ರಾಜ್ಯ
ಹುಬ್ಬಳ್ಳಿ ಗಲಭೆಯ ಮಾಸ್ಟರ್‌ಮೈಂಡ್ ಆರೋಪಿ ಅರೆಸ್ಟ್

ಮಧ್ಯಾಹ್ನವಷ್ಟೇ ಅಜ್ಞಾತ ಸ್ಥಳದಿಂದ ವೀಡಿಯೋ ಮೂಲಕ ಪ್ರತ್ಯಕ್ಷವಾಗಿದ್ದ ಹುಬ್ಬಳ್ಳಿ ಗಲಭೆಯ ಮಾಸ್ಟರ್‌ಮೈಂಡ್ ಆರೋಪಿ ವಾಸಿಂ ಪಠಾಣ್, ವೀಡಿಯೋ ರಿಲೀಸ್ ಮಾಡಿದ ಕೆಲವೇ ಗಂಟೆಗಳಲ್ಲಿ ಪೊಲೀಸರ ಬಲೆಗೆ ಸಿಕ್ಕಿಬಿದ್ದಿದ್ದಾನೆ.
ಗಲಭೆ ನಡೆದ ದಿನ ಪೊಲೀಸರ ಜತೆ ವಾಗ್ವಾದಕ್ಕಿಳಿದಿದ್ದ ಎಐಎಮ್‌ಐಎಮ್ ಮುಖಂಡ ಮಹಮ್ಮದ್ ಆರಿಫ್‌ನನ್ನು ಪೊಲೀಸರು ವಶಕ್ಕೆ ಪಡೆದ್ದರು. ಇಂದು ವಾಸಿಂ ವೀಡಿಯೋ ರಿಲೀಸ್ ಮಾಡುತ್ತಿದ್ದಂತೆ ಹುಬ್ಬಳ್ಳಿ ಕೇಶ್ವಾಪೂರ ಠಾಣೆ ಇನ್ಸ್ಪೆಕ್ಟರ್ ಜಗದೀಶ್ ಹಂಚಿನಾಳ ತಂಡವು ಕಾರ್ಯಾಚರಣೆ ನಡೆಸಿ ಮುಂಬೈನಲ್ಲಿ ಆರೋಪಿಯನ್ನು ಬಂಧಿಸಿ ಕರೆತರಲಾಗಿದೆ. ಇನ್ಸ್ಪೆಕ್ಟರ್ ಅಲ್ತಾಫ್ ಕೂಡಾ ತಂಡದಲ್ಲಿ ಇದ್ದರು