
ಸದ್ಯ ಗೋವಾದಲ್ಲಿ ದಿಗಂತ್ ಅವರಿಗೆ ಪ್ರಾಥಮಿಕ ಚಿಕಿತ್ಸೆ ನೀಡಲಾಗುತ್ತಿದೆ. ಕೆಲವೇ ಗಂಟೆಗಳಲ್ಲಿ ಏರ್ ಲಿಫ್ಟ್ ಮೂಲಕ ಬೆಂಗಳೂರಿನ ಮಣಿಪಾಲ್ ಆಸ್ಪತ್ರೆಗೆ ದಿಗಂತ್ ಅವರನ್ನು ಕುಟುಂಬಸ್ಥರು ಕರೆತರಲಿದ್ದಾರೆ ಎಂದು ಹೇಳಲಾಗಿದೆ.
ನಟ ದಿಗಂತ್ ಕುತ್ತಿಗೆಗೆ ಬಲವಾದ ಪೆಟ್ಟು ಬಿದ್ದಿದೆ. ಗೋವಾದ ಸಮುದ್ರ ತಟದಲ್ಲಿ ಸಮ್ಮರ್ ಶಾಟ್ ಹೊಡೆಯುವ ವೇಳೆ ದಿಗಂತ್ ಕುತ್ತಿಗೆಗೆ ಪೆಟ್ಟು ಬಿದ್ದಿದೆ.
ಕುಟುಂಬದ ಜೊತೆ ನಟ ದಿಗಂತ್ ಗೋವಾ ಪ್ರವಾಸಕ್ಕೆ (Goa Tour) ತೆರಳಿದ್ದರು. ಈ ವೇಳೆ ದಿಗಂತ್ (Actor Diganth) ಕುತ್ತಿಗೆಗೆ ಬಲವಾದ ಪೆಟ್ಟು ಬಿದ್ದಿದೆ. ದಿಗಂತ್ ಕುತ್ತಿಗೆಗೆ ಬಲವಾದ ಪೆಟ್ಟು ಬಿದ್ದಿರುವ ಬಗ್ಗೆ ದಿಗಂತ್ ಆಪ್ತರಿಂದ ಮಾಹಿತಿ ದೊರೆತಿದೆ. ಸದ್ಯ ಗೋವಾದಲ್ಲೆ ದಿಗಂತ್ ಅವರಿಗೆ ಪ್ರಾಥಮಿಕ ಚಿಕಿತ್ಸೆ ನೀಡಲಾಗುತ್ತಿದೆ.
ಕೆಲವೇ ಗಂಟೆಗಳಲ್ಲಿ ಏರ್ ಲಿಪ್ಟ್ ಮೂಲಕ ಬೆಂಗಳೂರಿನ ಮಣಿಪಾಲ್ ಆಸ್ಪತ್ರೆಗೆ ದಿಗಂತ್ ಅವರನ್ನು ಕುಟುಂಬಸ್ಥರು ಕರೆತರಲಿದ್ದಾರೆ ಎಂದು ಹೇಳಲಾಗಿದೆ.
ದೂದ್ಪೇಡಾ ದಿಗಂತ್ ಎಂದೇ ಹೆಸರುವಾಸಿಯಾಗಿರುವ ನಟ ದಿಗಂತ್ ತಮ್ಮ ನಟನೆಯಿಂದಲೇ ಹೆಸರುವಾಸಿಯಾದವರು. ಇತ್ತೀಚಿಗೆ ಅವರ ನಟನೆಯ ಕ್ಷಮಿಸಿ ನಿಮ್ಮ ಖಾತೆಯಲ್ಲಿ ಹಣವಿಲ್ಲ ಸಿನಿಮಾ ಬಿಡುಗಡೆಗೊಂಡಿತ್ತು.
ಈ ಚಿತ್ರದಲ್ಲಿ ಅವರ ಪತ್ನಿ ಐಂದ್ರಿತಾ ರೇ ಸಹ ಅಭಿನಯಿಸಿದ್ದರು. ವಿನಾಯಕ ಕೋಡ್ಸರ ಕ್ಷಮಿಸಿ ನಿಮ್ಮ ಖಾತೆಯಲ್ಲಿ ಹಣವಿಲ್ಲ ಸಿನಿಮಾ ನಿರ್ದೇಶನ ಮಾಡಿದ್ದರು.