Uncategorized
Big news: ಬಿಹಾರ ಮುಖ್ಯಮಂತ್ರಿ ನಿತೀಶ್ ಕುಮಾರ್ಗೆ ಎರಡನೇ ಬಾರಿ ಕೋವಿಡ್ ದೃಢ| CM Nitish Kumar tests Covid positive

ಬಿಹಾರ: ಬಿಹಾರಮುಖ್ಯಮಂತ್ರಿ ನಿತೀಶ್ ಕುಮಾರ್ ಅವರಿಗೆ ಕೋವಿಡ್ ಸೋಂಕು ತಗುಲಿದೆ. ನಿತೀಶ್ ಅವರು ಕಳೆದ ನಾಲ್ಕು ದಿನಗಳಿಂದ ಜ್ವರದಿಂದ ಬಳಲುತ್ತಿದ್ದರು ಎನ್ನಲಾಗುತ್ತಿದೆ.
ನಿತೀಶ್ ಕುಮಾರ್ ಅವರಿಗೆ ಎರಡನೇ ಬಾರಿಗೆ ಸೋಂಕು ತಗುಲಿದೆ.ಜನವರಿಯಲ್ಲಿ ಕರೋನಾ ಪಾಸಿಟಿವ್ ಬಂದಿತ್ತು. ಜ್ವರದಿಂದ ಬಳಲುತ್ತಿದ್ದ ಹಿನ್ನೆಲೆಯಲ್ಲಿ ನಿತೀಶ್ ಕುಮಾರ್ ಅವರು ರಾಷ್ಟ್ರ ರಾಜಧಾನಿಯಲ್ಲಿ ನಡೆದ ಅಧ್ಯಕ್ಷರಾಗಿ ಆಯ್ಕೆಯಾದ ದ್ರೌಪದಿ ಮುರ್ಮು ಅವರ ಪ್ರಮಾಣ ವಚನ ಸಮಾರಂಭದಲ್ಲಿ ಭಾಗವಹಿಸಿರಲಿಲ್ಲ.
ಭಾರತದಲ್ಲಿ ಇಂದು 14,830 ಹೊಸ ಕರೋನಾ ಪ್ರಕರಣಗಳು ವರದಿಯಾಗಿವೆ. ಈ ಮೂಲಕ ಸೋಂಕಿತರ ಸಂಖ್ಯೆ 4,39,20,451 ಕ್ಕೆ ಏರಿದೆ. ಸಕ್ರಿಯ ಪ್ರಕರಣಗಳ ಸಂಖ್ಯೆ 1,47,512 ಕ್ಕೆ ಇಳಿದಿದೆ ಎಂದು ಕೇಂದ್ರ ಆರೋಗ್ಯ ಸಚಿವಾಲಯದ ಅಂಕಿಅಂಶಗಳು ತಿಳಿಸಿವೆ.
ಕೋವಿಡ್ಗೆ 36 ಹೊಸ ಸಾವುಗಳು ದಾಖಲಾಗುವುದರೊಂದಿಗೆ ಈ ಕಾಯಿಲೆಯಿಂದ ಸಾವನ್ನಪ್ಪಿದವರ ಸಂಖ್ಯೆ 5,26,110 ಕ್ಕೆ ಏರಿದೆ.