BIGG NEWS : ಸರ್ಕಾರಿ ನೌಕರರ `ಶ್ವಾಸಕೋಶ ಕಸಿ ಶಸ್ತ್ರಚಿಕಿತ್ಸೆ’ ವೆಚ್ಚ ಮರುಪಾವತಿ ದರ ನಿಗದಿಪಡಿಸಿ ರಾಜ್ಯ ಸರ್ಕಾರದ ಆದೇಶ

ಬೆಂಗಳೂರು : ರಾಜ್ಯ ಸರ್ಕಾರವು ಶ್ವಾಸಕೋಶದ ಕಸಿ ಶಸ್ತ್ರಚಿಕಿತ್ಸೆಗೆ ಒಳಪಟ್ಟ ರಾಜ್ಯ ಸರ್ಕಾರಿ ನೌಕರರು ಮತ್ತು ಅವರ ಕುಟುಂಬದ ಅವಲಂಬಿತ ಸದಸ್ಯರಿಗೆ ವೈದ್ಯಕೀಯ ವೆಚ್ಚದ ಮರುಪಾವತಿ ದರ ನಿಗದಿಪಡಿಸಿ ಸರ್ಕಾರ ಆದೇಶ ಹೊರಡಿಸಿದೆ.
ರಾಜ್ಯ ಸರ್ಕಾರದ ಆದೇಶದಂತೆ ಶ್ವಾಸಕೋಶದ ಕಸಿ ಶಸ್ತ್ರಚಿಕಿತ್ಸೆ 15 ಲಕ್ಷ ರೂ. ಪ್ಯಾಕೇಜ್ ದರ ನಿಗದಿಪಡಿಸಲಾಗಿದೆ. ಇನ್ನು ಹೃದಯ ಮತ್ತು ಶ್ವಾಸಕೋಶದ ಕಸಿ ಶಸ್ತ್ರ ಚಿಕಿತ್ಸೆಗಾಗಿ 15 ಲಕ್ಷ ರೂ ಹಾಗೂ ಶ್ವಾಸಕೋಶ ಕಸಿ ಶುಲ್ಕದ ಶೇ 50ರಷ್ಟು ಪ್ಯಾಕೇಜ್ ದರ ನಿಗದಿ ಮಾಡಿದೆ.
ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಸೇವೆಗಳ ನಿರ್ದೇಶಕರಿಗೆ ಈ ಸಂಬಂಧ ಒಂದು ತಜ್ಞರ ಸಮಿತಿಯನ್ನು ರಚಿಸಿ, ಶ್ವಾಸಕೋಶ ಕಸಿ ಶಸ್ತ್ರ ಚಿಕಿತ್ಸೆಗೆ ಪ್ಯಾಕೇಜ್ ದರವನ್ನು ನಿಗದಿಪಡಿಸುವಂತೆ ಕೋರಲಾಗಿತ್ತು. ಅದರಂತೆ, ಶ್ವಾಸಕೋಶ ಕಸಿ ಈ ಶಸ್ತ್ರಚಿಕಿತ್ಸೆಗಳಿಗೆ ಪ್ಯಾಕೇಜ್ ದರಗಳನ್ನು ನಿಗದಿಪಡಿಸಿ ಇಲಾಖೆ ಶಿಫಾರಸನ್ನು ಸರ್ಕಾರಕ್ಕೆ ಸಲ್ಲಿಸಲಾಗಿತ್ತು. ಆ ನಿಟ್ಟಿನಲ್ಲಿ ಸರ್ಕಾರ ದರ ನಿಗದಿಗೊಳಿಸಿ ಆದೇಶ ಹೊರಡಿಸಿದೆ.