ರಾಜ್ಯ

ಹಿರಿಯ ಲೇಖಕಿ, ಸಂಶೋಧಕಿ ಜ್ಯೋತ್ಸ್ನಾ ಕಾಮತ್‌ ನಿಧನ

ಬೆಂಗಳೂರು: ಹಿರಿಯ ಸಂಶೋಧಕಿ ಹಾಗೂ ಲೇಖಕಿ ಜ್ಯೋತ್ಸ್ನಾ ಕಾಮತ್‌ ಅವರು ಬುಧವಾರ ನಿಧನರಾಗಿದ್ದಾರೆ. ಅವರಿಗೆ 86 ವರ್ಷ ವಯಸ್ಸಾಗಿತ್ತು. ದೀರ್ಘ ಕಾಲದ ಅನಾರೋಗ್ಯದಿಂದ ಬಳಲುತ್ತಿದ್ದ ಅವರು ಇಲ್ಲಿನ ಮಲ್ಲೇಶ್ವರಂನಲ್ಲಿರುವ ನಿವಾಸದಲ್ಲಿ ಮಧ್ಯಾಹ್ನ 3 ಗಂಟೆಗೆ ಕೊನೆಯುಸಿರೆಳೆದಿದ್ದಾರೆ.

ಉತ್ತರ ಕನ್ನಡ ಜಿಲ್ಲೆಯ ಕುಮಟಾದಲ್ಲಿ ಜನಿಸಿದ ಜ್ಯೋತ್ಸ್ನಾ ಅವರು, ಕುಮಟಾದ ಕೆನರಾ ಕಾಲೇಜಿನಲ್ಲಿ ಬಿ.ಎ. ಪದವಿ ಪಡೆದರು. ಧಾರವಾಡದ ವನಿತಾ ಪ್ರೌಢಶಾಲೆಯಲ್ಲಿ ಶಿಕ್ಷಕಿಯಾಗಿ ವೃತ್ತಿ ಆರಂಭಿಸಿದ್ದರು. ಮುಂದೆ ಕರ್ನಾಟಕ ವಿಶ್ವವಿದ್ಯಾಲಯದಲ್ಲಿ ಇತಿಹಾಸ ವಿಷಯದಲ್ಲಿ ಎಂ.ಎ. ಪದವಿ ಪಡೆದಿದ್ದರು.

1964ರಲ್ಲಿ ಧಾರವಾಡ ಆಕಾಶವಾಣಿಯಲ್ಲಿ ಕಾರ್ಯಕ್ರಮ ನಿರ್ವಾಹಕಿಯಾಗಿ ಸೇರಿದರು. ನಂತರ ಕೋಲ್ಕೊತ್ತ, ಜೈಪುರ, ಮುಂಬೈ, ಮೈಸೂರು ಮತ್ತು ಬೆಂಗಳೂರು ನಗರಗಳ ಆಕಾಶವಾಣಿ ಕೇಂದ್ರಗಳಲ್ಲಿ ಸೇವೆ ಸಲ್ಲಿಸಿ, ಕೊನೆಗೆ ಬೆಂಗಳೂರು ಆಕಾಶವಾಣಿಯಲ್ಲಿ ನಿರ್ದೇಶಕಿಯಾಗಿ ಕಾರ್ಯನಿರ್ವಹಿಸಿ, 1994ರಲ್ಲಿ ನಿವೃತ್ತಿ ಹೊಂದಿದ್ದರು.

ಸಂಸಾರದಲ್ಲಿಸ್ವಾರಸ್ಯ’, ‘ಕರ್ನಾಟಕ ಶಿಕ್ಷಣ ಪರಂಪರೆ’, ‘ಹೀಗಿದ್ದೇವೆ ನಾವು’, ‘ನೆನಪಿನಲ್ಲಿನಿಂತವರು’, ‘ನಗೆ ಕೇದಿಗೆ’ ಹಾಗೂ ‘ನಗೆ ನವಿಲು’, ‘ಕಲಕತ್ತಾ ದಿನಗಳು’ ಅವರ ಪ್ರಮುಖ ಕೃತಿಗಳು. 1991ರಲ್ಲಿರಾಜ್ಯ ಸರಕಾರದ ರಾಜ್ಯೋತ್ಸವ ಪ್ರಶಸ್ತಿ, ಕರ್ನಾಟಕ ಶಿಕ್ಷಣ ಪರಂಪರೆ ಕೃತಿಗೆ ಕರ್ನಾಟಕ ಸಾಹಿತ್ಯ ಅಕಾಡೆಮಿಯಿಂದ ವಿಶೇಷ ಪುರಸ್ಕಾರ, ಕನ್ನಡ ಸಾಹಿತ್ಯ ಸಂಶೋಧನೆಗಾಗಿ ಕಿಟೆಲ್‌ ಪುರಸ್ಕಾರ ಸೇರಿ ಹಲವು ಪುರಸ್ಕಾರಗಳು ಲಭಿಸಿವೆ.

ಕ್ಯಾನ್ಸರ್‌ ರೋಗದಿಂದ ಬಳಲುತ್ತಿದ್ದ ಅವರು, ಮಗ ವಿಕಾಸ್ ಕಾಮತ್‌, ಸೊಸೆ ಕಿಮ್‌ ಕಾಮತ್‌ ಹಾಗೂ ಮೊಮ್ಮಳು ಮೀನಾ ಕಾಮತ್‌ ಅವರನ್ನು ಅಗಲಿದ್ದಾರೆ.

Basaveshwara M

Crime reporter, Bangalore

Related Articles

Leave a Reply

Your email address will not be published. Required fields are marked *

Back to top button