ಬೆಂಗಳೂರು : ಮಹಿಳಾ ಪಿಜಿಯೊಂದರಲ್ಲಿ ವಾಸವಾಗಿರುವ ಯುವತಿಯರ ನಗ್ನ ದೃಶ್ಯಗಳನ್ನು ಸೆರೆ ಹಿಡಿದು ಬ್ಲ್ಯಾಕ್ ಮೇಲ್ ಮಾಡುತ್ತಿದ್ದ ಆರೋಪಿಯನ್ನ ಬೆಂಗಳೂರು ಆಗ್ನೇಯ ವಿಭಾಗದ ಸಿಇಎನ್ ಠಾಣೆ ಪೊಲೀಸರು ಬಂಧಿಸಿದ್ದಾರೆ. ಪಾಂಡಿಚೇರಿ ಮೂಲದ ನಿರಂಜನ್ ಬಂಧಿತ ಆರೋಪಿ.

ಎಚ್ಎಸ್ಆರ್ ಲೇಔಟ್ ನ ಪಿ.ಜಿಯೊಂದರಲ್ಲಿ ವಾಸವಿದ್ದ ಆರೋಪಿ ಪಕ್ಕದಲ್ಲೇ ಇದ್ದ ಮಹಿಳಾ ಪಿಜಿಯ ಬಾತ್ ರೂಮಿನಲ್ಲಿ ಮೊಬೈಲ್ ಇಟ್ಟು ವೀಡಿಯೋ ರೆಕಾರ್ಡ್ ಮಾಡಿಕೊಳ್ಳುತ್ತಿದ್ದ. ಬಳಿಕ ಯುವತಿಯರ ಮೊಬೈಲ್‌ಗೆ ಅನಾಮಧೇಯ ಸಂದೇಶ ಕಳುಹಿಸಿ ಲೈಂಗಿಕ ಶೋಷಣೆ ನೀಡುತ್ತಿದ್ದ.
ಈ ಬಗ್ಗೆ ನೊಂದ ಯುವತಿಯೊಬ್ಬಳು ನೀಡಿದ ದೂರಿನ ಮೇರೆಗೆ ತನಿಖೆ ಕೈಗೊಂಡಿದ್ದ ಆಗ್ನೇಯ ವಿಭಾಗದ ಸಿಇಎನ್ ಪೊಲೀಸರ ತಂಡ ಯುವತಿಯ ಸೋಗಿನಲ್ಲಿ ತಾವೇ ಆರೋಪಿಗೆ ಸಂದೇಶ ಕಳುಹಿಸಿ ಬಳಿಕ ಆತನನ್ನ ಬಂಧಿಸುವಲ್ಲಿ ಯಶಸ್ವಿಯಾಗಿದೆ.