ಜೀವನಶೈಲಿ

NCIB ಗಾಂಧಿನಗರ :ದೇವಸ್ಥಾನದಲ್ಲಿ ಮದುವೆಯಾಗಲು ಬಿಡಲ್ಲ – ಗುಜರಾತ್ ಯುವತಿ ವಿರುದ್ಧ ಸಿಡಿದ ಬಿಜೆಪಿ ನಾಯಕಿ..!

ಗಾಂಧಿನಗರ: ತನ್ನನ್ನು ತಾನೇ ಮದುವೆಯಾಗುತ್ತೇನೆ ಎಂದು ಹೇಳಿ ಸೋಶಿಯಲ್ ಮೀಡಿಯಾ ಸೇರಿದಂತೆ ಎಲ್ಲಕಡೆ ಭಾರೀ ಸುದ್ದಿಯಾಗುತ್ತಿರುವ ಕ್ಷಮಾಗೆ ಸಂಕಷ್ಟ ಎದುರಾಗಿದೆ.

ಕ್ಷಮಾ ಮದುವೆ ವಿರೋಧಿಸಿ ಬಿಜೆಪಿ ನಾಯಕರು ಆಕ್ರೋಶ ಹೊರಹಾಕಿದ್ದಾರೆ.ವಡೋದರದ 24 ವರ್ಷದ ಕ್ಷಮಾ ಜೂನ್ 11 ರಂದು ಗೋತ್ರಿಯ ದೇವಸ್ಥಾನದಲ್ಲಿ ಐದು ವ್ರತಗಳನ್ನು ಮಾಡುವ ಮೂಲಕ ವಿವಾಹ ಮಾಡಿಕೊಳ್ಳುವುದಾಗಿ ಸೋಶಿಯಲ್ ಮೀಡಿಯಾದಲ್ಲಿ ಪೋಸ್ಟ್ ಮಾಡುವ ಮೂಲಕ ತಿಳಿಸಿದ್ದಳು. ದೇವಸ್ಥಾನದಲ್ಲಿ ಮದುವೆ ಆಗುತ್ತಿರುವ ವಿಚಾರಕ್ಕೆ ಬಿಜೆಪಿ ನಗರ ಘಟಕದ ಉಪ ಮುಖ್ಯಸ್ಥೆ ಸುನೀತಾ ಶುಕ್ಲಾ ತೀವ್ರವಾಗಿ ವಿರೋಧ ವ್ಯಕ್ತಪಡಿದ್ದಾರೆ.

ಈ ವೇಳೆ ಮಾಧ್ಯಮಗಳೊಂದಿಗೆ ಮಾತನಾಡಿದ ಅವರು, ದೇವಸ್ಥಾನದಲ್ಲಿ ಈ ರೀತಿಯ ಮದುವೆಗಳಿಗೆ ನಾವು ಅನುಮತಿ ನೀಡುವುದಿಲ್ಲ. ಇಂತಹ ವಿವಾಹಗಳು ಹಿಂದೂ ಧರ್ಮಕ್ಕೆ ವಿರುದ್ಧವಾಗಿವೆ ಎಂದು ಅಸಮಾಧಾನ ವ್ಯಕ್ತಪಡಿಸಿದರು.ಈ ರೀತಿಯ ಮದುವೆ ಹಿಂದೂ ಸಂಪ್ರದಾಯಕ್ಕೆ ವಿರುದ್ಧವಾಗಿದೆ. ಇದರಿಂದ ಹಿಂದೂಗಳ ಜನಸಂಖ್ಯೆ ಕಡಿಮೆಯಾಗುತ್ತದೆ. ಕ್ಷಮಾ ಮಾನಸಿಕ ಅಸ್ವಸ್ಥೆ ಎಂದು ಟೀಕಿಸಿದರು.

ಹಿಂದೂ ಸಂಸ್ಕøತಿಯಲ್ಲಿ ಎಲ್ಲಿಯೂ ಹುಡುಗ ಹುಡುಗನನ್ನು ಮದುವೆಯಾಗಬಹುದು ಅಥವಾ ಹುಡುಗಿ ಹುಡುಗಿಯನ್ನು ಮದುವೆಯಾಗಬಹುದು ಎಂದು ಬರೆಯಲಾಗಿಲ್ಲ.

ನಾನು ಆಕೆ ಮದುವೆಯಾಗಲು ಆಯ್ಕೆ ಮಾಡಿಕೊಂಡಿರುವ ಜಾಗವನ್ನು ಮಾತ್ರ ವಿರೋಧಿಸುತ್ತೇನೆ ಎಂದರು.ಆಕೆಯನ್ನು ಯಾವುದೇ ದೇವಸ್ಥಾನದಲ್ಲಿ ಮದುವೆಯಾಗಲು ನಾವು ಅನುಮತಿಸುವುದಿಲ್ಲ. ಧರ್ಮಕ್ಕೆ ವಿರುದ್ಧವಾಗಿ ಏನಾದರೂ ನಡೆದರೆ, ಯಾವುದೇ ಕಾನೂನು ಜಾರಿಯಾಗುವುದಿಲ್ಲ ಎಂದು ಕಿಡಿಕಾರಿದರು.

Related Articles

Leave a Reply

Your email address will not be published. Required fields are marked *

Back to top button