5ನೇ ದಿನವೂ ಇಡಿಯಿಂದ ರಾಹುಲ್ ಗಾಂಧಿ ವಿಚಾರಣೆ

ನ್ಯಾಷನಲ್ ಹೆರಾಲ್ಡ್ ಅಕ್ರಮ ಹಣ ವರ್ಗಾವಣೆ ಪ್ರಕರಣಕ್ಕೆ ಸಂಬಂಧಿಸಿದಂತೆ ಕಾಂಗ್ರೆಸ್ ನಾಯಕರಾಹುಲ್ ಗಾಂಧಿ ಅವರನ್ನು ಜಾರಿ ನಿರ್ದೇಶನಾಲಯದ ಐದನೇ ದಿನವೂ ವಿಚಾರಣೆ ನಡೆಸಿದೆ.
ರಾಹುಲ್ ತಮ್ಮ ಭದ್ರತಾ ಬೆಂಗಾವಲು ಸಿಬ್ಬಂದಿಯೊಂದಿಗೆ ದೆಹಲಿಯ ಎಪಿಜೆ ಅಬ್ದುಲ್ ಕಲಾಂ ರಸ್ತೆಯಲ್ಲಿರುವ ಇಡಿ ಪ್ರಧಾನ ಕಚೇರಿಗೆ ಬೆಳಿಗ್ಗೆ 11.15 ಕ್ಕೆ ಆಗಮಿಸಿದರು.
ಕಾಂಗ್ರೆಸ್ ಕಾರ್ಯಕರ್ತರು ಪ್ರತಿಭಟನೆ ನಡೆಸಬಹುದು ಎಂಬ ನಿರೀಕ್ಷೆಯಿಂದ ಕಚೇರಿ ಸುತ್ತಾ ನಿಷೇಧಾಜ್ಞೆ ಜಾರಿಗೊಳಿಸಿದ್ದು, ವ್ಯಾಪಕ ಭದ್ರತೆ ಒದಗಿಸಲಾಗಿದೆ.
ವಯನಾಡ್ನ ಕ್ಷೇತ್ರದ ಕಾಂಗ್ರೆಸ್ ಸಂಸದರಾಗಿರುವ ರಾಹುಲ್ ಗಾಂಧಿ ಯನ್ನು ಕಳೆದ ನಾಲ್ಕು ದಿನಗಳಲ್ಲಿ 42 ಗಂಟೆಗಳ ಕಾಲ ಇಡಿ ವಿಚಾರಣೆ ನಡೆಸಿದೆ.ಕಳೆದ ವಾರ ಸತತ ಮೂರು ದಿನಗಳ ಕಾಲ ಅವರನ್ನು ವಿಚಾರಣೆಗೆ ಒಳಪಡಿಸಲಾಗಿತ್ತು.
ಸೋಮವಾರದಿಂದ ಮತ್ತೆ ವಿಚಾರಣೆನಡೆಸಿ ಹೇಳಿಕೆ ದಾಖಲಿಸಿಕೊಳ್ಳಲಾಗಿದೆ. ಸೋಮವಾರ ಮಧ್ಯರಾತ್ರಿವರೆಗೂ ವಿಚಾರಣೆ ನಡೆದಿದೆ.
ಇಂದು ಬೆಳಗ್ಗೆಯೂ ವಿಚಾರಣೆ ನಡೆಸಲಾಗಿದೆ.ನ್ಯಾಷನಲ್ ಹೆರಾಲ್ಡ್ ಪತ್ರಿಕೆಯ ಮಾಲೀಕತ್ವ ಹೊಂದಿರುವ ಕಾಂಗ್ರೆಸ್-ಪ್ರಚಾರದ ಯಂಗ್ ಇಂಡಿಯನ್ ಪ್ರೈವೇಟ್ ಲಿಮಿಟೆಡ್ನಲ್ಲಿನ ಹಣಕಾಸಿನ ಅಕ್ರಮಗಳಿಗೆ ಸಂಬಂಧಿಸಿದಂತೆ ವಿಚಾರಣೆ ನಡೆಯುತ್ತಿದೆ.
ಇದೇ ಪ್ರಕರಣದಲ್ಲಿ ಜೂನ್ 23 ರಂದು ಕಾಂಗ್ರೆಸ್ ಅಧ್ಯಕ್ಷೆ ಸೋನಿಯಾ ಗಾಂಧಿ ಅವರನ್ನೂ ವಿಚಾರಣೆಗೂ ಸಮನ್ಸ್ ನೀಡಲಾಗಿದೆ.
ಕೋವಿಡ್ನಿಂದ ಖಾಸಗಿ ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆದ ಅವರು ಸೋಮವಾರ ಆಸ್ಪತ್ರೆಯಿಂದ ಡಿಸ್ಚಾರ್ಜ್ ಆಗಿದ್ದಾರೆ.ಸದ್ಯಕ್ಕೆ ವಿಶ್ರಾಂತಿ ಪಡೆಯಲು ಅವರಿಗೆ ಸೂಚಿಸಲಾಗಿದೆ.