Uncategorized
2022-23ನೇ ಸಾಲಿಗೆ ಸಮಗ್ರ ಶಿಕ್ಷಣ -ಕರ್ನಾಟಕ ಯೋಜನೆಯ ಅಡಿಯಲ್ಲಿ ಶಾಲಾ ಶಿಕ್ಷಕರಾಗಿ ಕಾರ್ಯನಿರ್ವಹಿಸುತ್ತಿರುವಂತ ಶಿಕ್ಷಕರಿಗೆ ವೇತನಕ್ಕಾಗಿ ಎರಡನೇ ತ್ರೈಮಾಸಿಕ ಅನುದಾನವನ್ನು ರಾಜ್ಯ ಸರ್ಕಾರ ಬಿಡುಗಡೆ ಮಾಡಿ ಆದೇಶಿಸಿದೆ.

ಈ ಕುರಿತು ಸಮಗ್ರ ಶಿಕ್ಷಣ-ಕರ್ನಾಟಕದ ನಿರ್ದೇಶಕರು ಆದೇಶ ಹೊರಡಿಸಿದ್ದು, 2022-23ನೇ ಸಾಲಿಗೆ ಸಮಗ್ರ ಶಿಕ್ಷಣ-ಕರ್ನಾಟಕ ಶಾಲಾ ಶಿಕ್ಷಕರ, ಡಿವೈಪಿಸಿಸಿ, ಅಧಿಕಾರಿ ಮತ್ತು ಸಿಬ್ಬಂದಿಗಳ ವೇತನಕ್ಕಾಗಿ 2022-23ನೇ ಸಾಲಿಗೆ ನಿಗದಿಪಡಿಸಲಾಗಿರುವ ಅನುದಾನದಲ್ಲಿ ಎರಡನೇ ತ್ರೈಮಾಸಿಕ ವೇತನ ಅನುದಾನದಲ್ಲಿ ಜೂನ್-2022 ಮತ್ತು ಜುಲೈ-2022 ವೇತನಕ್ಕಾಗಿ ಬಿಡುಗಡೆ ಮಾಡಲಾಗಿದೆ.
ಸಮಗ್ರ ಶಿಕ್ಷಣ-ಕರ್ನಾಟಕ ಅಡಿಯಲ್ಲಿ ಕಾರ್ಯನಿರ್ವಹಿಸುತ್ತಿರುವ ಅಧಿಕಾರಿಗಳು ಮತ್ತು ಸಿಬ್ಬಂದಿಗಳ ವೇತನದ ಬಿಲ್ಲುಗಳನ್ನು ಖಜಾನೆಗೆ ಸಲ್ಲಿಸಲು ಸೂಚಿಸಿದ್ದಾರೆ.