ಸಿನಿಮಾ
BREAKING NEWS : ಬಹುಭಾಷಾ ನಟಿ ಮೀನಾ ಪತಿ ವಿದ್ಯಾಸಾಗರ್ ಇನ್ನಿಲ್ಲ| Meena’s husband Vidyasagar No more

ಚೆನ್ನೈ: ಬಹುಭಾಷಾ ನಟಿ ಮೀನಾ ಅವರ ಪತಿ ವಿದ್ಯಾಸಾಗರ್ ಅವರು ಇಂದು ಮುಂಜಾನೆ ನಿಧನರಾದರು. ವಿದ್ಯಾಸಾಗರ್ ಅವರು ಶ್ವಾಸಕೋಶ ಸಂಬಂಧಿ ಕಾಯಿಲೆಗಳಿಂದ ಬಳಲುತ್ತಿದ್ದರು ಎಂದು ವರದಿಯಾಗಿದೆ.
ಕೊರೊನಾ ವೈರಸ್ ಸೋಂಕಿಗೆ ಚಿಕಿತ್ಸೆ ಪಡೆಯುತ್ತಿದ್ದ ವಿದ್ಯಾಸಾಗರ್ ಅವರಿಗೆ ಶ್ವಾಸಕೋಶ ಸಂಬಂಧಿ ಕಾಯಿಲೆ ಕಂಡುಬಂದಿತ್ತು.
ಈ ಸಂಬಂಧ ಚೆನ್ನೈನ ಎಂಜಿಎಂ ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತ್ತಿದ್ದ ವಿದ್ಯಾಸಾಗರ್ ಅವರು ಚಿಕಿತ್ಸೆ ಫಲಕಾರಿಯಾಗದೆ ಇಂದು ಮುಂಜಾನೆ ನಿಧನರಾಗಿದ್ದಾರೆ.
ತಮಿಳು, ತೆಲುಗು, ಕನ್ನಡ ಭಾಷೆಗಳಲ್ಲಿ ನಟಿಸಿರುವ ಮೀನಾ, 2009 ರಲ್ಲಿ ವಿದ್ಯಾಸಾಗರ್ ಅವರನ್ನು ವಿವಾಹವಾಗಿದ್ದರು. ಈ ದಂಪತಿಗೆ 11 ವರ್ಷದ ಮಗಳು ನೈನಿಕಾ ಇದ್ದಾಳೆ,