಂಗ್ರೆಸ್

ತುಮಕೂರು: ರಾಜ್ಯದಲ್ಲಿ ವಿ.ಡಿ ಸಾವರ್ಕರ್ ಫ್ಲೆಕ್ಸ್ ವಿವಾದ ತಾರಕಕ್ಕೇರಿರುವ ಬೆನ್ನಲ್ಲೇ ತುಮಕೂರು ನಗರದಲ್ಲಿ ಸಾವರ್ಕರ್ ಹೆಸರಿನ ಪಾರ್ಕ್‌ವೊಂದನ್ನು ಕಾಂಗ್ರೆಸ್ ಸರ್ಕಾರದ ಅವಧಿಯಲ್ಲೇ ಅಭಿವೃದ್ಧಿಗೊಳಿಸಿ ಉದ್ಘಾಟಿಸಿರುವ ವಿಚಾರ ಮುನ್ನಲೆಗೆ ಬಂದಿದ್ದು ಕಾಂಗ್ರೆಸ್ಗೆ ತೀವ್ರ ಮುಜುಗರವನ್ನುಂಟು ಮಾಡಿದೆ.
ಸದ್ಯ ರಾಜ್ಯದಲ್ಲಿ ವಿ.ಡಿ ಸಾವರ್ಕರ್ ಫ್ಲೆಕ್ಸ್ ಅಳವಡಿಸಿರುವುದಕ್ಕೆ ಕಾಂಗ್ರೆಸ್ ಮುಖಂಡರು ತೀವ್ರ ವಿರೋಧ ವ್ಯಕ್ತಪಡಿಸುತ್ತಿದ್ದಾರೆ. ಆದರೆ ಹಿಂದಿನ ಕಾಂಗ್ರೆಸ್ ಸರ್ಕಾರದ ಅವಧಿಯಲ್ಲಿ ತುಮಕೂರು ಮಹಾನಗರ ಪಾಲಿಕೆಯು ನಗರದಲ್ಲಿ ಸಾವರ್ಕರ್ ಹೆಸರಿನಲ್ಲಿ ಉದ್ಯಾನವನವೊಂದನ್ನು ಅಭಿವೃದ್ಧಿ ಪಡಿಸಿತ್ತು.

2015ರಿಂದ 2019ರ ಅವಧಿಯಲ್ಲಿ ತುಮಕೂರು ಮಹಾನಗರ ಪಾಲಿಕೆಯಲ್ಲಿ 15 ಸದಸ್ಯ ಬಲದ ಕಾಂಗ್ರೆಸ್ ಹಾಗೂ 12 ಸದಸ್ಯ ಬಲದ ಜೆಡಿಎಸ್ ಸಮ್ಮಿಶ್ರವಾಗಿ ಅಧಿಕಾರ ಹೊಂದಿತ್ತು. ಈ ಅವಧಿಯಲ್ಲಿ ನಗರದ ಎಸ್.ಎಸ್ ಪುರಂನ ಪಾರ್ಕ್’ಗೆ ವೀರ ಸಾವರ್ಕರ್ ಪಾರ್ಕ್ ಎಂದು ನಾಮಕರಣ ಮಾಡಲಾಗಿತ್ತು. ಇದಕ್ಕೆ ಪಾಲಿಕೆ ಸಾಮಾನ್ಯ ಸಭೆಯಲ್ಲಿ ಅನುಮೋದನೆ ಪಡೆಯಲಾಗಿತ್ತು.

ಅಂದಿನ ನಗರಾಭಿವೃದ್ಧಿ ಸಚಿವ ರೋಶನ್ ಬೇಗ್, ಸಂಸದ ಎಸ್.ಪಿ ಮುದ್ದಹನುಮೇಗೌಡ, ಶಾಸಕ ಡಾ.ಎಸ್. ರಫೀಕ್ ಅಹ್ಮದ್, ಮೇಯರ್ ಯಶೋಧ ಮತ್ತಿತರ ಕಾಂಗ್ರೆಸ್ ಜನಪ್ರತಿನಿಧಿಗಳು ಉಪಸ್ಥಿತರಿದ್ದು, ವಿ.ಡಿ ಸಾವರ್ಕರ್ ಅವರನ್ನು ಹಾಡಿ ಹೊಗಳಿದ್ದರು. ಆದರೆ ಅದೇ ಕಾಂಗ್ರೆಸ್ ಮುಖಂಡರು ಇಂದು ಸಾವರ್ಕರ್ ಅನ್ನು ವಿರೋಧಿಸುತ್ತಿರುವುದು ಭಾರೀ ಟೀಕೆಗೆ ಕಾರಣವಾಗಿದೆ.

Related Articles

Leave a Reply

Your email address will not be published. Required fields are marked *

Back to top button