Uncategorized
BIGG NEWS : ಆಗಸ್ಟ್ 3 ರಂದು ಆಯೋಜಿಸಿರುವುದು `ಸಿದ್ದರಾಮೋತ್ಸವ’ ಅಲ್ಲ : ಕೆಪಿಸಿಸಿ ಕಾರ್ಯಾಧ್ಯಕ್ಷ ಸಲೀಂ ಅಹ್ಮದ್ ಸ್ಪಷ್ಟನೆ

ನವದೆಹಲಿ : ಆಗಸ್ಟ್ 3 ರಂದು ಆಯೋಜಿಸಿರುವುದು ಸಿದ್ದರಾಮೋತ್ಸವ ಕಾರ್ಯಕ್ರಮವಲ್ಲ. ಬಿಜೆಪಿಯವರು ಟೀಕೆ ಮಾಡಲು ಸಿದ್ದರಾಮೋತ್ಸವ ಎಂದು ಹೇಳುತ್ತಿದ್ದಾರೆ ಎಂದು ಕೆಪಿಸಿಸಿ ಕಾರ್ಯಾಧ್ಯಕ್ಷ ಸಲೀಂ ಅಹ್ಮದ್ ಹೇಳಿದ್ದಾರೆ.
ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಸಿದ್ದರಾಮಯ್ಯ ಅವರ 75 ನೇ ಹುಟ್ಟುಹಬ್ಬದ ಹಿನ್ನೆಲೆಯಲ್ಲಿ ಕಾರ್ಯಕ್ರಮ ಮಾಡಲಾಗುತ್ತಿದೆ. ಬಿಜೆಪಿಯವರಿಗೆ ಟೀಕೆ ಮಾಡಲು ಸಿದ್ದರಾಮೋತ್ಸವ ಎಂದು ಹೇಳುತ್ತಿದ್ದಾರೆ. ಕಾಂಗ್ರೆಸ್ ಪಕ್ಷವನ್ನು ಕಟ್ಟಲು ಉತ್ಸವಗಳನ್ನು ಮಾಡುತ್ತೇವೆ ಎಂದರು.
ಸಿದ್ದರಾಮಯ್ಯ ಅವರ ರಾಜಕೀಯ ಜೀವನ ಮತ್ತು ಹೋರಾಟವನ್ನು ಹೊಸ ತಲೆಮಾರಿಗೆ ತಿಳಿಸಲು ಈ ಕಾರ್ಯಕ್ರಮವನ್ನು ಮಾಡಲಾಗುತ್ತಿದೆ.ಸಿದ್ದರಾಮಯ್ಯ ಅವರ ಅಭಿಮಾನಿಗಳು ಕಾರ್ಯಕ್ರಮ ಮಾಡುತ್ತಿದ್ದಾರೆ. ಡಿ.ಕೆ. ಶಿವಕುಮಾರ್ ನನ್ನ ಉತ್ಸವ ಮಾಡಬೇಡಿ. ವ್ಯಕ್ತಿ ಪೂಜೆ ಬೇಡ, ಪಕ್ಷ ಪೂಜೆ ಮಾಡುವಂತೆ ಡಿ.ಕೆ. ಶಿವಕುಮಾರ್ ಹೇಳಿದ್ದಾರೆ ಎಂದರು.