BIGG NEWS : ಮಳೆಹಾನಿ ಪ್ರದೇಶಗಳಿಗೆ ಇಂದು,ನಾಳೆ ಸಿಎಂ ಭೇಟಿ : ಪರಿಹಾರ ಕಾಮಗಾರಿ ಪರಿಶೀಲನೆ

ಬೆಂಗಳೂರು : ರಾಜ್ಯಾದ್ಯಂತ ಮಳೆಯ ಅಬ್ಬರ ಮುಂದುವರೆದಿದ್ದು, ಮಲೆನಾಡು, ಕರಾವಳಿ ಸೇರಿದಂತೆ ರಾಜ್ಯದಲ್ಲಿ ಮಳೆಯಿಂದ ಹಾನಿಗೊಳಗಾಗಿರುವ ನಾಲ್ಕು ಜಿಲ್ಲೆಗಳಿಗೆ ಎರಡು ದಿನಗಳ ಪ್ರವಾಸವನ್ನು ಸಿಎಂ ಬಸವರಾಜ ಬೊಮ್ಮಾಯಿ ಇಂದಿನಿಂದ ಆರಂಭಿಸಲಿದ್ದಾರೆ.
NCIB ಟೈಮ್ಸ್ ನ್ಯೂಸ್ ಜೊತೆ ಮಾತನಾಡಿದ ಸಿಎಂ ಬೊಮ್ಮಾಯಿ, ಕೊಡಗು, ದಕ್ಷಿಣ ಕನ್ನಡ, ಉಡುಪಿ, ಕಾರವಾರಕ್ಕೆ ಸಿಎಂ ಪ್ರವಾಸ ಮಾಡಲಿದ್ದೇನೆ. ಮಳೆ ಪೀಡಿತ ಪ್ರದೇಶಗಳಿಗೆ ಭೇಟಿ ನೀಡಿ ಪರಿಶೀಲನೆ ಮಾಡುತ್ತೇನೆ. ಮಂಗಳವಾರ ರಾತ್ರಿ ಉಡುಪಿಯಲ್ಲಿ ವಾಸ್ತವ್ಯ ಹೂಡುತ್ತೇನೆ , ನೆರೆ ಹಾನಿ ವೀಕ್ಷಿಸಿ ಸ್ಥಳದಲ್ಲೇ ಸೂಚನೆ ನೀಡುತ್ತೇನೆ ಎಂದು ತಿಳಿಸಿದ್ದಾರೆ
ಸಿಎಂ ಬೊಮ್ಮಾಯಿ ಎರಡು ದಿನಗಳ ಪ್ರವಾಸದಲ್ಲಿ ಮಳೆ ಹಾನಿ ಹಾಗೂ ಪರಿಹಾರ ಕಾಮಗಾರಿಗಳ ಪರಿಶೀಲನೆ ನಡೆಸಲಿದ್ದಾರೆ. ಸಂತ್ರಸ್ತರಿಗೆ ಪರಿಹಾರ ವಿತರಣೆಗೆ ಇದೇ ವೇಳೆ ನಿರ್ದೇಶನ ನೀಡಲಿದ್ದಾರೆ. ಕೊಡಗು, ದಕ್ಷಿಣ ಕನ್ನಡ, ಉತ್ತರ ಕನ್ನಡ, ಉಡುಪಿ ಜಿಲ್ಲೆಗಳಲ್ಲಿನ ಮಳೆ ಅನಾಹುತ ಪರಿಶೀಲನೆ ನಡೆಸಿ ಅಧಿಕಾರಿಗಳೊಂದಿಗೆ ಸಭೆ ನಡೆಸಲಿದ್ದಾರೆ.