
18 ವರ್ಷಕ್ಕಿಂತ ಮೇಲ್ಪಟ್ಟ ದೇಶದ ಜನತೆಗೆ ಉಚಿತ ಬೂಸ್ಟರ್ ಡೋಸ್ ನೀಡಲು ಕೇಂದ್ರ ಸರ್ಕಾರ ನಿರ್ಧರಿಸಿದೆ. ಇಂದು ಪ್ರಧಾನಿ ನರೇಂದ್ರ ಮೋದಿ ಅವರ ಸಂಪುಟ ಈ ನಿರ್ಧಾರ ಕೈಗೊಂಡಿದೆ. ಇದರಿಂದಾಗಿ ಇಲ್ಲಿಯವರೆಗೆ ಬೂಸ್ಟರ್ ಡೋಸ್ ಲಸಿಕೆ ಪಡೆಯದ ಕೋಟ್ಯಂತರ ಭಾರತೀಯರು ಸಾಕಷ್ಟು ಪ್ರಯೋಜನ ಪಡೆಯಲಿದ್ದಾರೆ.
ಪ್ರಧಾನಿ ಮೋದಿ ನೇತೃತ್ವದಲ್ಲಿ ಸಭೆಪ್ರಧಾನಿ ನರೇಂದ್ರ ಮೋದಿ ಸರ್ಕಾರದ ಮತ್ತೊಂದು ಮಹತ್ವದ ನಿರ್ಧಾರವನ್ನು ಕೈಗೊಂಡಿದೆ ಎಂದು ಕೇಂದ್ರ ಮಾಹಿತಿ ಮತ್ತು ಪ್ರಸಾರ ಖಾತೆ ಸಚಿವ ಅನುರಾಗ್ ಠಾಕೂರ್ ಹೇಳಿದ್ದಾರೆ. ಇಂದು, ಪ್ರಧಾನಿ ಮೋದಿ ಅಧ್ಯಕ್ಷತೆಯಲ್ಲಿ ನಡೆದ ಸಂಪುಟ ಸಭೆಯಲ್ಲಿ, 18 ವರ್ಷ ಮೇಲ್ಪಟ್ಟ ದೇಶದ ಎಲ್ಲಾ ಜನರಿಗೆ ಉಚಿತ ಬೂಸ್ಟರ್ ಡೋಸ್ ನೀಡಲು ನಿರ್ಧರಿಸಲಾಗಿದೆ.
ಸರ್ಕಾರಿ ಆಸ್ಪತ್ರೆಯಲ್ಲಿ ಸಿಗಲಿದೆ ಲಸಿಕೆಜುಲೈ 15 ರಿಂದ ಮುಂದಿನ 75 ದಿನಗಳವರೆಗೆ ಈ ಬೂಸ್ಟರ್ ಡೋಸ್ ಅನ್ನು ಉಚಿತವಾಗಿ ನೀಡಲಾಗುವುದು ಎಂದು ತಿಳಿಸಿದ್ದಾರೆ. ದೇಶದ ಪ್ರತಿಯೊಂದು ಸರ್ಕಾರಿ ಆಸ್ಪತ್ರೆಯಲ್ಲಿ ಈ ಬೂಸ್ಟರ್ ಡೋಸ್ ಉಚಿತವಾಗಿ ಸಿಗಲಿದೆ ಎಂದು ತಿಳಿಸಿದ್ದಾರೆ.