Job news :ಉಡುಪಿ ಜಿಲ್ಲೆಯ ನಗರ ಸ್ಥಳಿಯ ಸಂಸ್ಥೆಗಳಾದ ನಗರಸಭೆ/ಪುರಸಭೆ/ಪಟ್ಟಣ ಪಂಚಾಯಿತಿಗಳಲ್ಲಿ ಖಾಲಿ ಇರುವ ಲೋಡರ್ಸ್ ಮತ್ತು ಕ್ಲೀನರ್ಸ್ ಹುದ್ದೆಗಳನ್ನು ನೇರ ನೇಮಕಾತಿ ಮಾಡಿಕೊಳ್ಳಲು ಅರ್ಜಿ ಆಹ್ವಾನಿಸಲಾಗಿದೆ.

ಉಡುಪಿ ಜಿಲ್ಲೆಯ ನಗರ ಸ್ಥಳಿಯ ಸಂಸ್ಥೆಗಳಾದ ನಗರಸಭೆ/ಪುರಸಭೆ/ಪಟ್ಟಣ ಪಂಚಾಯಿತಿಗಳಲ್ಲಿ ಖಾಲಿ ಇರುವ ಲೋಡರ್ಸ್ ಮತ್ತು ಕ್ಲೀನರ್ಸ್ ಹುದ್ದೆಗಳನ್ನು ನೇರ ನೇಮಕಾತಿ ಮಾಡಿಕೊಳ್ಳಲು ಅರ್ಜಿ ಆಹ್ವಾನಿಸಲಾಗಿದೆ. ಅರ್ಹರು ಅರ್ಜಿ ಸಲ್ಲಿಸಬಹುದು. ಎಲ್ಲ ಹುದ್ದೆಗಳಲ್ಲೂ ಮೀಸಲಾತಿ ನಿಗದಿಯಾಗಿದೆ.
ಎಲ್ಲೆಲ್ಲಿ ನೇಮಕ
* ಉಡುಪಿ ನಗರಸಭೆ – 12 (ಲೋಡರ್ಸ್-9, ಕ್ಲೀನರ್-3)
* ಕುಂದಾಪುರ ಪುರಸಭೆ -8 (ಲೋಡರ್ಸ್-7, ಕ್ಲೀನರ್-1)
* ಕಾರ್ಕಳ ಪುರಸಭೆ-10 (ಲೋಡರ್ಸ್-8, ಕ್ಲೀನರ್-2)
* ಕಾಪು ಪುರಸಭೆ-10 (ಲೋಡರ್ಸ್-8, ಕ್ಲೀನರ್-2)
* ಸಾಲಿಗ್ರಾಮ ಪಟ್ಟಣ ಪಂಚಾಯಿತಿ-1 (ಲೋಡರ್ಸ್-1)
ಅರ್ಹತೆಗಳೇನು?
ವಿದ್ಯಾರ್ಹತೆ ಅನ್ವಯಿಸುವುದಿಲ್ಲ. ಕನ್ನಡ ಮಾತನಾಡಲು ಗೊತ್ತಿರಬೇಕು. ಲೋಡರ್ರ್ ಮತ್ತು ಕ್ಲೀನರ್ಸ್ ಹುದ್ದೆಯಲ್ಲಿ ಕೆಲಸ ಮಾಡುತ್ತಿರುವ ಕ್ಷೇಮಾಭಿವೃದ್ಧಿ, ದಿನಗೂಲಿ, ಗುತ್ತಿಗೆ, ಸಮಾನ ಕೆಲಸಕ್ಕೆ ಸಮಾನ ವೇತನ, ಹೊರಗುತ್ತಿಗೆ ನೌಕರರು ಮಾತ್ರ ಅರ್ಜಿ ಸಲ್ಲಿಸಬೇಕು. ಎರಡೂ ಹುದ್ದೆಗಳಿಗೆ ಕನಿಷ್ಠ 18 ರಿಂದ 55 ವರ್ಷ ವಯೋಮಿತಿ ನಿಗದಿಪಡಿಸಲಾಗಿದೆ
ವೇತನ
17,000 ದಿಂದ 28,950 ರೂ. ಮಾಸಿಕ ವೇತನ ಇರಲಿದೆ.
ಅರ್ಜಿ ಸಲ್ಲಿಸುವುದು ಹೇಗೆ
ಅರ್ಜಿಯನ್ನು ಸಂಬಂಧಿಸಿದ ನಗರ ಸ್ಥಳಿಯ ಸಂಸ್ಥೆ ಅಥವಾ ಮಂಡ್ಯ ಜಿಲ್ಲಾ ನಗರಾಭಿವೃದ್ಧಿ ಕೋಶದಿಂದ ಪಡೆದು ಪೌರಾಯುಕ್ತರು/ಮುಖ್ಯಾಧಿಕಾರಿಗಳಿಂದ ದೃಢೀಕರಿಸಿದ ಪ್ರತಿಗಳನ್ನು ಲಗತ್ತಿಸಿ ನಿಗದಿತ ಅರ್ಜಿ ನಮೂನೆಯಲ್ಲೇ ಸಲ್ಲಿಸಬೇಕು. ಅಗತ್ಯ ದಾಖಲೆ ಸಲ್ಲಿಸುವ ಜತೆಗೆ ಅರ್ಜಿಯಲ್ಲಿರುವ ಎಲ್ಲ ಅಂಕಣಗಳನ್ನು ಕಡ್ಡಾಯವಾಗಿ ಭರ್ತಿಮಾಡತಕ್ಕದ್ದು. ಲಕೋಟೆಯಲ್ಲಿ ಹುದ್ದೆಯ ಹೆಸರನ್ನು ಕಡ್ಡಾಯವಾಗಿ ನಮೂದಿಸಬೇಕು. ಸಮಯ ಮೀರಿ ಬಂದ ಅರ್ಜಿಗಳನ್ನು ಪರಿಗಣಿಸುವುದಿಲ್ಲ. ಮೀಸಲಾತಿ ಕೋರುವವರು ಅಗತ್ಯ ದಾಖಲೆಗಳನ್ನು ಸಲ್ಲಿಸಬೇಕು.
ನೇಮಕಾತಿ ವಿಧಾನ
ಸರ್ಕಾರದ ನಗರಾಭಿವೃದ್ಧಿ ಇಲಾಖೆಯ ಅಧಿಸೂಚನೆ ಪ್ರಕಾರ ಕರ್ನಾಟಕ ಪುರಸಭೆ 2021ರ ನಿಯಮದ ಪ್ರಕಾರ ನೇಮಕಾತಿ ಮಾಡಲಾಗುವುದು. ಸ್ಥಳಿಯ ಸಂಸ್ಥೆಗಳಲ್ಲಿ ಹೆಚ್ಚು ವರ್ಷ ಸೇವೆ ಸಲ್ಲಿಸಿದವರಿಗೆ ಆದ್ಯತೆ ನೀಡಲಾಗುವುದು. ಸೇವಾ ಅವಧಿ ಒಂದೇ ಇದ್ದರೆ ವಯಸ್ಸಿಗೆ ಅನುಗುಣವಾಗಿ ಅರ್ಹರನ್ನು ಆಯ್ಕೆ ಮಾಡಲಾಗುವುದು. ಆಯ್ಕೆಯಾಗುವ ಅಭ್ಯರ್ಥಿಗಳಿಗೆ ಉಡುಪಿ ಜಿಲ್ಲಾಧಿಕಾರಿ ಕಚೇರಿಯಲ್ಲಿ ದಾಖಲೆ ಪರಿಶೀಲನೆ ಇರಲಿದೆ. ಇದಕ್ಕೆ ಯಾವುದೇ ಭತ್ಯೆ ನೀಡುವುದಿಲ್ಲ.
ಅರ್ಜಿ ಸಲ್ಲಿಸಬೇಕಾದ ವಿಳಾಸ: ಜಿಲ್ಲಾಧಿಕಾರಿಗಳ ಕಚೇರಿ, ಜಿಲ್ಲಾ ನಗರಾಭಿವೃದ್ಧಿ ಕೋಶ, ಉಡುಪಿ ಜಿಲ್ಲೆ ಅಥವಾ ನಗರ ಸ್ಥಳಿಯ ಸಂಸ್ಥೆಗಳಿಗೆ ಸಲ್ಲಿಸಬಹುದು.
ಅರ್ಜಿ ಸಲ್ಲಿಸಲು ಕೊನೇ ದಿನ: 21.6.2022 (ಸಂಜೆ 5.30ರೊಳಗೆ)
ಅಧಿಸೂಚನೆಗೆ: https://bit.ly/3LAtEXq
ಮಾಹಿತಿಗೆ:https://udupi.nic.in/