ಹೌಸ್ ಪಾರ್ಟಿಯಲ್ಲಿ ಗುಂಡಿನ ದಾಳಿ: 3 ಸಾವು, ಇಬ್ಬರಿಗೆ ಗಾಯ

ಲಾಸ್ ಏಂಜಲೀಸ್: ದಕ್ಷಿಣ ಕ್ಯಾಲಿಫೋರ್ನಿಯಾದಲ್ಲಿ ಹೌಸ್ ಪಾರ್ಟಿಯೊಂದರಲ್ಲಿ ಭಾನುವಾರ ಮುಂಜಾನೆ ನಡೆದ ಗುಂಡಿನ ದಾಳಿಯಲ್ಲಿ ಮೂವರು ಸಾವನ್ನಪ್ಪಿದ್ದಾರೆ ಮತ್ತು ಇಬ್ಬರು ಗಾಯಗೊಂಡಿದ್ದಾರೆ ಎಂದು ಸ್ಥಳೀಯ ಮಾಧ್ಯಮಗಳನ್ನು ಉಲ್ಲೇಖಿಸಿ ಕ್ಸಿನ್ಹುವಾ ವರದಿ ಮಾಡಿದೆ.
ಆಗ್ನೇಯ ಲಾಸ್ ಏಂಜಲೀಸ್ ಕೌಂಟಿಯಲ್ಲಿರುವ ಡೌನಿ ನಗರದ ಲೀಡ್ಸ್ ಸ್ಟ್ರೀಟ್ನ 8100 ಬ್ಲಾಕ್ನಲ್ಲಿ ಸ್ಥಳೀಯ ಕಾಲಮಾನ ಸುಮಾರು 00:45 ಗಂಟೆಗೆ ಈ ದಾಳಿ ನಡೆದಿದೆ ಎಂದು ಪೊಲೀಸ್ ಅಧಿಕಾರಿಗಳು ಹೇಳಿಕೆಯಲ್ಲಿ ತಿಳಿಸಿದ್ದಾರೆ.ನಾಲ್ವರು ಪುರುಷರು ಮತ್ತು ಓರ್ವ ಮಹಿಳೆ ಗುಂಡು ಹಾರಿಸಿರುವುದನ್ನು ಅಧಿಕಾರಿಗಳು ಕಂಡುಕೊಂಡಿದ್ದಾರೆ ಎಂದು ವರದಿ ತಿಳಿಸಿದೆ.
ಘಟನೆಯಲ್ಲಿ ಮೂವರು ಸಾವನ್ನಪ್ಪಿದ್ದಾರೆ ಎಂದು ತಿಳಿದುಬಂದಿದೆ. ಗಾಯಾಳುಗಳನ್ನು ಆಸ್ಪತ್ರೆಗೆ ಸಾಗಿಸಲಾಗಿದೆ. ಗುಂಡಿನ ದಾಳಿಗೆ ಕಾರಣ ಏನು ಎಂಬುದು ಇನ್ನೂ ತಿಳಿದುಬಂದಿಲ್ಲ.
ಈ ಬಗ್ಗೆ ಪೊಲೀಸರು ತನಿಖೆ ಪ್ರಾರಂಭಿಸಿದ್ದು, ಹೆಚ್ಚಿನ ವಿವರಗಳನ್ನು ನಿರೀಕ್ಷಿಸಲಾಗಿದೆ. ಅಮೆರಿಕದಲ್ಲಿ ನಡೆಯುತ್ತಿರುವ ಸಾಮೂಹಿಕ ಗುಂಡಿನ ದಾಳಿಯ ಘಟನೆಗಳ ನಂತರ ಯುಎಸ್ ಅಧ್ಯಕ್ಷ ಜೋ ಬೈಡನ್ ಬಂದೂಕು ನಿಯಂತ್ರಣ ಮಸೂದೆಗೆ ಸಹಿ ಹಾಕಿದ್ದಾರೆ.
ಈ ಮಸೂದೆಗೆ ಅಮೆರಿಕದ ಕಾಂಗ್ರೆಸ್ನ ಉಭಯ ಸದನಗಳು (ಸಂಸತ್) ಶುಕ್ರವಾರವಷ್ಟೇ ಅನುಮೋದನೆ ನೀಡಿದ್ದವು.