11ನೇ ಮಹಡಿಯಿಂದ ಜಿಗಿದು ವಿಕ್ಟೋರಿಯಾ ಆಸ್ಪತ್ರೆ ವೈದ್ಯ ಆತ್ಮಹತ್ಯೆ
Victoria Hospital Doctor Suicide Prithvikant Reddy

ವೈದ್ಯ ರೊಬ್ಬರು ತಾವು ವಾಸವಾಗಿದ್ದ ಅಪಾರ್ಟ್‍ಮೆಂಟ್‍ನ 11ನೇ ಮಹಡಿಯಿಂದ ಜಿಗಿದು ಆತ್ಮಹತ್ಯೆ ಮಾಡಿಕೊಂಡಿರುವ ಘಟನೆ ಅಮೃತಹಳ್ಳಿ ಪೊಲೀಸ್ ಠಾಣೆ ವ್ಯಾಪ್ತಿಯಲ್ಲಿ ಇಂದು ಮುಂಜಾನೆ ನಡೆದಿದೆ. ವಿಕ್ಟೋರಿಯಾ ಆಸ್ಪತ್ರೆಯ ವೈದ್ಯ ಪೃಥ್ವಿಕಾಂತ್ ರೆಡ್ಡಿ ಆತ್ಮಹತ್ಯೆ ಮಾಡಿಕೊಂಡಿರುವರು. ಇವರು ಮೂಲತಃ ಆಂಧ್ರಪ್ರದೇಶದವರು.
ಮೂರು ತಿಂಗಳ ಹಿಂದೆಯಷ್ಟೇ ಪೃಥ್ವಿಕಾಂತ್ ರೆಡ್ಡಿ ಅವರು ವೈದ್ಯೆಯನ್ನು ವಿವಾಹವಾಗಿದ್ದರು. ಅಮೃತಹಳ್ಳಿ ಮುಖ್ಯರಸ್ತೆ ಯಲ್ಲಿರುವ ಗೋದ್ರೇಜ್ ಅಪಾರ್ಟ್‍ಮೆಂಟ್‍ನ 11ನೇ ಮಹಡಿಯ ಕಟ್ಟಡದಲ್ಲಿ ದಂಪತಿ ವಾಸಿಸುತ್ತಿದ್ದರು.
ಇಂದು ಮುಂಜಾನೆ 5 ಗಂಟೆ ಸುಮಾರಿನಲ್ಲಿ 11ನೇ ಮಹಡಿಯಿಂದ ಜಿಗಿದು ಪೃಥ್ವಿಕಾಂತ್ ರೆಡ್ಡಿ ಅವರು ಆತ್ಮಹತ್ಯೆ ಮಾಡಿಕೊಂಡಿದ್ದಾರೆ. ಆತ್ಮಹತ್ಯೆಗೆ ಕಾರಣ ಸದ್ಯಕ್ಕೆ ತಿಳಿದುಬಂದಿಲ್ಲ.
ಸುದ್ದಿ ತಿಳಿದು ಅಮೃತಹಳ್ಳಿ ಠಾಣೆ ಪೊಲೀಸರು ಸ್ಥಳಕ್ಕೆ ಆಗಮಿಸಿ ಪರಿಶೀಲನೆ ನಡೆಸಿ ಮೃತದೇಹವನ್ನು ಅಂಬೇಡ್ಕರ್ ಮೆಡಿಕಲ್ ಆಸ್ಪತ್ರೆಗೆ ರವಾನಿಸಿ ಪ್ರಕರಣ ದಾಖಲಿಸಿಕೊಂಡು ಮುಂದಿನ ಕ್ರಮ ಕೈಗೊಂಡಿದ್ದಾರೆ.