24 ವರ್ಷದ ಮಹಿಳೆಯನ್ನು ರೇಪ್ ಮಾಡಿದ 15 ವರ್ಷದ ಬಾಲಕ..!
Dehradun: Boy rapes housekeeping staff in 5-star hotel

ಪಂಚತಾರ ಹೋಟೆಲ್‍ನಲ್ಲಿ ಪೋಷಕರೊಂದಿಗೆ ತಂಗಿದ್ದ 15 ವರ್ಷದ ಬಾಲಕ ಮಹಿಳಾ ಶೌಚಾಲಯಕ್ಕೆ ನುಗ್ಗಿ 24 ವರ್ಷದ ಸ್ವಚ್ಚತಾ ಸಿಬ್ಬಂದಿಯ ಮೇಲೆ ಅತ್ಯಾಚಾರ ನಡೆಸಿರುವ ಘಟನೆ ವರದಿಯಾಗಿದೆ. ದೂರು ದಾಖಲಾದ ಬಳಿಕ ಪೊಲೀಸರು ಬಾಲಕನನ್ನು ವಶಕ್ಕೆ ಪಡೆದು ಬಾಲಾಪರಾಧಿಗಳ ಸುಧಾರಣಾ ಕೇಂದ್ರಕ್ಕೆ ಕಳುಹಿಸಿದ್ದಾರೆ.
ತನ್ನ ಪೋಷಕರೊಂದಿಗೆ ಹೋಟೆಲ್‍ನಲ್ಲಿ ತಂಗಿದ್ದ ಅಪ್ರಾಪ್ತ ಶುಕ್ರವಾರ ಮಹಿಳಾ ಶೌಚಾಲಯಕ್ಕೆ ನುಗ್ಗಿದ್ದಾರೆ. ಅಲ್ಲಿ ಮೊಬೈಲ್ ಫೋನ್ ಚಾರ್ಜ್ ಮಾಡುತ್ತಿದ್ದ ಸ್ವಚ್ಚತಾ ಮಹಿಳಾ ಸಿಬ್ಬಂದಿ ಮೇಲೆ ಅತ್ಯಾಚಾರ ಎಸಗಿದ್ದಾನೆ ಎಂದು ರಾಜ್‍ಪುರ ಪೊಲೀಸ್ ಠಾಣೆಯ ಸ್ಟೇಷನ್ ಹೌಸ್ ಅಧಿಕಾರಿ ಮೋಹನ್ ಸಿಂಗ್ ಹೇಳಿದ್ದಾರೆ.
ಆರೋಪಿ ಶೌಚಾಲಯದ ಕೊಠಡಿಗೆ ಒಳಗಿನಿಂದ ಬೀಗ ಹಾಕಿದ್ದಾನೆ. ಇದರಿಂದ ಮಹಿಳೆ ಸಹಾಯಕ್ಕಾಗಿ ಕೂಗಿಕೊಂಡರು ಯಾರಿಗೂ ಕೇಳಿಸಿಲ್ಲ ಎಂದು ಹೇಳಲಾಗಿದೆ.
ಮಹಿಳೆಯ ವೈದ್ಯಕೀಯ ಪರೀಕ್ಷೆಯಲ್ಲಿ ಅತ್ಯಾಚಾರ ನಡೆದಿರುವುದು ದೃಢಪಟ್ಟಿದೆ. ಬಾಲಕನ ವಿರುದ್ಧ ಭಾರತೀಯ ದಂಡ ಸಂಹಿತೆಯ ಸೆಕ್ಷನ್ 376 (ಅತ್ಯಾಚಾರ) ಅಡಿಯಲ್ಲಿ ಎಫ್‍ಐಆರ್ ದಾಖಲಿಸಲಾಗಿದೆ. ಸಂತ್ರಸ್ತೆ ನೀಡಿದ ದೂರಿನ ಪ್ರಕಾರ ವಿಷಯವನ್ನು ಮುಚ್ಚಿಹಾಕಲು ಹುಡುಗನ ತಂದೆ ಹಣ ನೀಡಿದ್ದಾರೆ. ಆದರೂ ಆಕೆ ಸಂಧಾನಕ್ಕೆ ಒಪ್ಪದೆ ಪೊಲೀಸರಿಗೆ ದೂರು ನೀಡುವ ಮೂಲಕ ದಿಟ್ಟತನ ಪ್ರದರ್ಶಿಸಿದ್ದಾಳೆ ಎಂದು ಹೇಳಲಾಗಿದೆ.