ರಾಜ್ಯ

೨೧ ಜಿಲ್ಲೆಗಳಲ್ಲಿ ಮಳೆ ಅಬ್ಬರ ಬೆಂಗಳೂರು- ಮೈಸೂರು ಜಲಾವೃತ

ಬಂಗಾಳಕೊಲ್ಲಿಯಲ್ಲಿ ಉಂಟಾಗಿರುವ ಮೇಲ್ಮೈ ಸುಳಿಗಾಳಿಯಿಂದಾಗಿ ಬೆಂಗಳೂರು ಸೇರಿದಂತೆ ರಾಜ್ಯದ ಹಲವು ಜಿಲ್ಲೆಗಳಲ್ಲಿ ವರುuನ ಅಬ್ಬರ ಮುಂದುವರಿದಿದೆ. ಇದರಿಂದಾಗಿ ಸಾಮಾನ್ಯ ಜನಜೀವನ ಅಸ್ತವ್ಯಸ್ತಗೊಂಡಿದೆ. ತಗ್ಗುಪ್ರದೇಶಗಳಿಗೆ ನೀರು ನುಗ್ಗಿ ಜನರು ಪರದಾಡುವಂತಾಗಿದೆ.

ರಾಜ್ಯದಲ್ಲಿ ಇನ್ನು ಮೂರು ದಿನಗಳ ಕಾಲ ಮಳೆ ಬೀಳಲದೆ ಎಂದು ಹವಮಾನ ಇಲಾಖೆ ಮುನ್ಸೂಚನೆ ನೀಡಿದೆ.೨೧ ಜಿಲ್ಲೆಗಳಲ್ಲಿ ಗುಡುಗು, ಮಿಂಚು ಸಹಿತ ಭಾರಿ ಮಳೆಯಾಗಿದ್ದು, ಜನಜೀವನ ಏರುಪೇರಾಗಿದೆ. ಹಲವು ಜಿಲ್ಲೆಗಳಲ್ಲಿ ಜಮೀನುಗಳಿಗೆ ನೀರು ನುಗ್ಗಿ ಬೆಳೆಗಳು ಹಾನಿಗೀಡಾಗಿವೆ.

ಮಳೆಯಿಂದಾಗಿ ಬೆಂಗಳೂರು, ಮೈಸೂರು ರಸ್ತೆ ಮತ್ತೇ ಜಲಾವೃತಗೊಂಡಿದೆ.ಉತ್ತರ ಒಳನಾಡಿನಲ್ಲಿ ಅ. ೧೮ ರವರೆಗೆ ಮಳೆಯಾಗಲಿದ್ದು ಯೆಲ್ಲೋ ಅಲರ್ಟ್ ಘೋಷಿಸಲಾಗಿದೆ. ಬಾಗಲಕೋಟೆ, ಬೆಳಗಾವಿ, ಧಾರವಾಡ, ಕಲ್ಬುರ್ಗಿ, ಕೊಪ್ಪಳ, ಗದಗ, ರಾಯಚೂರು, ಬೀದರ್, ವಿಜಯಪುರ ಜಿಲ್ಲೆಗಳಿಗೆ ಯೆಲ್ಲೋ ಅರ್ಟ್ ಘೋಷಿಸಲಾಗಿದೆ.

ದಕ್ಷಿಣ ಒಳನಾಡಿನಲ್ಲಿ ಆರೆಂಜ್ ಅಲರ್ಟ್ ಘೋಷಣೆ ಮಾಡಲಾಗಿದೆ.ಚಿತ್ರದುರ್ಗ, ಬಳ್ಳಾರಿ ಚಾಮರಾಜನಗರ, ದಾವಣಗೆರೆ ಜಿಲ್ಲೆಗಳಿಗೆ ಆರೆಂಜ್ ಅಲರ್ಟ್ ಘೋಷಿಸಲಾಗಿದೆ. ಬೆಂಗಳೂರು ಗ್ರಾಮಾಂತರ, ಬೆಂಗಳೂರು ನಗರ, ಚಿಕ್ಕಮಗಳೂರು, ಹಾಸನ, ಕೊಡಗು, ಮಂಡ್ಯ, ಶಿವಮೊಗ್ಗ, ತುಮಕೂರು ಜಿಲ್ಲೆಗಳಲ್ಲಿ ಮುಂದಿನ ಮೂರು ದಿನಗಳಲ್ಲಿ ಭಾರಿ ಮಳೆ ಬೀಳಲಿದೆ ಎಂದು ಹವಮಾನ ಇಲಾಖೆ ಮಾಹಿತಿ ನೀಡಿದ್ದು ಯೆಲ್ಲೋ ಅಲರ್ಟ್ ಘೋಷಿಸಲಾಗಿದೆ.

ಸಿಲಿಕಾನ್ ಸಿಟಿಯಲ್ಲಿ ಮೂರು ದಿನಗಳಿಂದ ಸುರಿಯುತ್ತಿರುವ ಭಾರಿ ಮಳೆಗೆ ಜನರು ತತ್ತರಿಸಿದ್ದಾರೆ. ಇಂದು ಮುಂಜಾನೆಯವರೆಗೂ ಮಳೆ ಸುರಿದಿದ್ದು, ನಾಗರೀಕರು ಪರದಾಡುವಂತಾಗಿದೆ. ಕಳೆದ ಐದು ವರ್ಷಗಳ ಅವಧಿಯಲ್ಲಿ ಬೆಂಗಳೂರಿನಲ್ಲಿ ದಾಖಲೆ ಮಳೆ ಬಿದ್ದಿದೆ. ೨೦೧೭ ರಲ್ಲಿ ೧೭೦ ಮಿ.ಮೀ ಮಳೆಯಾಗಿತ್ತು. ಈಗ ಬೆಂಗಳೂರಿನಲ್ಲಿ ಭಾರಿ ಮಳೆಯಾಗಿದ್ದು, ಹೊಸ ದಾಖಲೆಯಾಗಿದೆ.

ಇದುವರೆಗೆ ೧೬೬ ಮಿ.ಮೀ. ಮಳೆಯಾಗಿದೆ. ಮುಂದಿನ ೫ ದಿನಗಳಲ್ಲಿ ಬೆಂಗಳೂರಿನಲ್ಲಿ ಭಾರಿ ಮಳೆಯಾಗುವ ಸಾಧ್ಯತೆಯಿದೆ ಎಂದು ಹವಮಾನ ಇಲಾಖೆ ಸೂಚನೆ ನೀಡಿದ್ದು, ಎಲ್ಲೆಡೆ ಕಟ್ಟೆಚ್ಚರ ವಹಿಸಲಾಗಿದೆ. ಅ. ೧ ರಿಂದ ೧೫ ರವೆರೆಗೆ ೧೨೩ ಮಿ.ಮೀ. ಮಳೆಯಾಗಿದೆ.

ನಗರದಲ್ಲಿ ಸುರಿಯುತ್ತಿರುವ ಮಳೆಯಿಂದಾಗಿ ಬೆಂಗಳೂರು, ಮೈಸೂರು ಹೆದ್ದಾರೆ ಮತ್ತೇ ನೀರಿನಲ್ಲಿ ಮುಳುಗಿದೆ. ಇದರಿಂದಾಗಿ ಪ್ರಯಾಣಿಕರು ಸಂಕಷ್ಟಕ್ಕೆ ಸಿಲುಕಿದ್ದಾರ. ಬೆಂಗಳೂರು, ಮೈಸೂರಿಗೆ ಸಂಚರಿಸುವ ಪ್ರಯಾಣಿಕರು ಪರ್ಯಾಯ ಮಾರ್ಗ ಬಳಸುವಂತೆ ಬೆಂಗಳೂರು ನಗರ ಪೊಲೀಸರು ಮುನ್ಸೂಚನೆ ನೀಡಿದ್ದಾರೆ.ಧಾರಾಕಾರ ಮಳೆಯಿಂದಾಗಿ ಮೈಸೂರು, ಮಲವಳ್ಳಿ ಹೆದ್ದಾರಿಗಳು ಜಲಾವೃತಗೊಂಡಿವೆ.

ಇದರಿಂದಾಗಿ ಮೈಸೂರಿಗೆ ತೆರಳುವ ಜನರು ಬೆಂಗಳೂರು- ನಾಗಮಂಗಲ- ಪಾಂಡವಪುರ- ಶ್ರೀರಂಗಪಟ್ಟಣ- ಮೈಸೂರು ರಸ್ತೆಯನ್ನು ಬಳಸಲು ಸೂಚಿಸಲಾಗಿದೆ ಎಂದು ಸಂಚಾರ ವಿಭಾಗದ ಪೊಲೀಸರು ಟ್ವೀಟ್ ಮಾಡಿದ್ದಾರೆ.

Basaveshwara M

Crime reporter, Bangalore

Related Articles

Leave a Reply

Your email address will not be published. Required fields are marked *

Back to top button