ಅಪರಾಧ
ಹುಬ್ಬಳ್ಳಿ ಹೋಟೆಲ್ ನಲ್ಲಿ ‘ಸರಳ ವಾಸ್ತು’ ಖ್ಯಾತಿಯ ಚಂದ್ರಶೇಖರ್ ಗುರೂಜಿ ಹತ್ಯೆ

ಸರಳ ವಾಸ್ತು ಖ್ಯಾತಿಯ ಚಂದ್ರಶೇಖರ್ ಗುರೂಜಿ ಬರ್ಬರ ಹತ್ಯೆ
ಸರಳ ವಾಸ್ತು ಖ್ಯಾತಿಯ ಚಂದ್ರಶೇಖರ್ ಗುರೂಜಿಯ ಬರ್ಬರ ಕೊಲೆಯಾಗಿರುವ ಘಟನೆ ಹುಬ್ಬಳ್ಳಿಯ ಖಾಸಗಿ ಹೋಟೆಲ್ ವೊಂದರಲ್ಲಿ ನಡೆದಿದೆ.
ಸ್ವಾಮೀಜಿ ಕಾಲಿಗೆ ಬೀಳುವ ನೆಪದಲ್ಲಿ ಬಂದು ದುರುಳರು ಚಾಕು ಇರಿದು ಹತ್ಯೆ ಮಾಡಿದ್ದಾರೆ.
ಆರೋಪಿಗಳು ಭೇಟಿಯಾಗಲು ಕರೆಸಿಕೊಂಡು ಗುರೂಜಿ ಹತ್ಯೆಗೈದಿದ್ದಾರೆ . ಓರ್ವ ಕಾಲಿಗೆ ಬೀಳುತ್ತಾನೆ . ಮತ್ತೋರ್ವ ಗುರೂಜಿಗೆ ಚಾಕು ಇರಿದಿದ್ದಾರೆ. ದುಷ್ಕರ್ಮಿಗಳು ಚಾಕುವಿನಿಂದ ಇರಿದು ಎಸ್ಕೆಪ್ ಆಗಿದ್ದಾರೆ .
60 ಕ್ಕೂ ಹೆಚ್ಚು ಬಾರಿ ಚಾಕು ಇರಿದಿದ್ದಾರೆ. ಉಣಕಲ್‌ನ ಕೆರೆ ಬಳಿ ಇರುವ ಪ್ರೆಸಿಡೆಂಟ್ ಹೋಟೆಲ್‌ನಲ್ಲಿ ಮಧ್ಯಾಹ್ನ 12.23 ಕ್ಕೆ ಈ ಘಟನೆ ನಡೆದಿದೆ. ಚಾಕು ಇರಿಯುವ ದೃಶ್ಯ ಸಿಸಿಟಿವಿಯಲ್ಲಿ ಸೆರೆಯಾಗಿದೆ.