Uncategorized
BIG NEWS: ‘ಪಿಎಸ್‌ಐ ನೇಮಕಾತಿ ಪರೀಕ್ಷೆ’ಯಲ್ಲಿ ಅಕ್ರಮ ನಡೆದಿಲ್ಲ – ಪೊಲೀಸ್ ಮಹಾನಿರ್ದೇಶಕ ಪ್ರವೀಣ್ ಸೂದ್

ಬೆಂಗಳೂರು: ಪಿಎಸ್‌ಐ ನೇಮಕಾತಿ ಪರೀಕ್ಷೆಯಲ್ಲಿ ಅಕ್ರಮ ಕಂಡು ಬಂದಿಲ್ಲ. ಆದ್ರೇ ಉತ್ತರ ಪ್ರತಿಗಳು ಮ್ಯಾನಿಪ್ಲೇಟ್ ಮಾಡಿರೋ ಅನುಮಾನದ ಮೇರೆಗೆ ಎಫ್‌ಐಆರ್ ದಾಖಲಿಸಿಕೊಂಡು, ತನಿಖೆ ನಡೆಸಲಾಗುತ್ತಿದೆ. ಈ ಪ್ರಕರಣವನ್ನು ಸಿಐಡಿ ತನಿಖೆ ನಡೆಸುತ್ತಿದೆ ಎಂಬುದಾಗಿ ರಾಜ್ಯ ಪೊಲೀಸ್ ಮಹಾನಿರ್ದೇಶಕ ಪ್ರವೀಣ್ ಸೂದ್ ಹೇಳಿದ್ದಾರೆ.
ಇಂದು ನಗರದಲ್ಲಿ ಸುದ್ದಿಗಾರರೊಂದಿಗೆ ಮಾತನಾಡಿದಂತ ಅವರು, ಪಿಎಸ್‌ಐ ನೇಮಕಾತಿ ಅಕ್ರಮ ಕುರಿತಂತೆ ಸಿಐಡಿ ಪೊಲೀಸರಿಂದ ತನಿಖೆ ನಡೆಯುತ್ತಿದೆ. ಇದೇ ಪ್ರಕರಣದಲ್ಲಿ ಕೆಲವರನ್ನು ಬಂಧಿಸಲಾಗಿದೆ ಎಂದರು.
545 ಪಿಎಸ್‌ಐ ನೇಮಕಾತಿ ಸಂಬಂಧ ಸರ್ಕಾರದಿಂದ ಹೊರಡಿಸಲಾದ ಅಧಿಸೂಚನೆಯಂತೆ ಪರೀಕ್ಷೆ ನಡೆಸಲಾಗಿದೆ. ಪರೀಕ್ಷೆಯಲ್ಲಿ ಯಾವುದೇ ಅಕ್ರಮ ನಡೆದಿಲ್ಲ. ಆದ್ರೇ ಪರೀಕ್ಷಾ ಕೇಂದ್ರಗಳಲ್ಲಿ ಉತ್ತರ ಪ್ರತಿಗಳು ಮ್ಯಾನಿಪ್ಲೇಟ್ ಮಾಡಿರೋ ಅನುಮಾನದ ಮೇರೆಗೆ ಎಫ್‌ಐಆರ್ ದಾಖಲಿಸಿಕೊಂಡು, ತನಿಖೆ ಮಾಡಲಾಗುತ್ತಿದೆ ಎಂದು ತಿಳಿಸಿದರು.