ಬೆಂಗಳೂರು

306 ಮನೆಗಳ ನಿರ್ಮಾಣಕ್ಕೆ ಸಚಿವ ವಿ ಸೋಮಣ್ಣ ಶಂಕುಸ್ಥಾಪನೆ.

ಕೆಂಗೇರಿ ಹೋಬಳಿ ಮಾಳಗೊಂಡನಹಳ್ಳಿಯಲ್ಲಿ ನಿರ್ಮಿಸಲು ಉದ್ದೇಶಿಸಿರುವ 306 ಮನೆಗಳ ಶಂಕುಸ್ಥಾಪನೆಯನ್ನು ವಸತಿ ಸಚಿವ ವಿ. ಸೋಮಣ್ಣ ನೆರವೇರಿಸಿದರು. ಈ ವೇಳೆ ಮಾತನಾಡಿದ ಅವರು, ಬೆಂಗಳೂರು ತೀವ್ರ ವೇಗದಲ್ಲಿ ಬೆಳೆಯುತ್ತಿರುವ ನಗರ. ಹೀಗಾಗಿ ಇಲ್ಲಿ ಸ್ವಂತ ಸೂರನ್ನು ಹೊಂದಬೇಕೆಂಬ ಮಧ್ಯಮ ಮತ್ತು ಬಡವರ್ಗದ ಜನರ ಕನಸು ನನಸಾಗಿಸಲು ಸರ್ಕಾರ ಬದ್ಧವಾಗಿದೆ. ಈ ಹಿನ್ನೆಲೆಯಲ್ಲಿ ಇಂದು ಇಲ್ಲಿ 300ಕ್ಕೂ ಅಧಿಕ ಮನೆಗಳನ್ನು ನಿರ್ಮಾಣದ ಶಂಕುಸ್ಥಾಪನೆಯನ್ನು ನೆರವೇರಿಸಲಾಗಿದೆ. ಇನ್ನು ಇದೇ 20ರಂದು ಪ್ರಧಾನಿ ಮೋದಿ ಅವರು ಗೋವಿಂದರಾಜನಗರ ಮತಕ್ಷೇತ್ರದಲ್ಲಿರುವ ಡಾ. ಅಂಬೇಡ್ಕರ್ ಸ್ಕೂಲ್ ಆಫ್ ಎಕನಾಮಿಕ್ಸ್ ಉದ್ಘಾಟನೆ ಹಾಗೂ ಸಬ್ ಅರ್ಬನ್ ರೈಲು ಯೋಜನೆಗೆ ಶಂಕುಸ್ತಾಪನೆಯನ್ನು ನೆರವೇರಿಸಲಿದ್ದಾರೆ. ಈ ಕಾರ್ಯಕ್ರಮಕ್ಕೆ ಸಂಬಂಧಿಸಿದಂತೆ ಸಿದ್ಧತೆಗಳು ಭರದಿಂದ ಸಾಗಿವೆ ಎಂದರು. ಈ ಸಂದರ್ಭದಲ್ಲಿ, ಸಮತಾ ಸೈನಿಕ ದಳದ ವೆಂಕಟಸ್ವಾಮಿ, ಕರ್ನಾಟಕ ಕೊಳಚೆ ನಿರ್ಮೂಲನಾ ಮಂಡಳಿಯ ಆಯುಕ್ತರಾದ ಬಿ.ವೆಂಕಟೇಶ್, ಸಂಬಂಧಪಟ್ಟ ಅಧಿಕಾರಿಗಳು ಹಾಗೂ ಮಂಗಳಮುಖಿಯರು ಉಪಸ್ಥಿತರಿದ್ದರು.

Related Articles

Leave a Reply

Your email address will not be published. Required fields are marked *

Back to top button