ಉದ್ಯೋಗ

BBMP Recruitment 2022: ಈ ಹುದ್ದೆಗಳಿಗೆ 18 ರಿಂದ 35 ವರ್ಷದೊಳಗಿನ ಅಭ್ಯರ್ಥಿಗಳು ಅರ್ಜಿ ಸಲ್ಲಿಸಬಹುದು.

BBMP Recruitment 2022: ಈ ಹುದ್ದೆಗಳಿಗೆ 18 ರಿಂದ 35 ವರ್ಷದೊಳಗಿನ ಅಭ್ಯರ್ಥಿಗಳು ಅರ್ಜಿ ಸಲ್ಲಿಸಬಹುದು. ಇನ್ನು ಮೀಸಲಾತಿ ವಿಭಾಗದ ಅಭ್ಯರ್ಥಿಗಳಿಗೆ (2ಎ, 2ಬಿ, 3ಎ, 3ಬಿ) 38 ವರ್ಷದವರೆಗೆ ವಯೋಮಿತಿ ಸಡಿಲಿಕೆ ನೀಡಲಾಗಿದೆ.
ಬೃಹತ್‌ ಬೆಂಗಳೂರು ನಗರ ಪಾಲಿಕೆಯು (ಬಿಬಿಎಂಪಿ) ಆರಂಭಿಸುತ್ತಿರುವ ನಮ್ಮ ಕ್ಲಿನಿಕ್ ​ನಲ್ಲಿ ಕಾರ್ಯ ನಿರ್ವಹಿಸಲು ವೈದ್ಯರು, ಶುಶ್ರೂಷಕಿಯರು ಸೇರಿದಂತೆ ವಿವಿಧ ಹುದ್ದೆಗಳಿಗೆ ಅರ್ಜಿಯನ್ನು ಆಹ್ವಾನಿಸಲಾಗಿದೆ.

ಕೇಂದ್ರ ಸರ್ಕಾರದ 15ನೇ ಹಣಕಾಸು ಆಯೋಗದ ಯೋಜನೆಯಡಿಯಲ್ಲಿ ಕರ್ನಾಟಕ ಸರ್ಕಾರ ಮತ್ತು ಬಿಬಿಎಂಪಿ ಬೆಂಗಳೂರಿನಲ್ಲಿ ಹೊಸ ಸೇವೆಯನ್ನು ಪ್ರಾರಂಭಿಸುತ್ತಿದೆ. ಇದಕ್ಕಾಗಿ ವೈದ್ಯಾಧಿಕಾರಿಗಳು, ಶುಶ್ರೂಷಕಿ/ಶುಶ್ರೂಷಕರು, ಪ್ರಯೋಗಶಾಲಾ ತಂತ್ರಜ್ಞರು ಹಾಗೂ ನಾಲ್ಕನೇ ದರ್ಜೆ ನೌಕರರು ಸೇರಿದಂತೆ ಒಟ್ಟು 32 ಹುದ್ದೆಗಳಿಗೆ ಅಭ್ಯರ್ಥಿಗಳನ್ನು ಆಯ್ಕೆ ಮಾಡಲಾಗುತ್ತದೆ. ಅಂದರೆ ಇಲ್ಲಿ ಆಯಾ ವಿಭಾಗದಲ್ಲಿ ತಲಾ 8 ಮಂದಿಯನ್ನು ನೇಮಕ ಮಾಡಲಾಗುತ್ತದೆ. ಈ ನೇಮಕಾತಿ ಕುರಿತಾದ ಮತ್ತಷ್ಟು ಮಾಹಿತಿ ಈ ಕೆಳಗಿನಂತಿದೆ.

ಆಯ್ಕೆ ಪ್ರಕ್ರಿಯೆ ಹೇಗೆ?
ಈ ಹುದ್ದೆಗಳಿಗೆ ಅರ್ಹ ಅಭ್ಯರ್ಥಿಗಳನ್ನು ಮೆರಿಟ್ ಕಮ್ ರೋಸ್ಟರ್ ಆಧಾರದ ಮೇಲೆ ಆಯ್ಕೆ ಮಾಡಲಾಗುತ್ತದೆ. ಇಲ್ಲಿ ಗಮನಿಸಬೇಕಾದ ಮತ್ತೊಂದು ಅಂಶವೆಂದರೆ ಈ ನೇಮಕಾತಿಯು ಒಂದು ವರ್ಷದ ಗುತ್ತಿಗೆ ಒಪ್ಪಂದೊಂದಿಗೆ ಇರಲಿದೆ. ಇನ್ನು ಅಭ್ಯರ್ಥಿಗಳನ್ನು ನೇರ ಸಂದರ್ಶನದ ಮೂಲಕ ಆಯ್ಕೆ ಮಾಡಲಾಗುವುದು ಎಂದು ಅಧಿಸೂಚನೆಯಲ್ಲಿ ತಿಳಿಸಲಾಗಿದೆ.

ಅರ್ಹತಾ ಮಾನದಂಡಗಳು:
ಆಯಾ ಹುದ್ದೆಗಳಿಗೆ ಅರ್ಜಿ ಸಲ್ಲಿಸುವ ಅಭ್ಯರ್ಥಿಗಳು ಸಂಬಂಧಿತ ವಿಷಯದಲ್ಲಿ ಪರಿಣಿತರಾಗಿರಬೇಕು. ಅಲ್ಲದೆ ಎಲ್ಲಾ ರೀತಿಯ ಶೈಕ್ಷಣಿಕ ಪ್ರಮಾಣ ಪತ್ರಗಳನ್ನು ಹೊಂದಿರಬೇಕಾಗುತ್ತದೆ.

ವಯೋಮಿತಿ:
ಈ ಹುದ್ದೆಗಳಿಗೆ 18 ರಿಂದ 35 ವರ್ಷದೊಳಗಿನ ಅಭ್ಯರ್ಥಿಗಳು ಅರ್ಜಿ ಸಲ್ಲಿಸಬಹುದು. ಇನ್ನು ಮೀಸಲಾತಿ ವಿಭಾಗದ ಅಭ್ಯರ್ಥಿಗಳಿಗೆ (2ಎ, 2ಬಿ, 3ಎ, 3ಬಿ) 38 ವರ್ಷದವರೆಗೆ ವಯೋಮಿತಿ ಸಡಿಲಿಕೆ ನೀಡಲಾಗಿದೆ. ಹಾಗೆಯೇ ಪರಿಶಿಷ್ಠ ಜಾತಿ, ಪ.ಪಂಗಡ, ವರ್ಗ-1 ಅಭ್ಯರ್ಥಿಗಳಿಗೆ 40 ವರ್ಷದವರೆಗೆ ವಯೋಮಿತಿ ನಿಗದಿಪಡಿಸಲಾಗಿದೆ.

ಸ್ಥಳೀಯರಿಗೆ ಅವಕಾಶ:
ಈ ಹುದ್ದೆಗಳಿಗೆ ಅರ್ಜಿ ಸಲ್ಲಿಸುವ ವೈದ್ಯಾಧಿಕಾರಿಗಳು, ಶುಶ್ರೂಷಕಿ/ಶುಶ್ರೂಷಕರು, ಪ್ರಯೋಗಶಾಲಾ ತಂತ್ರಜ್ಞರು ಹಾಗೂ ನಾಲ್ಕನೇ ದರ್ಜೆಯ ಅಭ್ಯರ್ಥಿಗಳಿಗೆ ಕನ್ನಡ ಭಾಷೆ ಗೊತ್ತಿರಬೇಕಿರುವುದು ಕಡ್ಡಾಯವಾಗಿದೆ.

ಅರ್ಜಿ ಸಲ್ಲಿಸುವುದು ಹೇಗೆ?
ಆಸಕ್ತರು ಬಿಬಿಎಂಪಿ ವೆಬ್‌ಸೈಟ್‌ನಲ್ಲಿ ನೀಡಿರುವ ಅರ್ಜಿ ನಮೂನೆಯನ್ನು ಡೌನ್‌ಲೋಡ್ ಮಾಡಿ, ಆ ಬಳಿಕ ಅದನ್ನು ಭರ್ತಿ ಮಾಡಬೇಕು. ಈ ಅರ್ಜಿಯೊಂದಿಗೆ ಹಾಗೂ ಸಂಬಂಧಿಸಿದ ದಾಖಲೆಗಳೊಂದಿಗೆ ನೇರವಾಗಿ ಸಂದರ್ಶನದಲ್ಲಿ ಭಾಗವಹಿಸಬಹುದು.

ಈ ನೇಮಕಾತಿ ಕುರಿತಾದ ಮತ್ತಷ್ಟು ಮಾಹಿತಿಗಾಗಿ ದೂರವಾಣಿ ಸಂಖ್ಯೆ 080-22975516 ಅನ್ನು ಸಂಪರ್ಕಿಸಿ. ಹಾಗೆಯೇ ಈಮೇಲ್ ಐಡಿ choph515@gmail.com ಮೂಲಕ ಕೂಡ ಮಾಹಿತಿ ಪಡೆಯಬಹುದು. ಇದಲ್ಲದೆ ಬೃಹತ್ ಬೆಂಗಳೂರು ಮಹಾನಗರ ಪಾಲಿಕೆಯ ವೆಬ್‌ಸೈಟ್ www.bbmp.gov.in ಭೇಟಿ ನೀಡುವ ಹೆಚ್ಚಿನ ಮಾಹಿತಿಯನ್ನು ಕಲೆಹಾಕಬಹುದು.

𝐂𝐡𝐚𝐧𝐝𝐚𝐧 𝐌𝐑𝐂

𝐃𝐈𝐑𝐄𝐂𝐓𝐎𝐑 -𝐍𝐂𝐈𝐁 𝐓𝐈𝐌𝐄𝐒 𝐌𝐄𝐃𝐈𝐀 𝟐𝟒/𝟕 𝐏𝐕𝐓. 𝐋𝐓𝐃.

Related Articles

Leave a Reply

Your email address will not be published. Required fields are marked *

Back to top button