ರಾಜ್ಯ

ಹಿಜಾಬ್ ಸೆ.5ಕ್ಕೆ ಸುಪ್ರೀಂ ವಿಚಾರಣೆ ಮುಂದೂಡಿಕೆ

ಹಿಜಾಬ್ ಪ್ರಕರಣಕ್ಕೆ ಸಂಬಂಧಿಸಿದಂತೆ ಕರ್ನಾಟಕ ಸರ್ಕಾರ ಹಾಗೂ ಪ್ರತಿವಾದಿಗಳಿಗೆ ನೋಟಿಸ್ ಜಾರಿ ಮಾಡಿರುವ ಸುಪ್ರೀಂ ಕೊರ್ಟ್‌ ಪ್ರಕರಣದ ವಿಚಾರಣೆಯನ್ನು ಸೆಪ್ಟೆಂಬರ್ ೫ಮುಂದೂಡಿದೆ.

ಸರ್ಕಾರಿ ಶಾಲೆಗಳು ಮತ್ತು ಕಾಲೇಜುಗಳಲ್ಲಿ ಹಿಜಾಬ್ ಧರಿಸುವುದರ ನಿಷೇಧದ ಬಗ್ಗೆ ವಿಚಾರಣೆಯನ್ನು ಎತ್ತಿಹಿಡಿದ ಕರ್ನಾಟಕ ಹೈಕೋರ್ಟ್ ತೀರ್ಪನ್ನು ಪ್ರಶ್ನಿಸಿ ಸುಪ್ರೀಂ ಕೋರ್ಟ್‌ಗೆ ಮೇಲ್ಮನವಿ ಸಲ್ಲಿಸಲಾಗಿತ್ತು, ಇಂದು ಸುಪ್ರೀಂ ಕರ್ನಾಟಕ ರಾಜ್ಯ ಸರ್ಕಾರಕ್ಕೆ ಈ ಬಗ್ಗೆ ನೋಟಿಸ್ ನೀಡಿದೆ.ವಿಚಾರಣೆ ಕೈಗಿತ್ತಿಕೊಂಡ ನ್ಯಾಯಮೂರ್ತಿಗಳಾದ ಹೇಮಂತ್ ಗುಪ್ತಾ ಮತ್ತು ಸುಧಾಂಶು ಧುಲಿಯಾ ಅವರ ಪೀಠವು ಈ ವಿಚಾರಣೆಯನ್ನು ಸೆ.೫ಕ್ಕೆ ಮುಂದೂಡಿದೆ.

ನೀವು ಹೇಳಿದಂತೆ ನಡೆದುಕೊಳ್ಳಲು ಸಾಧ್ಯವಿಲ್ಲ.ತುರ್ತು ವಿಚಾರಣೆ ನಡೆಸಲು ಮನವಿ ಬಯಸಿದ್ದೀರಿ ಮತ್ತು ಈಗ ನೀವು ವಿಚಾರಣೆಯನ್ನು ಮುಂದೂಡಲು ಬಯಸುತ್ತೀರಿ.ನಾವು ಈ ಬಗ್ಗೆ ಅನುಮತಿ ನೀಡುವುದಿಲ್ಲ ಎಂದು ಎಂದು ನ್ಯಾಯಾಲಯ ಹೇಳಿದೆ. ಸರ್ಕಾರಕ್ಕೆ ಈ ಬಗ್ಗೆ ನೋಟಿಸ್ ನೀಡಿದ್ದು ಸೆಪ್ಟೆಂಬರ್ ೫ರಂದು ವಿಚಾರಣೆ ನಡೆಸಲಾಗುವುದು ಎಂದು ಹೇಳಿದೆ.

ಕಾಲೇಜು ಆವರಣದಲ್ಲಿ ಮುಸ್ಲಿಂ ವಿದ್ಯಾರ್ಥಿನಿಯರು ಹಿಜಾಬ್ ಧರಿಸುವುದನ್ನು ನಿಷೇಧಿಸಲು ರಾಜ್ಯದ ಸರ್ಕಾರಿ ಕಾಲೇಜುಗಳ ಕಾಲೇಜು ಅಭಿವೃದ್ಧಿ ಸಮಿತಿಗಳಿಗೆ ಅಧಿಕಾರ ನೀಡುವ ಕರ್ನಾಟಕ ಸರ್ಕಾರದ ಆದೇಶವನ್ನು ಕರ್ನಾಟಕ ಹೈಕೋರ್ಟ್ ಮಾರ್ಚ್ ೧೫ ರಂದು ಎತ್ತಿಹಿಡಿದಿದೆ.

ಹಿಜಾಬ್ ಧರಿಸಿದ ಕಾರಣಕ್ಕೆ ತರಗತಿಗಳಿಗೆ ಹಾಜರಾಗಲು ಅನುಮತಿ ನಿರಾಕರಿಸಿದ ನಂತರ ಅರ್ಜಿದಾರರು ಕರ್ನಾಟಕದ ವಿವಿಧಕಾಲೇಜುಗಳ ಮುಸ್ಲಿಂ ವಿದ್ಯಾರ್ಥಿನಿಯರು ಹೈಕೋರ್ಟ್‌ಗೆ ಮೊರೆ ಹೋಗಿದ್ದರು.

ಆಗಿನ ಮುಖ್ಯ ನ್ಯಾಯಮೂರ್ತಿ ರಿತು ರಾಜ್ ಅವಸ್ತಿ ಮತ್ತುನ್ಯಾಯಮೂರ್ತಿಗಳಾದ ಕೃಷ್ಣ ಎಸ್ ದೀಕ್ಷಿತ್ ಮತ್ತು ಜೆಎಂ ಖಾಜಿ ಅವರ ತ್ರಿಸದಸ್ಯಹಿಜಾಬ್ ಇಸ್ಲಾಂ ಧರ್ಮದ ಅಗತ್ಯ ಧಾರ್ಮಿಕ ಆಚರಣೆಗಳ ಭಾಗವಲ್ಲಸಮವಸ್ತ್ರದಅವಶ್ಯಕತೆಯು ಆರ್ಟಿಕಲ್ ೧೯(೧)(ಎ) ಅಡಿಯಲ್ಲಿ ಅಭಿವ್ಯಕ್ತಿ ಸ್ವಾತಂತ್ರ್ಯದ ಮೂಲಭೂತ ಹಕ್ಕಿನಮೇಲೆ ಸಮಂಜಸವಾದ ನಿರ್ಬಂಧವಾಗಿದೆಹಿಜಾಬ್ ಧರಿಸುವ ಹಕ್ಕು ‘ಅಭಿವ್ಯಕ್ತಿ’ ವ್ಯಾಪ್ತಿಗೆ ಬರುತ್ತದೆ ಮತ್ತು ಹೀಗಾಗಿ ಸಂವಿಧಾನದ ೧೯(೧)(ಎ) ಅಡಿಯಲ್ಲಿ ಸಂರಕ್ಷಿಸಲಾಗಿದೆ ಎಂಬುದನ್ನು ಹೈಕೋರ್ಟು ಗಮನಿಸಲು ವಿಫಲವಾಗಿದೆ ಎಂದು ಉನ್ನತ ನ್ಯಾಯಾಲಯದ ಮುಂದೆಸಲ್ಲಿಸಲಾದ ಮನವಿಯಲ್ಲಿ ತಿಳಿಸಲಾಗಿದೆ.

ಹಿಜಾಬ್ ಧರಿಸುವ ಹಕ್ಕು ಭಾರತದ ಸಂವಿಧಾನದ ೨೧ನೇ ವಿಧಿಯ ಅಡಿಯಲ್ಲಿ ಖಾಸಗಿತನದ ಹಕ್ಕಿನ ವ್ಯಾಪ್ತಿಯಲ್ಲಿ ಬರುತ್ತದೆ ಎಂಬ ಅಂಶವನ್ನು ಗಮನಿಸಲು ಹೈಕೋರ್ಟ್ ವಿಫಲವಾಗಿದೆ ಎಂದು ಈ ಮನವಿ ತಿಳಿಸಲಾಗಿದೆ.

ಸಮವಸ್ತ್ರಕ್ಕೆ ಸಂಬಂಧಿಸಿದಂತೆ, ಕರ್ನಾಟಕ ಶಿಕ್ಷಣ ಕಾಯಿದೆ, ೧೯೮೩ ಮತ್ತು ಅದರ ಅಡಿಯಲ್ಲಿ ರಚಿಸಲಾದ ನಿಯಮಗಳು, ವಿದ್ಯಾರ್ಥಿಗಳು ಧರಿಸಲು ಯಾವುದೇ ಕಡ್ಡಾಯ ಸಮವಸ್ತ್ರವನ್ನು ಒದಗಿಸುವುದಿಲ್ಲ ಎಂದು ಮನವಿಯಲ್ಲಿ ತಿಳಿಸಲಾಗಿದೆ.

Basaveshwara M

Crime reporter, Bangalore

Related Articles

Leave a Reply

Your email address will not be published. Required fields are marked *

Back to top button