NCIB: ರಾಮನಗರದಲ್ಲಿ ಮಾಗಡಿ: ಎಸೆಸೆಲ್ಸಿ ಪ್ರಶ್ನೆ ಪತ್ರಿಕೆ ಸೋರಿಕೆ: 8 ಮಂದಿ ವಶಕ್ಕೆ..

ಮಾಗಡಿ: ಎಸೆಸೆಲ್ಸಿ ಪ್ರಶ್ನೆಪತ್ರಿಕೆ ಸೋರಿಕೆ ಪ್ರಕರಣ ಸಂಬಂಧ 8 ಮಂದಿಯನ್ನು ಬಂಧಿಸಲಾಗಿದ್ದು, ತೀವ್ರ ವಿಚಾರಣೆ ನಡೆಸಲಾಗುತ್ತಿದೆ ಎಂದು ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿ ಸಂತೋಷ್ ಬಾಬು ತಿಳಿಸಿದ್ದಾರೆ.
ರಾಮನಗರದಲ್ಲಿ ಸುದ್ದಿಗಾರರಿಗೆ ಮಾಹಿತಿ ನೀಡಿದ ಅವರು, ಮಾಗಡಿಯ ಕೆಂಪೇಗೌಡ ಪ್ರೌಢಶಾಲೆಯ ಪ್ರಿನ್ಸಿಪಾಲ್ ಶ್ರೀನಿವಾಸ್, ಕ್ಲರ್ಕ್ ರಂಗೇಗೌಡ, ರಂಗನಾಥ ಶಾಲೆಯ ಕೃಷ್ಣಮೂರ್ತಿ ಹಾಗೂ ಇತರ ಐವರು ಶಿಕ್ಷಕರನ್ನು ಕಸ್ಟಡಿಗೆ ತೆಗೆದುಕೊಳ್ಳಲಾಗಿದೆ.ರಾಮನಗರದಲ್ಲಿ ಸುದ್ದಿಗಾರರಿಗೆ ಮಾಹಿತಿ ನೀಡಿದ ಅವರು, ಮಾಗಡಿಯ ಕೆಂಪೇಗೌಡ ಪ್ರೌಢಶಾಲೆಯ ಪ್ರಿನ್ಸಿಪಾಲ್ ಶ್ರೀನಿವಾಸ್, ಕ್ಲರ್ಕ್ ರಂಗೇಗೌಡ, ರಂಗನಾಥ ಶಾಲೆಯ ಕೃಷ್ಣಮೂರ್ತಿ ಹಾಗೂ ಇತರ ಐವರು ಶಿಕ್ಷಕರನ್ನು ಕಸ್ಟಡಿಗೆ ತೆಗೆದುಕೊಳ್ಳಲಾಗಿದೆ. ಪ್ರಕರಣ ಸಂಬಂಧ ಪೊಲೀಸ್ ಠಾಣೆಗೆ ದೂರು ನೀಡಿದ್ದ ದೇವರಾಜು ಎಂಬಾತನನ್ನೂ ವಿಚಾರಣೆ ನಡೆಸಲಾಗುತ್ತಿದೆ ಎಂದು ತಿಳಿಸಿದರು.ಕೆಂಪೇಗೌಡ ಪ್ರೌಢಶಾಲೆಯಲ್ಲಿ ಪರೀಕ್ಷಾ ಕೇಂದ್ರ ಇರಲಿಲ್ಲ.
ರಂಗನಾಥ ಶಾಲೆಯಲ್ಲಿ ಪರೀಕ್ಷಾ ಕೇಂದ್ರ ಇತ್ತು. ಶಿಕ್ಷಕ ಕೃಷ್ಣಮೂರ್ತಿ ಪರೀಕ್ಷೆ ಪ್ರಾರಂಭವಾಗುತ್ತಿದ್ದಂತೆ ಪ್ರಶ್ನೆ ಪತ್ರಿಕೆಯನ್ನು ರಂಗೇಗೌಡನಿಗೆ ನೀಡಿರುವ ಮಾಹಿತಿ ಇದೆ. ರಂಗೇಗೌಡ ಪ್ರಶ್ನೆ ಪತ್ರಿಕೆ ತುಂಬಿ ಕೃಷ್ಣಮೂರ್ತಿಗೆ ಕೊಡುತ್ತಿದ್ದ ಬಗ್ಗೆಯೂ ಗೊತ್ತಾಗಿದೆ.ಪ್ರಕರಣದಲ್ಲಿ ಸ್ಥಳೀಯ ಪತ್ರಕರ್ತ ಎಂದು ಹೇಳಿಕೊಳ್ಳುತ್ತಿದ್ದ ಓರ್ವನನ್ನೂ ವಶಕ್ಕೆ ಪಡೆದುಕೊಳ್ಳಲಾಗಿದೆ. ಈತ ತಲಾ 10 ಸಾವಿರ ರೂ. ವಸೂಲಿ ಮಾಡಿರುವ ಮಾಹಿತಿಯಿದೆ ಎಂದು ಅವರು ಹೇಳಿದರು.