NCIB ಟೈಮ್ಸ್ ವತಿಯಿಂದ ತಾಯಂದಿರ ದಿನದ ಶುಭಾಶಯಗಳು

ಅಮ್ಮ… ಈ ಭೂಮಿಗೆ ನಮ್ಮನ್ನು ತಂದ ದೇವತೆ. ದಾರಿ ತೋರಿದ ಗುರು. ಜಗತ್ತಿನಲ್ಲಿ ಅತ್ಯಂತ ವಿಶಾಲವಾದ, ನಿಷ್ಕಲ್ಮಷವಾದ ಪ್ರೀತಿ ತಾಯಿಯದ್ದು. ಆಕೆಯ ಪ್ರೀತಿಗೆ ಬೆಲೆ ಕಟ್ಟಲು ಅಥವಾ ಅದನ್ನು ಮರಕಳಿಸಲು ಸಾಧ್ಯವೇ ಇಲ್ಲ. ತಾಯಿಯ ಪ್ರೀತಿ, ತ್ಯಾಗಕ್ಕೆ ನಾವು ಏನೇ ಮಾಡಿದರೂ ಅದು ಕಡಿಮೆ ಆಗುತ್ತದೆ. ನಮ್ಮನ್ನು ಈ ಜಗತ್ತಿಗೆ ತರುವ ತಾಯಿಗೆ ಗೌರವ ಹಾಗೂ ಪ್ರೀತಿಯನ್ನು ತೋರಿಸಲು ನಮಗೆ ಯಾವುದೇ ವಿಶೇಷ ದಿನ ಅಗತ್ಯವಿಲ್ಲ. ಆದರೆ ತಾಯಂದಿರ ದಿನ ನಮ್ಮ ಭಾವನೆಗಳನ್ನು ವ್ಯಕ್ತಪಡಿಸಲು ಒಂದು ಅವಕಾಶ ನೀಡುತ್ತದೆ. ವಿಶ್ವ ತಾಯಂದಿರ ದಿನ ಎಂದು ಆಚರಿಸಲಾಗುತ್ತದೆ.
NCIB ಟೈಮ್ಸ್ ವತಿಯಿಂದ ತಾಯಂದಿರ ದಿನದ ಶುಭಾಶಯಗಳು .
ಮದರ್ಸ್ ಡೇ ಅಥವಾ ತಾಯಂದಿರ ದಿನವನ್ನು 1908ರಲ್ಲಿ ಅಮೆರಿಕದಲ್ಲಿ ಆಚರಿಸಲು ಶುರು ಮಾಡಲಾಯಿತು. ಅಮೆರಿಕದ ಶಾಂತಿ ಕಾರ್ಯಕರ್ತೆ ಆಗಿದ್ದ ಅನಾ ಜಾರ್ವಿಸ್ ತನ್ನ ತಾಯಿಯನ್ನು ತುಂಬಾ ಪ್ರೀತಿಸುತ್ತಿದ್ದರು. ಅನಾ ಜಾರ್ವಿಸ್ ಮದುವೆ ಆಗಿರಲಿಲ್ಲ. 1905ರಲ್ಲಿ ಅನಾ ತಾಯಿ ಮರಣ ಹೊಂದಿದ್ದರು. ತನ್ನ ತಾಯಿಯ ಮೇಲಿದ್ದ ಪ್ರೀತಿಯನ್ನು ವ್ಯಕ್ತಪಡಿಸಲು ಅನಾ ಈ ದಿನ ಆಯ್ಕೆ ಮಾಡಿಕೊಂಡಿದ್ದರು. ಅವರು ಈ ದಿನವನ್ನು ತಾಯಂದಿರ ದಿನವಾಗಿ ಆಚರಿಸಲು ಶುರು ಮಾಡಿದ್ದರು. ಬಳಿಕ ಅಮೆರಿಕದ ರಾಷ್ಟ್ರಪತಿ ಆಗಿದ್ದ ವುಡ್ರೋ ವಿಲ್ಸನ್ ಮೇ 9, 1914ರಂದು ಪ್ರತಿ ವರ್ಷ ಮೇ 2ನೇ ಭಾನುವಾರದಂದು ತಾಯಂದಿರ ದಿನ ಎಂದು ಆಚರಿಸಲಾಗುತ್ತದೆ ಎಂದು ಕಾನೂನನ್ನು ಜಾರಿಗೊಳಿಸಿದರು. ಈ ಕಾನೂನು ಜಾರಿ ಮಾಡಿದ ನಂತರ ಅಮೆರಿಕ, ಭಾರತ ಹಾಗೂ ಹಲವು ದೇಶಗಳಲ್ಲಿ ಮೇ ತಿಂಗಳ 2ನೇ ಭಾನುವಾರದಂದು ತಾಯಂದಿರ ದಿನವನ್ನು ಆಚರಿಸಲಾಗುತ್ತದೆ.