ಅಪರಾಧ
BIGG NEWS : ದಕ್ಷಿಣ ಕನ್ನಡ ಬಿಜೆಪಿ ಮುಖಂಡನ ಭೀಕರ ಹತ್ಯೆ : ಶೀಘ್ರವೇ ದುಷ್ಕರ್ಮಿಗಳನ್ನು ಬಂಧಿಸಿ ಶಿಕ್ಷೆ : ಸಿಎಂ ಬೊಮ್ಮಾಯಿ

ಸುಳ್ಯ : ಬಿಜೆಪಿ ಯುವ ಮುಖಂಡ ಪ್ರವೀಣ್ ನೆಟ್ಟಾರುರನ್ನು ದುಷ್ಕರ್ಮಿಗಳು ಬರ್ಬರವಾಗಿ ಹತ್ಯೆ ಮಾಡಿರುವ ಘಟನೆ ದಕ್ಷಿಣ ಕನ್ನಡ ಜಿಲ್ಲೆಯ ಸುಳ್ಯ ತಾಲೂಕಿನ ಬೆಳ್ಳಾರೆಯಲ್ಲಿ ನಡೆದಿದೆ.
ಘಟನೆ ಸಂಬಂಧ ಪ್ರತಿಕ್ರಿಯೆ ನೀಡಿರುವ ಸಿಎಂ ಬೊಮ್ಮಾಯಿ, ನಮ್ಮ ಪಕ್ಷದ ಕಾರ್ಯಕರ್ತ ಪ್ರವೀಣ್ ನೆಟ್ಟಾರು ಅವರ ಬರ್ಬರ ಹತ್ಯೆ ಖಂಡನೀಯ, ಇಂಥ ಹೇಯಕೃತ್ಯ ಎಸಗಿರುವ ದುಷ್ಕರ್ಮಿಗಳನ್ನು ಶೀಘ್ರವಾಗಿ ಬಂಧಿಸಿ ಕಾನೂನಿನ ಅಡಿಯಲ್ಲಿ ಶಿಕ್ಷಿಸಲಾಗುವುದು. ಪ್ರವೀಣ್ ಆತ್ಮಕ್ಕೆ ಶಾಂತಿ ಸಿಗಲಿ. ಈ ನೋವನ್ನು ಭರಿಸುವ ಶಕ್ತಿಯನ್ನು ದೇವರು ಅವರ ಕುಟುಂಬಕ್ಕೆ ಕರುಣಿಸಲಿ ಎಂದು ಹೇಳಿದ್ದಾರೆ.
ಬೆಳ್ಳಾರೆಯ ಮೇಲಿನ ಪೇಟೆಯಲ್ಲಿ ಚಿಕನ್ ಅಂಗಡಿ ನಡೆಸುತ್ತಿದ್ದ ಬಿಜೆಪಿ ಯುವ ಮೋರ್ಚಾ ಮುಖಂಡ ಪ್ರವೀಣ್ ನೆಟ್ಟಾರುನನ್ನು ದುಷ್ಕರ್ಮಿಗಳು ಹತ್ಯೆ ಮಾಡಿ ಪರಾರಿಯಾಗಿದ್ದಾರೆ.