ಬೆಂಗಳೂರು

40ಕ್ಕೂ ಹೆಚ್ಚು ಎ.ಸಿ.ಬಿ ಅಧಿಕಾರಿಗಳಿಂದ ಶಾಸಕ ಜಮೀರ್ ಮನೆ, ಕಛೇರಿ ಮೇಲೆ ದಾಳಿ

ಬೆಂಗಳೂರು: ಕಾಂಗ್ರೆಸ್‌ ಶಾಸಕ ಜಮೀರ್ ಅಹ್ಮದ್ ಖಾನ್ ಅವರಿಗೆ ಬೆಳ್ಳಂಬೆಳಗ್ಗೆಯೇ ಎಸಿಬಿ ಅಧಿಕಾರಿಗಳು ಶಾಕ್ ನೀಡಿದ್ದಾರೆ.
ಎಸಿಬಿ ಅಧಿಕಾರಿಗಳ ತಂಡ ಮಂಗಳವಾರ ಬೆಳಗ್ಗೆ ಚಾಮರಾಜಪೇಟೆಯ ಕಾಂಗ್ರೆಸ್‌ ಶಾಸಕ ಜಮೀರ್ ಅಹ್ಮದ್‌ ಖಾನ್ ಅವರ ನಿವಾಸ ಸೇರಿದಂತೆ ಅವರಿಗೆ ಸೇರಿದ ಪ್ರಮುಖ ಐದು ಕಡೆಗಳಲ್ಲಿ ದಾಳಿ ನಡೆಸಿದ್ದು, ಸುಮಾರು 40 ಕ್ಕೂ ಹೆಚ್ಚು ಸದಸ್ಯರಿದ್ದ ಭ್ರಷ್ಟಾಚಾರ ನಿಗ್ರಹ ದಳ ತಂಡದ ಅಧಿಕಾರಿಗಳು ಶಾಸಕ ಜಮೀರ್ ಅಹ್ಮದ್ ಖಾನ್ ಅವರಿಗೆ ಬೆಳ್ಳಂಬೆಳಗ್ಗೆಯೇ ಆಘಾತ ನೀಡಿದ್ದಾರೆ.
ಜಾರಿ ನಿರ್ದೇಶನಾಲಯದ ವರದಿಯ ಆಧಾರದ ಮೇಲೆ ಭ್ರಷ್ಟಾಚಾರ ನಿಗ್ರಹದ ದಳದ ಅಧಿಕಾರಿಗಳು ಶಾಸಕ ಜಮೀರ್ ಅಹ್ಮದ್‌ ಖಾನ್ ಅವರ ವಿರುದ್ಧ ಅಕ್ರಮ ಆಸ್ತಿ ಪ್ರಕರಣ ದಾಖಲಿಸಿಕೊಂಡಿದ್ದು, ಜಮೀರ್ ಖಾನ್ ಅವರಿಗೆ ಸೇರಿದ ಐದು ಕಡೆಗಳಲ್ಲಿ ಎಸಿಬಿ ಅಧಿಕಾರಿಗಳು ದಾಳಿ ನಡೆಸಿದ್ದಾರೆ. ಜಮೀರ್ ಅಹ್ಮದ್ ಖಾನ್ ಅವರಿಗೆ ಸೇರಿದ ರೈಲ್ವೆ ಕಂಟೋನ್‌ಮೆಂಟ್‌ ಬಳಿಯಿರುವ ಮನೆ, ಕಲಾಸಿಪಾಳ್ಯದಲ್ಲಿ ಇರುವ ನ್ಯಾಷನಲ್ ಟ್ರಾವೆಲ್ಸ್‌ ಕಚೇರಿ, ಸಿಲ್ವರ್‌ ಓಕ್‌ ಅಪಾರ್ಟ್‌ಮೆಂಟ್‌ನಲ್ಲಿರುವ ಫ್ಲಾಟ್‌, ಸದಾಶಿವನಗರದಲ್ಲಿರುವ ಗೆಸ್ಟ್‌ಹೌಸ್‌ ಮತ್ತು ಬನಶಂಕರಿಯಲ್ಲಿರುವ ಜಿ.ಕೆ ಅಸೋಸಿಯೇಟ್ಸ್‌ ಕಚೇರಿ ಮೇಲೆ 40 ಕ್ಕೂ ಹೆಚ್ಚು ಎಸಿಬಿ ಅಧಿಕಾರಿಗಳ ತಂಡ ದಾಳಿ ನಡೆಸಿದ್ದು, ಪ್ರಮುಖ ದಾಖಲೆಗಳನ್ನು ವಶಕ್ಕೆ ಪಡೆದು ತನಿಖೆಯನ್ನು ಆರಂಭಿಸಿದ್ದಾರೆ.

ಕಳೆದ ವರ್ಷ ಕೂಡ ಶಾಸಕ ಜಮೀರ್ ಅಹ್ಮದ್ ಖಾನ್ ಅವರ ಮನೆ ಮೇಲೆ ಐಟಿ ಅಧಿಕಾರಿಗಳು ದಾಳಿ ನಡೆಸಿ ಪ್ರಮುಖ ದಾಖಲೆಗಳನ್ನು ಪರಿಶೀಲಿಸಿದ್ದರು. ಜಮೀರ್ ಅಹ್ಮದ್ ಅವರು ಕೋಟ್ಯಂತರ ಮೌಲ್ಯದ ಭವ್ಯವಾದ ಮನೆ ಕಟ್ಟಿರುವುದರ ಮೇಲೆ ಕಣ್ಣಿಟ್ಟಿದ್ದ ಅಧಿಕಾರಿಗಳು ಅದರ ಆದಾಯ ಮೂಲ ಯಾವುದು ಎಂದು ಪರಿಶೀಲಿಸಿದ್ದರು. ಜೊತೆಗೆ ನ್ಯಾಷನಲ್ ಟ್ರಾವೆಲ್ಸ್‌ ಸೇರಿದಂತೆ ಜಮೀರ್ ಖಾನ್‌ಗೆ ಸಂಬಂಧಿಸಿದಂತೆ ಮನೆ, ಕಚೇರಿ ಇನ್ನಿತರ ಕಡೆ ಪರಿಶೀಲನೆ ನಡೆಸಿದ್ದರು.

Related Articles

Leave a Reply

Your email address will not be published. Required fields are marked *

Back to top button