Uncategorized
BIGG NEWS : ಶೈಕ್ಷಣಿಕ ಗುಣಮಟ್ಟ ಹೆಚ್ಚಳಕ್ಕೆ ರಾಜ್ಯ ಸರ್ಕಾರದಿಂದ ‘ಶೈಕ್ಷಣಿಕ ದತ್ತು ಕಾರ್ಯಕ್ರಮ’ ಅನುಷ್ಠಾನ

ರಾಜ್ಯ ಸರ್ಕಾರದ ಶೈಕ್ಷಣಿಕ ದತ್ತು ಕಾರ್ಯಕ್ರಮ ದಡಿ ಸರ್ಕಾರಿ ಅಧಿಕಾರಿಗಳು ತಮ್ಮ ಭಾಗದ ಸರ್ಕಾರಿ ಶಾಲಾ,ಕಾಲೇಜುಗಳನ್ನ ದತ್ತು ಪಡೆದು ಶೈಕ್ಷಣಿಕ ಗುಣಮಟ್ಟವನ್ನ ಹೆಚ್ಚಿಸಬೇಕು. ರಾಜ್ಯ, ಜಿಲ್ಲಾ, ತಾಲೂಕು ಮಟ್ಟದ ಎಲ್ಲ ಹಂತದ ಅಧಿಕಾರಿಗಳು ಸರ್ಕಾರಿ ಶಾಲೆಗಳನ್ನು ದತ್ತು ತೆಗೆದುಕೊಳ್ಳಬೇಕು ಎಂದು ರಾಜ್ಯ ಸರ್ಕಾರ ಆದೇಶ ಹೊರಡಿಸಿದೆ.
ಶಾಲಾ ಶಿಕ್ಷಣ ಇಲಾಖೆಯನ್ನೊಳಗೊಂಡಂತೆ ಸರ್ಕಾರದ ಎಲ್ಲ ಇಲಾಖೆಗಳ ರಾಜ್ಯ, ಜಿಲ್ಲಾ ಮತ್ತು ತಾಲೂಕು ಹಂತದ ಅಧಿಕಾರಿಗಳು ತಮ್ಮ ಕಾರ್ಯವ್ಯಾಪ್ತಿಗೆ ಸೇರಿದ ಒಂದು ಸರ್ಕಾರಿ ಕಿರಿಯ ಪ್ರಾಥಮಿಕ ಶಾಲೆ, ಹಿರಿಯ ಪ್ರಾಥಮಿಕ ಶಾಲೆ, ಪ್ರೌಢಶಾಲೆ, ಪದವಿ-ಪೂರ್ವ ಕಾಲೇಜನ್ನು ದತ್ತು ಪಡೆಯಬೇಕು. ಈ ಮೂಲಕ ಅಧಿಕಾರಿಗಳು ತಾವು ದತ್ತು ಪಡೆದ ಶಾಲೆ, ಕಾಲೇಜಿಗೆ ಭೇಟಿ ನೀಡಿ ಶಾಲೆ, ಕಾಲೇಜುಗಳ ಶೈಕ್ಷಣಿಕ ಪ್ರಗತಿಯನ್ನು ಅವಲೋಕಿಸಿ, ಮಾರ್ಗದರ್ಶನ ನೀಡುವಂತೆ ಸೂಚನೆ ನೀಡಲಾಗಿದೆ.