ಹಿಜಾಬ್ ವಿವಾದಕ್ಕೆ ಪಿಎಫ್‌ಐ ಕುಮ್ಮಕ್ಕು ನಾವದಗಿ ವಾದ ಮಂಡನೆ

ಕರ್ನಾಟಕದ ಹಿಜಾಬ್ ವಿವಾದ ಪ್ರಕರಣ ಕುರಿತಂತೆ ಸರ್ವೋಚ್ಛ ನ್ಯಾಯಾಲಯದಲ್ಲಿ ವಿಚಾರಣೆ ಮುಂದುವರೆದಿದೆ.
ಮಾ.೧೫ ರಂದು ಕರ್ನಾಟಕ ಹೈಕೋರ್ಟ್ ಹಿಜಾಬ್ ಕುರಿತ ನಿರ್ಬಂಧವನ್ನು ಎತ್ತಿ ಹಿಡಿದ ತೀರ್ಪನ್ನು ಪ್ರಶ್ನಿಸಿ ಸಲ್ಲಿಸಲಾಗಿರುವ ೨೩ ಅರ್ಜಿಗಳ ವಿಚಾರಣೆ ಪ್ರಗತಿಯಲ್ಲಿದೆ.ಸುಪ್ರೀಂಕೋರ್ಟ್‌ನ ನ್ಯಾಯಮೂರ್ತಿಗಳಾದ ಹೇಮಂತ್ ಗುಪ್ತಾ ಮತ್ತು ಸುಧಾಂಶು ದುಲಿಯಾ ಅವರನ್ನೊಳಗೊಂಡದ್ವಿಸದಸ್ಯ ಪೀಠದ ಮುಂದೆ ಈ ಅರ್ಜಿಗಳ ವಿಚಾರಣೆ ನಡೆಯುತ್ತಿದೆ.
ಕರ್ನಾಟಕ ಪರ ಅಡ್ವೊಕೇಟ್ ಜನರಲ್ ಪ್ರಭುಲಿಂಗ ಕೆ. ನಾವದಗಿ ತಮ್ಮ ವಾದ ಮುಂದುವರೆಸಿದ್ದು, ವಿಚಾರಣೆಯ ಸಂದರ್ಭದಲ್ಲಿ ನಮಗೆ ಚಾರ್ಜ್‌ಶೀಟ್ ಸಲ್ಲಿಸಬೇಕು. ಕರ್ನಾಟಕ ಕೋರ್ಟ್‌ನ ಆದೇಶವನ್ನು ಹಿಂದಿಗೆ ಅನುವಾದಿಸಬೇಕು ಎಂದು ನ್ಯಾಯಪೀಠ ತಿಳಿಸಿತು.
ಇದಕ್ಕೆ ಪ್ರತಿಕ್ರಿಯಿಸಿದ ನಾವದಗಿ, ದಿನದ ಅಂತ್ಯದ ವೇಳೆಗೆ ಸಿಗಲಿದ್ದು, ಎರಡೂ ಚಾರ್ಜ್‌ಶೀಟ್‌ಗಳನ್ನು ಸಲ್ಲಿಸಲಾಗುವುದೆಂದು ನ್ಯಾಯಪೀಠಕ್ಕೆ ತಿಳಿಸಿದರು.
ನಿನ್ನೆ ನಡೆದ ವಿಚಾರಣೆ ಸಂದರ್ಭದಲ್ಲಿ ಸರ್ಕಾರದ ಪರ ವಕೀಲ ತುಷಾರ್ ಮೆಹ್ತಾ ೨೦೨೧ರ ತನಕ ಯಾವುದೇ ಹೆಣ್ಣು ಮಕ್ಕಳು ಶಿಕ್ಷಣ ಸಂಸ್ಥೆಗಳಲ್ಲಿ ಹಿಜಾಬ್ ಧರಿಸಿರಲಿಲ್ಲ. ಈ ವಿವಾದಕ್ಕೆ ಪಾಪ್ಯುಲರ್ ಫ್ರಂಟ್ ಆಫ್ ಸಂಘಟನೆ ಕಾರಣ ಎಂದು ವಾದ ಮಂಡಿಸಿದ್ದರು.