ಸಿನಿಮಾ

KGF Chapter 2: ಮೊದಲ ದಿನವೇ ಬಾಕ್ಸ್ ಆಫೀಸ್‌ನಲ್ಲಿ ಹೊಸ ಇತಿಹಾಸ ಸೃಷ್ಟಿಸುತ್ತಾ ಕೆಜಿಎಫ್: ಚಾಪ್ಟರ್ 2!!

ಭಾರತದ ಮೂಲೆ ಮೂಲೆಯಲ್ಲೂ ‘ಕೆಜಿಎಫ್: ಚಾಪ್ಟರ್ 2’ ಸಿನಿಮಾ ಹೈಪ್ ಕ್ರಿಯೇಟ್ ಮಾಡಿದೆ. ‘ಕೆಜಿಎಫ್: ಚಾಪ್ಟರ್ 2’ ಚಿತ್ರವನ್ನ ಫಸ್ಟ್ ಡೇ ಫಸ್ಟ್ ಶೋ ಕಣ್ತುಂಬಿಕೊಳ್ಳಲು ಸಿನಿ ಪ್ರಿಯರು ಕಾತರದಿಂದ ಕಾಯುತ್ತಿದ್ದಾರೆ. ಈಗಾಗಲೇ ‘ಕೆಜಿಎಫ್: ಚಾಪ್ಟರ್ 2’ ಅಡ್ವಾನ್ಸ್ ಬುಕ್ಕಿಂಗ್ ಶುರುವಾಗಿದ್ದು, ಬಹುತೇಕ ಕಡೆ ಮೊದಲ ದಿನದ ಟಿಕೆಟ್‌ಗಳು ಸೋಲ್ಡ್ ಔಟ್ ಆಗಿವೆ. ದೇಶದಾದ್ಯಂತ ‘ಕೆಜಿಎಫ್: ಚಾಪ್ಟರ್ 2’ ಅಲೆಯಿದ್ದು, ಮೊದಲ ದಿನವೇ ಬಾಕ್ಸ್ ಆಫೀಸ್‌ನಲ್ಲಿ ಹೊಸ ದಾಖಲೆ ಬರೆಯುವ ಮುನ್ಸೂಚನೆ ಸಿಕ್ಕಿದೆ.


‘ಕೆಜಿಎಫ್: ಚಾಪ್ಟರ್ 1’ ಸಿನಿಮಾ ಸೂಪರ್ ಡ್ಯೂಪರ್ ಹಿಟ್ ಆಯ್ತು. ವಿಶ್ವದಾದ್ಯಂತ ‘ಕೆಜಿಎಫ್: ಚಾಪ್ಟರ್ 1’ ಸಿನಿಮಾ ಗಮನ ಸೆಳೆಯಿತು. ಇದೀಗ ಎಲ್ಲರ ಗಮನ ‘ಕೆಜಿಎಫ್: ಚಾಪ್ಟರ್ 2 ಮೇಲಿದೆ. ಇನ್ನೂ ಮೂರೇ ದಿನಗಳಲ್ಲಿ.. ಅಂದ್ರೆ ಏಪ್ರಿಲ್ 14 ರಂದು ‘ಕೆಜಿಎಫ್: ಚಾಪ್ಟರ್ 2’ ಸಿನಿಮಾ ಗ್ರ್ಯಾಂಡ್ ರಿಲೀಸ್ ಆಗಲಿದೆ. ಭಾರತದ ಮೂಲೆ ಮೂಲೆಯಲ್ಲೂ ‘ಕೆಜಿಎಫ್: ಚಾಪ್ಟರ್ 2’ ಸಿನಿಮಾ ಹೈಪ್ ಕ್ರಿಯೇಟ್ ಮಾಡಿದೆ. ‘ಕೆಜಿಎಫ್: ಚಾಪ್ಟರ್ 2’ ಚಿತ್ರವನ್ನ ಫಸ್ಟ್ ಡೇ ಫಸ್ಟ್ ಶೋ ಕಣ್ತುಂಬಿಕೊಳ್ಳಲು ಸಿನಿ ಪ್ರಿಯರು ಕಾತರದಿಂದ ಕಾಯುತ್ತಿದ್ದಾರೆ. ಈಗಾಗಲೇ ‘ಕೆಜಿಎಫ್: ಚಾಪ್ಟರ್ 2’ ಅಡ್ವಾನ್ಸ್ ಬುಕ್ಕಿಂಗ್ ಶುರುವಾಗಿದ್ದು, ಬಹುತೇಕ ಕಡೆ ಮೊದಲ ದಿನದ ಟಿಕೆಟ್‌ಗಳು ಸೋಲ್ಡ್ ಔಟ್ ಆಗಿವೆ. ದೇಶದಾದ್ಯಂತ ‘ಕೆಜಿಎಫ್: ಚಾಪ್ಟರ್ 2’ ಅಲೆಯಿದ್ದು, ಮೊದಲ ದಿನವೇ ಬಾಕ್ಸ್ ಆಫೀಸ್‌ನಲ್ಲಿ ಹೊಸ ದಾಖಲೆ ಬರೆಯುವ ಮುನ್ಸೂಚನೆ ಸಿಕ್ಕಿದೆ.


ಏಪ್ರಿಲ್ 14 ರಂದು.. ಅಂದ್ರೆ, ಡಾ.ಬಿ.ಆರ್.ಅಂಬೇಡ್ಕರ್ ಜಯಂತಿಯಂದು (ಗುರುವಾರ) ‘ಕೆಜಿಎಫ್: ಚಾಪ್ಟರ್ 2’ ಬಿಡುಗಡೆಯಾಗಲಿದೆ. ಇನ್ನೂ, ಏಪ್ರಿಲ್ 15 ರಂದು ಗುಡ್ ಫ್ರೈಡೆ (ಶುಕ್ರವಾರ). ಇವೆರಡೂ ದಿನಗಳು ಸರ್ಕಾರಿ ರಜೆಯಿದ್ದು, ಶನಿವಾರ ಮತ್ತು ಭಾನುವಾರ ಲಾಂಗ್ ವೀಕೆಂಡ್ ಇರುವುದರಿಂದ ಮೊದಲ ನಾಲ್ಕು ದಿನಗಳಲ್ಲೇ ‘ಕೆಜಿಎಫ್: ಚಾಪ್ಟರ್ 2’ ಸಿನಿಮಾ ಬಾಕ್ಸ್‌ ಆಫೀಸ್‌ನಲ್ಲಿ ಧೂಳೆಬ್ಬಿಸಲಿದೆ ಎಂದು ಅಂದಾಜಿಸಲಾಗಿದೆ.

Related Articles

Leave a Reply

Your email address will not be published. Required fields are marked *

Back to top button