Uncategorized

NCIB: Kalaburagi ವಾಡಿ Murder Case: ಭಿನ್ನಧರ್ಮದ ಯುವತಿಯನ್ನು ಪ್ರೀತಿಸಿದ ಯುವಕನನ್ನು ಕೊಚ್ಚಿ ಹತ್ಯೆಗೈದ ದುಷ್ಕರ್ಮಿಗಳು!

ಭಿನ್ನಧರ್ಮದ ಯುವತಿಯನ್ನು ಪ್ರೀತಿಸಿದ್ದೇ ಮುಳುವಾಯ್ತುಯುವಕನನ್ನು ಮಾರಕಾಸ್ತ್ರಗಳಿಂದ ಕೊಚ್ಚಿ ಹತ್ಯೆಗೈದ ದುಷ್ಕರ್ಮಿಗಳು!ಕಲಬುರಗಿ ಜಿಲ್ಲೆಯ ಚಿತ್ತಾಪುರ ತಾಲೂಕಿನ ವಾಡಿ ಪಟ್ಟಣದಲ್ಲಿ ದುಷ್ಕೃತ್ಯಕಲಬುರಗಿ: ಅನ್ಯಕೋಮಿನ ಯುವತಿಯನ್ನ ಪ್ರೀತಿಸುತ್ತಿದ್ದ ಯುವಕನನ್ನ ಜನನಿಬಿಡ ಪ್ರದೇಶದ ನಡುರಸ್ತೆಯಲ್ಲಿಯೇ ಬರ್ಬರವಾಗಿ ಕೊಚ್ಚಿ ಕೊಲೆಗೈದ ಘಟನೆ ಜಿಲ್ಲೆಯ ಚಿತ್ತಾಪುರ ತಾಲೂಕಿನ ವಾಡಿ ಪಟ್ಟಣದಲ್ಲಿ ನಡೆದಿದೆ.ವಾಡಿ ಪಟ್ಟಣದ ಭೀಮನಗರ ಬಡಾವಣೆ ನಿವಾಸಿ ವಿಜಯ ಕಾಂಬಳೆ (25) ಕೋಲೆಯಾದ ಯುವಕ ಎಂದು ಗುರುತಿಸಲಾಗಿದೆ. ವಿಜಯ ಅನ್ಯಕೋಮಿನ ಯುವತಿಯನ್ನ ಪ್ರೀತಿ ಮಾಡುತ್ತಿದ್ದನಂತೆ. ಇದೇ ಕಾರಣಕ್ಕೆ ಯುವತಿಯ ಕುಟುಂಬಸ್ಥರು ಹಾಗೂ ಸಹೋದರರು ಸೇರಿ ವಿಜಯನನ್ನ ಕೊಲೆಗೈದಿದ್ದಾರೆ ಎಂಬ ಶಂಕೆ ವ್ಯಕ್ತವಾಗಿದೆ. ದೈನಂದಿನಂತೆ ವಾಡಿ ಪಟ್ಟಣದಲ್ಲಿ ಓಡಾಡಿಕೊಂಡಿದ್ದ ವಿಜಯನನ್ನ ರೈಲ್ವೆ ತಡೆಗೋಡೆ ಹತ್ತಿರ ತಡೆದು ಜಗಳ ತೆಗೆದ ದುಷ್ಕರ್ಮಿಗಳು, ಮಾರಕಾಸ್ತ್ರ, ಕಲ್ಲು ಕಟ್ಟಿಗೆಯಿಂದ ಮಾರಣಾಂತಿಕ ಹಲ್ಲೆ ಮಾಡಿ ಪರಾರಿಯಾಗಿದ್ದಾರೆ. ತೀವ್ರ ರಕ್ತಸ್ರಾವದಿಂದ ಬಳಲಿದ ಯುವಕ ಸ್ಥಳದಲ್ಲಿಯೇ ವಿಲವಿಲ ಒದ್ದಾಡಿ ಸಾವನ್ನಪ್ಪಿದ್ದಾನೆ‌‌.ಕೊಲೆ ಪ್ರಕರಣದಿಂದ ವಾಡಿ ಪಟ್ಟಣದಲ್ಲಿ ಆತಂಕದ ಛಾಯೆ ಆವರಿಸಿದೆ. ಯುವಕನ ಕುಟುಂಬಸ್ಥರ ಅಕ್ರಂದನ ಮುಗಿಲು ಮುಟ್ಟಿದೆ. ಇನ್ನು ಸ್ಥಳಕ್ಕೆ ಭೇಟಿ ನೀಡಿ ಪರೀಶಿಲನೆ ಮಾಡಿದ ಪೊಲೀಸರು ಹಂತಕರ ಶೋಧಕಾರ್ಯ ಆರಂಭಿಸಿದ್ದಾರೆ. ಘಟನಾ ಸ್ಥಳಕ್ಕೆ ಎಸ್ ಪಿ ಇಶಾ ಪಂಥ ಭೇಟಿ ನೀಡಿ ಪರಿಸ್ಥಿತಿ ವಿಚಾರಿಸಿದ್ದಾರೆ. ಮುಂಜಾಗ್ರತಾ ಕ್ರಮವಾಗಿ ಪಟ್ಟದ ಸುತ್ತಲೂ ಬಿಗಿ ಪೋಲಿಸ್ ಭದ್ರತೆಯನ್ನು ಕೈಗೊಳ್ಳಲಾಗಿದೆ.ಘಟನೆ ಸಂಬಂಧ ವಾಡಿ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದ್ದು, ಕೊಲೆ ಕೇಸ್‌ನ ಕುರಿತು ತನಿಖೆ ಆರಂಭಿಸಿದ ಪೋಲಿಸರು ಹಂತಕರ ಹೆಡೆಮುರಿ ಕಟ್ಟಲು ಮಾಹಿತಿ ಕಲೆ ಹಾಕುತ್ತಿದ್ದಾರೆ. ಒಟ್ಟಿನಲ್ಲಿ ಪ್ರೀತಿಸಿದ ತಪ್ಪಿಗೆ ಯುವಕ ಬರ್ಬರವಾಗಿ ಹತ್ಯೆಯಾಗಿದ್ದರೆ, ಇತ್ತ ಇದ್ದ ಒಬ್ಬ ಮಗನನ್ನು ಕಳೆದುಕೊಂಡ ತಾಯಿ ಅನಾಥಳಾಗಿ ಕಣ್ಣಿಡುತ್ತಿದ್ದಾಳೆ.

Related Articles

Leave a Reply

Your email address will not be published. Required fields are marked *

Back to top button