112 ‘ಮೆಡಿಕಲ್ ಕಾಲೇಜು’ ಸ್ಥಾಪನೆಗೆ ಕೇಂದ್ರ ಸಿದ್ಧತೆ

ವೈದ್ಯಕೀಯ ವ್ಯಾಸಂಗ ಮಾಡಬಯಸುವ ವಿದ್ಯಾರ್ಥಿಗಳಿಗೆ ಕೇಂದ್ರ ಸರ್ಕಾರ ಭರ್ಜರಿ ಸಿಹಿಸುದ್ದಿ ನೀಡಿದ್ದು, ದೇಶಾದ್ಯಂತ ೧೧೨ ಮೆಡಿಕಲ್ ಕಾಲೇಜುಗಳನ್ನು ಸ್ಥಾಪಿಸಲು ಕೇಂದ್ರ ಆರೋಗ್ಯ ಸಚಿವಾಲಯ ಸಿದ್ಧತೆ ನಡೆಸಿದೆ.
ಕೇಂದ್ರ ಸರ್ಕಾರವು ಆರೋಗ್ಯ ಮೂಲಸೌಕರ್ಯವನ್ನು ಹೆಚ್ಚಿಸಲು ನಿರ್ಧರಿಸಿದೆ. ಕೇಂದ್ರ ಆರೋಗ್ಯ ಸಚಿವಾಲಯವು ದೇಶಾದ್ಯಂತ ಪ್ರಸ್ತುತ ಅಸ್ತಿತ್ವದಲ್ಲಿರುವ ವೈದ್ಯಕೀಯ ಕಾಲೇಜುಗಳ ಸಂಖ್ಯೆಯನ್ನು ಹೆಚ್ಚಿಸಲಿದೆ.
ಸಚಿವಾಲಯದ ಯೋಜನೆಯ ಅಡಿಯಲ್ಲಿ, ಮುಂದಿನ ನಾಲ್ಕು ವರ್ಷಗಳಲ್ಲಿ ೧೧೨ ಜಿಲ್ಲೆಗಳನ್ನು ಆಯ್ಕೆ ಮಾಡಲಾಗುವುದು, ಅಲ್ಲಿ ವೈದ್ಯಕೀಯ ಕಾಲೇಜುಗಳನ್ನು ನಿರ್ಮಿಸಲು ಯೋಜನೆ ರೂಪಿಸಿದೆ.
ವೈದ್ಯಕೀಯ ಕಾಲೇಜು ಸ್ಥಾಪನ ಮಾಡಿದರೆ ವೈದ್ಯಕೀಯ ಸೀಟುಗಳ ಸಂಖ್ಯೆಯೂ ಹೆಚ್ಚಾಗುತ್ತದೆ. ೧೦ ಲಕ್ಷಕ್ಕಿಂತ ಹೆಚ್ಚು ಜನಸಂಖ್ಯೆ ಇರುವ ಜಿಲ್ಲೆಗಳಲ್ಲಿ ಈ ಕಾಲೇಜುಗಳನ್ನು ಸ್ಥಾಪಿಸಲಾಗುವುದು.
ಯಾವ ಜಿಲ್ಲೆಗಳಲ್ಲಿ ಇದುವರೆಗೆ ಯಾವುದೇ ಸರ್ಕಾರಿ ಅಥವಾ ಖಾಸಗಿ ವೈದ್ಯಕೀಯ ಕಾಲೇಜುಗಳು ಅಸ್ತಿತ್ವದಲ್ಲಿಲ್ಲ ಅಂತಹ ಜಿಲ್ಲೆಗಳಲ್ಲಿ ಕಾಲೇಜು ಸ್ಥಾಪನೆ ಮಾಡಲು ನಿರ್ಧರಿಸಲಾಗಿದೆ.