Uncategorized

BIG NEWS: ‘ಕಾಂಗ್ರೆಸ್‌ ಪಕ್ಷ’ದಲ್ಲಿರುವ ಯುವ ನಾಯಕರು ಯಾರು? – ಬಿಜೆಪಿ | Karnataka Politics

ಬೆಂಗಳೂರು: ಕಾಂಗ್ರೆಸ್ ( Congress Party ) ಚಿಂತನಾ ಶಿಬಿರದಲ್ಲಿ ಹಿರಿಯ ನಾಯಕರಿಗೆ ಗೇಟ್ ಪಾಸ್ ನೀಡುವ ಮುನ್ಸೂಚನೆ ನೀಡಲಾಗಿದೆ. ಕಾಂಗ್ರೆಸ್‌ ಪಕ್ಷದಲ್ಲಿರುವ ಯುವ ನಾಯಕರು ಯಾರು? ಕಾಂಗ್ರೆಸ್ ಪಕ್ಷದಲ್ಲಿ ಯೌವನ ನಿರ್ಧಾರವಾಗುವುದು 50 ರ ನಂತರವೇ?

ಎಂಬುದಾಗಿ ನಕಲಿ ಗಾಂಧಿ ಕುಟುಂಬ ( Gandhi Family ) ಪುನಶ್ಚೇತನಾ ಶಿಬಿರ ಎಂಬುದಾಗಿ ಬಿಜೆಪಿ (BJP ) ವ್ಯಂಗ್ಯವಾಡಿದೆ.

ಈ ಕುರಿತು ಸರಣಿ ಟ್ವಿಟ್ ಮಾಡಿರುವಂತ ಬಿಜೆಪಿ ಕರ್ನಾಟಕ ( BJP Karnataka ), ಕಾಂಗ್ರೆಸ್ ಚಿಂತನಾ ಶಿಬಿರದಲ್ಲೇನೋ ವಯೋನಿವೃತ್ತಿಯ ಪ್ರಸ್ತಾಪವಾಗಿದೆ. ಆದರೆ ಯಾವಾಗ? 70 ಕಳೆದ ಮೇಲೂ ಅಧಿಕಾರ ಅನುಭವಿಸಲು ತಂತ್ರಗಾರಿಕೆ ನಡೆಸುವ ಕಾಂಗ್ರೆಸ್ ‘ಯಯಾತಿ’ಗಳ ಮೋಹ ಕಳಚುವುದೇ? ಎಂದು ಪ್ರಶ್ನಿಸಿದೆ.

ರಾಜ್ಯ ವಿಧಾನಸಭೆಯಲ್ಲಿ ಕಾಂಗ್ರೆಸ್ ಸಂಖ್ಯಾಬಲ ಈಗ 60+ ಚಿಂತನಾ ಶಿಬಿರದಲ್ಲಿ 50% ರಷ್ಟು ಕ್ಷೇತ್ರಗಳನ್ನು 50 ವರ್ಷದೊಳಗಿನವರಿಗೆ ನೀಡಬೇಕೆಂದು ಕಾಂಗ್ರೆಸ್‌ ಸಂಕಲ್ಪ ಮಾಡಿದೆ. ಈ ನಿಯಮವನ್ನು ರಾಜ್ಯದಲ್ಲಿ ಯಥಾವತ್ತಾಗಿ ಜಾರಿಗೆ ತಂದಲ್ಲಿ ಕಾಂಗ್ರೆಸ್‌ 60+ ನಿಂದ 30+ ಗೆ ಕ್ಕೆ ಇಳಿಯುವುದು ನಿಶ್ಚಿತ ಎಂದು ಹೇಳಿದೆ.

ಒಂದು ಮನೆಯಿಂದ ಒಬ್ಬರಿಗೆ ಟಿಕೆಟ್ ಎಂಬುದು ಕಾಂಗ್ರೆಸ್‌ ಪಕ್ಷದ ಹೊಸ ನಾಟಕ. ನಕಲಿ ಗಾಂಧಿ ಕುಟುಂಬಿಕರಿಗೆ ಮತ್ತು ಅವರ ಪಾದ ಪೂಜಕರಿಗೆ ಅನ್ವಯವಾಗುವುದಿಲ್ಲ ಎಂಬ ಷರತ್ತು ಅಳವಡಿಸಿರುವುದು ಅವರ ಬೂಟಾಟಿಕೆಗೆ ಸಾಕ್ಷಿ. 70 ಮೇಲ್ಪಟ್ಟವರಿಗೆ ಟಿಕೆಟ್ ನೀಡದ ಹೊಸ ನಿಯಮವೂ ಇವರಾರಿಗೂ ಅನ್ವಯವಾಗದು ಎಂದು ತಿಳಿಸಿದೆ.

𝐂𝐡𝐚𝐧𝐝𝐚𝐧 𝐌𝐑𝐂

𝐃𝐈𝐑𝐄𝐂𝐓𝐎𝐑 -𝐍𝐂𝐈𝐁 𝐓𝐈𝐌𝐄𝐒 𝐌𝐄𝐃𝐈𝐀 𝟐𝟒/𝟕 𝐏𝐕𝐓. 𝐋𝐓𝐃.

Related Articles

Leave a Reply

Your email address will not be published. Required fields are marked *

Back to top button