ರಾಜ್ಯ

ಹೊಸಪೇಟೆಯಲ್ಲಿ ಅಕ್ರಮ ಮನೆ ನೆಲಸಮ; ಪೊಲೀಸ್ ಬಂದೋಬಸ್ತ್‌ನಲ್ಲಿ ಎರಡು ಅಂತಸ್ತಿನ ಕಟ್ಟಡ ತೆರವು

ಹೊಸಪೇಟೆಯ ಅನಂತಶಯನ ಗುಡಿಯ ಎಂಪಿ ಪ್ರಕಾಶ್ ನಗರದಲ್ಲಿ ಅಕ್ರಮವಾಗಿ ನಿರ್ಮಿಸಿದ್ದ ಎರಡು ಅಂತಸ್ತಿನ ಮನೆಯನ್ನು ನೆಲಸಮಗೊಳಿಸಲಾಯಿತು.ಶನಿವಾರ ಬೆಳಗ್ಗೆ ಕಾರ್ಯಾಚರಣೆ ನಡೆಸಿದ ನಗರಸಭೆ ಅಧಿಕಾರಿಗಳು ಪೊಲೀಸ್ ಬಂದೋಬಸ್ತ್‌ನಲ್ಲಿ ಎರಡು ಜೆಸಿಬಿಗಳ ಮೂಲಕ ಅನಧಿಕೃತ ಕಟ್ಟಡವನ್ನು ನೆಲಸಮಗೊಳಿಸಿದರು.

ಅಕ್ರಮವಾಗಿ ಕಟ್ಟಿಕೊಂಡಿದ್ದ ಮನೆಯನ್ನು ಹೊಸಪೇಟೆ ನಗರಸಭೆ ಆಯುಕ್ತ ಮನೋಹರ್ ನೇತೃತ್ವದಲ್ಲಿ ತೆರವು ಕಾರ್ಯಾಚರಣೆ ನಡೆಸಲಾಯಿತು.ಪೌರಾಯುಕ್ತ ಮನೋಹರ್ ಮಾತನಾಡಿ, ಸಾರ್ವಜನಿಕ ರಸ್ತೆಯಲ್ಲಿ ಅನಧಿಕೃತವಾಗಿ ಮನೆ ನಿರ್ಮಿಸಲಾಗಿದೆ.

ಈ ಮುಂಚೆ ಎರಡು ಬಾರಿ ನೋಟಿಸ್ ನೀಡಲಾಗಿದ್ದು, ರಾಜ್ಯ ಮಟ್ಟದ ಪ್ರಕಟಣೆಯನ್ನು ನೀಡಲಾಗಿತ್ತು. ಆದರೆ, ಯಾರೂ ಪ್ರತಿಕ್ರಿಯಿಸಿಲ್ಲ. ಹೀಗಾಗಿ ನೆಲಸಮಗೊಳಿಸಲಾಗುತ್ತಿದೆ.

ಇನ್ನೂ ಕೆಲವು ಕಟ್ಟಡಗಳಿದ್ದು, ತಿಂಗಳಿಗೊಂದು ಕಟ್ಟಡ ನೆಲಸಮಗೊಳಿಸಲಾಗುವುದು ಎಂದು ತಿಳಿಸಿದರು.

Basaveshwara M

Crime reporter, Bangalore

Related Articles

Leave a Reply

Your email address will not be published. Required fields are marked *

Back to top button